ಬೆಂಬಲ ಬೆಲೆಯಲ್ಲಿ ತಕ್ಷಣ ತೊಗರಿ ಖರೀದಿ ಕೇಂದ್ರ ಆರಂಭಿಸಿ : ತೇಲ್ಕೂರ

ಕಲಬುರಗಿ,ಡಿ.12: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದರಿಂದ ರಾಜ್ಯ ಸರ್ಕಾರ ಮೀನಾ ಮೇಷ ಏಣಿಸದೇ ಈ ಕೂಡಲೇ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಮಾಜಿ ಶಾಸಕ, ರಾಜಕುಮಾರ ಪಾಟೀಲ್ ತೇಲ್ಕೂರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೇಂದ್ರ ಸರ್ಕಾರ ಪ್ರಸಕ್ತವಾಗಿ ತೊಗರಿ ಖರೀದಿಗೆ ಒಪ್ಪಿಗೆ ನೀಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿ ಕೇಂದ್ರ ಸರ್ಕಾರ 9.67 ಲಕ್ಷ ಮೆಟ್ರಿಕ್ ಟನ್ ತೊಗರಿ ಖರೀದಿಗೆ ಕೇಂದ್ರ ಅನುಮತಿ ನೀಡಿದ್ದನ್ನು ಸ್ವಾಗತಿಸಿದ್ದಾರೆ. ಕೇಂದ್ರದ ಅನುಮತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಿನಿಂದಲೇ ರೈತರ ನೊಂದಣಿ ಪ್ರಕ್ರಿಯೆ ಆರಂಭಿಸಿ ವಾರದೊಳಗೆ ತೊಗರಿ ಖರೀದಿ ಶುರು ಮಾಡಬೇಕೆಂದಿದ್ದಾರೆ.
ಅತಿವೃಷ್ಟಿ ಯಿಂದ ತೊಗರಿ ಬೆಳೆ ಹಾನಿಯಾಗಿ ಅಲ್ಲಲ್ಲಿ ಅಲ್ಪ ಸ್ವಲ್ಪ ಬೆಳೆ ಉಳಿದು ರಾಶಿಯಾಗುತ್ತಿದೆ. ಆದರೆ ಮಾರುಕಟ್ಟೆಯಲ್ಲಿ ಬೆಂಬಲ ಬೆಲೆಗಿಂತ ಕಡಿಮೆವಿದ್ದು, ಕ್ವಿಂಟಾಲ್ ತೊಗರಿಗೆ ಕೇವಲ 7000 ರೂ. ದರದಲ್ಲಿ ಮಾರಾಟವಾಗುತ್ತಿದೆ. ರೈತರಿಗೆ ಕ್ವಿಂಟಾಲ್ ಗೆ 9000 ರೂ. ದರದಲ್ಲಿ ಖರೀದಿ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ ಜತೆಗೆ ಮಾರುಕಟ್ಟೆಯಲ್ಲೂ ದರ ಹೆಚ್ಚಳಕ್ಕೆ ಕಾರಣವಾಗುತ್ತದೆ. ಹೀಗಾಗಿ ರಾಜ್ಯ ಸರ್ಕಾರ ಪ್ರತಿ ಕ್ವಿಂಟಾಲ್ ಗೆ ಸಾವಿರ ರೂ ಪೆÇ್ರೀತ್ಸಾಹ ಧನ ನಿಗದಿ ಮಾಡಿ ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿ ಪ್ರಾರಂಭಿಸಬೇಕು. ಕೇಂದ್ರದ ಬೆಂಬಲ ಬೆಲೆ ಕ್ವಿಂಟಾಲ್ ಗೆ 8 ಸಾವಿರ ರೂ ಇದ್ದು, ರಾಜ್ಯ ಸರ್ಕಾರ 1 ಸಾವಿರ ರೂ ಪೆÇ್ರೀತ್ಸಾಹ ಧನ ನಿಗದಿ ಮಾಡಿದರೆ ಕ್ವಿಂಟಾಲ್ ಗೆ 9 ಸಾವಿರ ರೂ ದರದಲ್ಲಿ ಖರೀದಿ ಮಾಡಿದರೆ ರೈತರಿಗೆ ಅನುಕೂಲವಾಗುತ್ತದೆ ಎಂದು ತೇಲ್ಕೂರ ಆಗ್ರಹಿಸಿದ್ದಾರೆ.
