Home ಜಿಲ್ಲೆ ಕಲಬುರಗಿ 8 ಕೋಟಿ ವೆಚ್ಚದ ಸರಕಾರಿ ಪಾಲಟೆಕ್ನಿಕ್ ಕಾಲೇಜು ಹಾಗೂ5.26 ಕೋಟಿ ವೆಚ್ಚದ ಪ್ರಥಮ ದರ್ಜೆ ಕಾಲೇಜು...

8 ಕೋಟಿ ವೆಚ್ಚದ ಸರಕಾರಿ ಪಾಲಟೆಕ್ನಿಕ್ ಕಾಲೇಜು ಹಾಗೂ5.26 ಕೋಟಿ ವೆಚ್ಚದ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ಉದ್ಫಾಟನೆ

ಕಲಬುರಗಿ: ಆಳಂದ ಕಾಲೇಜು ಆವರಣದಲ್ಲಿ 2017-18ನೇ ಸಾಲಿನ ತಾಂತ್ರಿಕ ಶಿಕ್ಷಣ ಯೋಜನೆ ಅಡಿಯಲ್ಲಿ 8 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ನೂತನ ಕಟ್ಟಡ ಹಾಗೂ ಕಾಲೇಜು ಶಿಕ್ಷಣ ಇಲಾಖೆಯ 2023-24 ನೇ ಸಾಲಿನ ಕೆ.ಕೆ.ಆರ್.ಡಿ.ಬಿ. (ಮ್ಯಾಕ್ರೋ/ಮೈಕ್ರೋ) ಯೋಜನೆ ಅಡಿಯಲ್ಲಿ 5.26 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡವನ್ನು ಉನ್ನತ ಶಿಕ್ಷಣ ಸಚಿವರಾದ ಬಸವರಾಜ ರಾಯರೆಡ್ಡಿ ಅವರು ರಿಬ್ಬನ್ ಕಟ್ ಮಾಡುವ ಮೂಲಕ ಉದ್ಘಾಟಿಸಿದರು.

ರಾಜ್ಯದ ಒಟ್ಟು 4.48 ಲಕ್ಷ ಕೋಟಿ ಮೊತ್ತದ ಬಜೆಟ್‍ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 55,000 ಕೋಟಿ (ಶೇ. 11.6) ಮೀಸಲಿಡಲಾಗಿದೆ. ಗುಣಮಟ್ಟದ ಶಿಕ್ಷಣಕ್ಕಾಗಿ ರಾಜ್ಯದ ವಿವಿಧ ಕಾಲೇಜುಗಳಲ್ಲಿರುವ 1000 ಬೋಧಕ ಹುದ್ದೆಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ 1000 ಪ್ರಾಧ್ಯಾಪಕ ಹಾಗೂ 320 ಪ್ರಾಂಶುಪಾಲರ ಹುದ್ದೆಗಳನ್ನು ಮೆರಿಟ್ ಆಧಾರದ ಮೇಲೆ ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ತಿಳಿಸಿದರು.

ಕಾಲೇಜುಗಳಲ್ಲಿ ಖಾಲಿ ಇರುವ 320 ಪ್ರಾಂಶುಪಾಲರ ಹುದ್ದೆ, ಪಾಲಿಟೆಕ್ನಿಕ್ ಕಾಲೇಜುಗಳಿಗೆ 800 ಹುದ್ದೆ, ಮತ್ತು ಯೂನಿವರ್ಸಿಟಿಗಳಿಗೆ ಪೆÇ್ರಫೆಸರ್‍ಗಳು ಉಪನ್ಯಾಸಕರು ಸೇರಿದಂತೆ 1000 ಹುದ್ದೆಗಳನ್ನು ಯಾವುದೇ ಕರಪ್ಷನ್ ಇಲ್ಲದೆ ನೇರವಾಗಿ ಮೆರಿಟ್ ಆಧಾರದ ಮೇಲೆ ನೇಮಕ ಮಾಡಲಾಗುವುದು.

