
ಬೆಂಗಳೂರು, ನ. ೪- ನಗರದ ವೈಟ್ಫೀಲ್ಡ್ನ ಅಜ್ಜಗೊಂಡನಹಳ್ಳಿಯಲ್ಲಿ ಶ್ರೀ ಮಂಜುನಾಥೇಶ್ವರ ಸ್ವಾಮಿಯ ನೂತನ ದೇವಾಲಯವನ್ನು ಇತ್ತೀಚೆಗೆ ತುಮಕೂರಿನ ನೊಣವಿನ ಕೆರೆಯ ಅಜ್ಜಯ್ಯ ಸ್ವಾಮಿ ಡಾ. ಕರಿವೃಷಭ ದೇಶಿಕೇಂದ್ರ ಶಿವ ಯೋಗೀಶ್ವರ ಮಹಾಸ್ವಾಮಿಗಳು ಉದ್ಘಾಟಿಸಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರತ್ ಬಚ್ಚೇಗೌಡರವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಚಿವ ಬೈರತಿ ಸುರೇಶ್, ಶಾಸಕರಾದ ಮಂಜುಳ ಅರವಿಂದ ಲಿಂಬಾವಳಿ, ಎಸ್.ಆರ್. ವಿಶ್ವನಾಥ್, ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ಮಾಜಿ ಸಚಿವ ಆರ್. ಕೃಷ್ಣಪ್ಪ, ಸಿಂಗನಾಯಕನಹಳ್ಳಿ ರೈತ ಸೇವಾ ಸಂಘದ ಅಧ್ಯಕ್ಷೆ ಡಾ. ವಾಣಿಶ್ರೀ ವಿಶ್ವನಾಥ್, ಕರ್ನಾಟಕ ಚಿತ್ರಕಲಾ ಪರಿಷತ್ ಉಪಾಧ್ಯಕ್ಷ ಎ. ರಾಮಕೃಷ್ಣಪ್ಪ, ಬಿಬಿಎಂಪಿ ಮಾಜಿ ಸದಸ್ಯ ಸಿ.ಆರ್. ಜಯಪ್ಪರೆಡ್ಡಿ, ಸಿಂಡಿಕೇಟ್ ಬ್ಯಾಂಕ್ನ ಎಜಿಎಂ, ಎನ್. ಶ್ರೀನಿವಾಸ್ ಹಾಗೂ ದೇವಸ್ಥಾನದ ಅಧ್ಯಕ್ಷ ಕೆ.ಎನ್. ರಮೇಶ್ ಹಾಗೂ ಟ್ರಸ್ಟಿಗಳು ಉಪಸ್ಥಿತರಿದ್ದರು.
