ಪ್ರಸಕ್ತವಾಗಿ ಅತಿವೃಷ್ಟಿಯಿಂದ ಬೆಳೆಗಳು ಹಾಳಾಗಿ ರೈತ ತೊಂದರೆಯಲ್ಲಿರುವುದು ಎಲ್ಲರಿಗೂ ತಿಳಿದ ವಿಷಯ. ಹೀಗಾಗಿ ಸರ್ಕಾರ ಇಷ್ಟೊತ್ತಿಗೆ ಬೆಳೆ ಹಾನಿ ಪರಿಹಾರವನ್ನು ಸಂಪೂರ್ಣವಾಗಿ ರೈತರ ಖಾತೆಗೆ ಜಮಾ ಮಾಡಬೇಕಿತ್ತು. ಮೂರು ಇಲ್ಲವೇ ಆರೇಳು ಸಾವಿರ ರೂ ಮಾತ್ರ ಹಾಕಲಾಗಿದೆ. ಎನ್ ಡಿಆರ್ ಎಫ್ ನಿಯಮಾವಳಿ ಅಡಿ ಪ್ರತಿಯೊಬ್ಬ ರೈತರಿಗೆ ಕೇಂದ್ರ ಸರ್ಕಾರದವೇ ಹೆಕ್ಟೇರ್ ಗೆ 8500 ರೂ. ನಂತೆ ಎರಡು ಹೆಕ್ಟೇರ್ ಸೇರಿ 17000 ರೂ ನೀಡಲಾಗುತ್ತದೆ. ಅದರ ಜತೆಗೆ ರಾಜ್ಯ ಸರ್ಕಾರದ್ದು ಸೇರಿದರೆ 34000 ರೂ. ಆಗುತ್ತದೆ. ಆದ್ದರಿಂದ ಪ್ರತಿ ರೈತಗೆ 34 ಸಾವಿರ ರೂ ಪರಿಹಾರ ನೀಡಬೇಕು. ಇಲ್ಲದಿದ್ದರೆ ರಾಜ್ಯ ಸರ್ಕಾರದ ಬೊಕ್ಕಸ್ ಖಾಲಿಯಾಗಿದೆ ಎಂಬುದಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಂದಿದ್ದಾರೆ.ಪ್ರಸಕ್ತವಾಗಿ ಕೇಂದ್ರದ ಪ್ರಧಾನ ಮಂತ್ರಿ ಫಸಲು ವಿಮಾ ಯೋಜನೆ ಅಡಿ ಅತಿ ಹೆಚ್ಚಿನ ರೈತರು ಬೆಳೆವಿಮೆ ಮಾಡಿಸಿದ್ದಾರೆ. ಹೀಗಾಗಿ ತೊಗರಿ ಬೆಳೆ ಹಾಳಾಗಿದ್ದರಿಂದ ನೂರಕ್ಕೆ ನೂರಷ್ಟು ಬೆಳೆ ವಿಮೆ ದೊರಕುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾಡಳಿತ ಮುಂದಾಗಬೇಕು. ಕನಿಷ್ಠ ಸಾವಿರ ಕೋ.ರೂ. ಯಾದರೂ ಜಿಲ್ಲೆಯ ರೈತರಿಗೆ ಬೆಳೆವಿಮೆ ದೊರಕಬೇಕೆಂದಿದ್ದಾರೆ


ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರು ಮಾತೆತ್ತಿದರೆ ಕೇಂದ್ರದ ದತ್ತ ಬೊಟ್ಟು ಮಾಡುತ್ತಾರೆ. ಆದರೆ ಕೇಂದ್ರ ಸರ್ಕಾರವೇ 9. 67 ಮೆಟ್ರಿಕ್ ಟನ್ ತೊಗರಿ ಬೇಳೆ ಖರೀದಿಗೆ ಅನುಮತಿ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರದಿಂದ ಪ್ರತಿ ಕ್ವಿಂಟಾಲ್ ಗೆ 1 ಸಾವಿರ ರೂ ಪೆÇ್ರೀತ್ಸಾಹ ಧನ ನಿಗದಿ ಮಾಡಿ ಈ ಕೂಡಲೇ ಖರೀದಿ ಕೇಂದ್ರಗಳನ್ನು ಆರಂಭಿಸುವ ಮುಖಾಂತರ ರೈತರಿಗೆ ಸ್ಪಂದಿಸಲಿ.
-ರಾಜಕುಮಾರ ಪಾಟೀಲ್ ತೇಲ್ಕೂರ , ಮಾಜಿ ಶಾಸಕರು ಸೇಡಂ