ನಮ್ಮ ಸರ್ಕಾರದ ಬದ್ಧತೆಯಿಂದಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಪ್ರತಿವರ್ಷ 5,000 ಕೋಟಿ ಅನುದಾನ ನೀಡಲಾಗುತ್ತಿದ್ದು, ಆರ್ಟಿಕಲ್ 371(ಜೆ) ಅನುμÁ್ಠನದಿಂದ ಈ ಭಾಗದ ಯುವಕರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ದೊಡ್ಡ ಪ್ರಮಾಣದ ಮೀಸಲಾತಿ ಸಿಗುತ್ತಿದೆ. ಪಿಡಬ್ಲ್ಯೂಡಿ ಅಪೆಂಡಿಕ್ಸ್ ಅಡಿಯಲ್ಲಿ 50 ಕೋಟಿ, ಎಚ್‍ಎಚ್‍ಡಿಪಿ ಅಡಿಯಲ್ಲಿ 50 ಕೋಟಿ, ಗ್ರಾಮೀಣ ಅಭಿವೃದ್ಧಿ ಇಲಾಖೆಯಿಂದ ರಸ್ತೆ ಹಾಗೂ ಗ್ರಾ.ಪಂ. ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುತ್ತಿದೆ ಎಂದರು.

ಇದಕ್ಕೂ ಮುನ್ನ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಕಲಬುರಗಿ ಸಂಯುಕ್ತ ಆಶ್ರಯದಲ್ಲಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಲಬುರಗಿ ಇವರ ಸಹಭಾಗಿತ್ವದಲ್ಲಿ ಆಳಂದ ಟೌನ್‍ನಲ್ಲಿ 5 ಕೋಟಿ ರೂ. ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ (ಃಅWಆ 2076) ನಿರ್ಮಾಣಕ್ಕಾಗಿ ಅಡಿಗಲ್ಲು ಸಮಾರಂಭವು ನೆರವೇರಿಸಿದರು.

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನೆ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ್ ಮಾತನಾಡಿ, ಆಳಂದ ತಾಲೂಕಿನಲ್ಲಿ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅವರ ನೇತೃತ್ವದಲ್ಲಿ ಜಂಟಿ ಕಾಲೇಜು ಕಟ್ಟಡಗಳ ಉದ್ಘಾಟನಾ ಸಮಾರಂಭವು ನೆರವೇರಿತು. ಅಂದು ಎರಡು ಕಾಲೇಜುಗಳನ್ನು ಮಂಜೂರು ಮಾಡಿಸಿ, ಹಿಂದಿನ ಸರ್ಕಾರದ ಅವಧಿಯಲ್ಲಿ ಕಳಪೆಯಾಗಿದ್ದ ಕಟ್ಟಡಗಳನ್ನು ಸರಿಪಡಿಸಿ, ಪ್ರಸ್ತುತ ಹೊಸದಾಗಿ ಅತ್ಯುತ್ತಮ ಕಟ್ಟಡಗಳನ್ನು ನಿರ್ಮಿಸಿ ಲೋಕಾರ್ಪಣೆ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.

