Home ಜಿಲ್ಲೆ ಪ್ರಯೋಗಾಲಯ ಕಟ್ಟಡ ಉದ್ಘಾಟನೆ

ಪ್ರಯೋಗಾಲಯ ಕಟ್ಟಡ ಉದ್ಘಾಟನೆ

ಗದಗ.ಸೆ.೧೫: ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸಚಿವರಾದ ಯು.ಟಿ. ಖಾದರ್ ಅವರು ಗದುಗಿನ ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆವರಣದಲ್ಲಿ ನಿರ್ಮಿಸಲಾದ ಸಂಯೋಜಿತ ಸಾರ್ವಜನಿಕ ಆರೋಗ್ಯ ಪ್ರಯೋಗಾಲಯದ ಕಟ್ಟಡ ಉದ್ಘಾಟನೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಶಾಸಕ ಡಾ. ಎಚ್ ಕೆ ಪಾಟೀಲ, ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಿತುನ್ ಎಚ್ ಎನ್, ಅಪರ ಜಿಲ್ಲಾಧಿಕಾರಿ ಡಾ ದುರಗೇಶ್ ಕೆ ಆರ್, ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಬಸವರಾಜ ಬೊಮ್ಮನಹಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಎಸ್ ಎಸ್ ನೀಲಗುಂದ, ಡಾ. ಕರಿಗೌಡ್ರ ಸೇರಿದಂತೆ ಇತರರು ಇದ್ದರು.