
ಅರಸೀಕೆರೆ, ಅ. ೨೯- ತಾಲ್ಲೂಕಿನ ಕಣಕಟ್ಟೆ ಹೋಬಳಿಯ ದೊಡ್ಡಮೇಟಿಕುರ್ಕೆ ಗ್ರಾಮದ ಶ್ರೀ ಬೂದಿಹಾಳ್ ವಿರಕ್ತ ಮಠದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮತ್ತು ಶ್ರೀ ರಾಜಶೇಖರ ಸ್ವಾಮೀಜಿ ರವರ ಗದ್ದಿಗೆ ಪ್ರಾರಂಭೋತ್ಸವ ಮತ್ತು ಕಳಸಾರೋಹಣ ಕಾರ್ಯಕ್ರಮ ಎರಡು ದಿನಗಳ ಕಾಲ ನಡೆಯಿತು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ರಂಭಾಪುರಿ ಶ್ರೀಗಳಾದ ಡಾ. ವೀರಸೋಮೇಶ್ವರ ಶಿವಾಚಾರ್ಯ ವಹಿಸಿದ್ದರು. ಬೂದಿಯಾಳ್ ವಿರಕ್ತ ಮಠದ ಶ್ರೀ ಶಶಿಶೇಖರ ಸಿದ್ಧಬಸವ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಶ್ರೀ ಮಠದ ನೂತನ ಕಟ್ಟಡವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಶಿವಲಿಂಗೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ಧೇಶ್, ನಾಗೇಂದ್ರ, ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಬಿಜೆಪಿ ಮುಖಂಡರಾದ ಜಿವಿಟಿಬಸವರಾಜು, ಮರಿಸ್ವಾಮಿ, ಮಲ್ಲಿಕಾರ್ಜುನ್, ಜಯದೇವ್, ನಿರ್ವಾಣಸ್ವಾಮಿ ಮತ್ತಿತರರು ಭಾಗವಹಿಸಿದ್ದರು.

