ಬೀದರ ಲೋಕಸಭಾ ಸಂಸಾದರಾದ ಸಾಗರ ಈಶ್ವರ ಖಂಡ್ರೆ ಅತಿಥಿಗಳಾಗಿ ಮಾತನಾಡಿ, ಅಭಿವೃದ್ಧಿ ಮತ್ತು ಶಿಕ್ಷಣ: ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳು, ಕಾಲೇಜುಗಳ ನಿರ್ಮಾಣ ಹಾಗೂ ಉತ್ತಮ ಸಿಬ್ಬಂದಿ ನೇಮಕಾತಿಯ ಅವಶ್ಯಕತೆಯಿದೆ. ಈಗಾಗಲೇ ಬರಗಾಲ ಘೋಷಣೆಯಾಗಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಸಂತ್ರಸ್ತರಿಗೆ ಸೂಕ್ತ ಪರಿಹಾರ ಮತ್ತು ವಿಮೆ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ವಿಧಾನ ಪರಿಷತ್ ಶಾಸಕ ತಿಪ್ಪಣಪ್ಪ ಕಮಕನೂರ ಮಾತನಾಡಿ, ರಾಜ್ಯ ರಾಜಕಾರಣದಲ್ಲಿ ಎಂಟು ಬಾರಿ ಶಾಸಕರು, ಸಂಸದರು ಹಾಗೂ ಮಂತ್ರಿಯಾಗಿ ಸೇವೆ ಸಲ್ಲಿಸಿರುವ ಬಸವರಾಜ ರಾಯರೆಡ್ಡಿ ಅವರ ಆಡಳಿತಾತ್ಮಕ ಅನುಭವ ಮತ್ತು ಕೊಡುಗೆ ಅಪಾರ ಎಂದು ಬಣ್ಣಿಸಿದರು. ಸಿದ್ದರಾಮಯ್ಯನವರ ನೇತೃತ್ವದ ಬಜೆಟ್‍ಗಳಲ್ಲಿ ರಾಯರೆಡ್ಡಿಯವರ ಪಾತ್ರ ದೊಡ್ಡದಿದೆ ಎಂದು ತಿಳಿಸುತ್ತಾ, ಆಳಂದ ಕ್ಷೇತ್ರದ ಶಾಸಕ ಬಿ.ಆರ್. ಪಾಟೀಲ್ ಅವರು ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳನ್ನು ಕೊಂಡಾಡಿದರು. ಕಲಬುರಗಿ ಜಿಲ್ಲೆಯಲ್ಲಿ ಅತಿ ಹೆಚ್ಚು ಶಿಕ್ಷಣ ಸಂಸ್ಥೆಗಳನ್ನು ತರುವ ಮೂಲಕ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಶಿಕ್ಷಣದ ಕನಸನ್ನು ನನಸು ಮಾಡಲು ಬಿ.ಆರ್. ಪಾಟೀಲ್ ಮತ್ತು ಪ್ರಿಯಾಂಕ್ ಖರ್ಗೆ ಶ್ರಮಿಸುತ್ತಿದ್ದಾರೆ ಎಂದು ಪ್ರಶಂಸಿಸಿದರು. ಅಲ್ಲದೆ, ಕಷ್ಟದ ಕಾಲದಲ್ಲೂ ಸುಮಾರು 650 ಕೋಟಿಗೂ ಅಧಿಕ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿರುವ ಬಿ.ಆರ್. ಪಾಟೀಲ್ ಅವರ ಕಾರ್ಯವೈಖರಿಯನ್ನು ಸಭೆಯಲ್ಲಿ ಸ್ಮರಿಸಲಾಯಿತು.

ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಪ್ರಕಾಶ್ ಬುರೆ ಪ್ರಸ್ತಾವಿಕವಾಗಿ ಮಾತನಾಡಿ, ಸುಮಾರು 240 ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ತಾಂತ್ರಿಕ ಶಿಕ್ಷಣವನ್ನು ಕಡಿಮೆ ವೆಚ್ಚದಲ್ಲಿ ಒದಗಿಸುವ ಮೂಲಕ ಗ್ರಾಮೀಣ ಪ್ರದೇಶದ ಬಡ ಮಕ್ಕಳ ಭವಿಷ್ಯ ರೂಪಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದರು.

ಇದೇ ಸಂದರ್ಭಧಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಪಂಡಿತ ಬೆಳಮಗಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಡಾ. ವಿ ಅಶೋಕ್, ತಹಸೀಲ್ದಾರ್ ಅಣ್ಣಾರಾವ ಪಾಟೀಲ್, ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೇಮಿಳಾ ಅಂಬರಾಯ, ಸಿದ್ಧರಾಮ ಪ್ಯಾಟಿ, ಗುರುಶರಣ್ ಪಾಟೀಲ್, ಸೈಯದ ಮಜರ್ ಹುಸೇನ್, ಸುಭಾμï ಮುರುಡ, ಸಲಾಮ್ ಸಗರಿ, ನಾಗೇಂದ್ರಪ್ಪ ತಂಬೆ, ರಾಜಶೇಖರ ಪಾಟೀಲ, ಸುನೀಲಗೌಡ ಪಾಟೀಲ್, ಬಸವರಾಜ ಪವಾಡಶೆಟ್ಟಿ, ದಶವಂತ ಸೇರಿದಂತೆ ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.