Home ಜಿಲ್ಲೆ ಕಲಬುರಗಿ ಶರಣಬಸವ ವಿವಿಯಲ್ಲಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಸಂಶೋಧನಾ, ನಾವೀನ್ಯತೆ ಮತ್ತು ಉದ್ಯಮಶೀಲತಾ ಕೇಂದ್ರ ಉದ್ಘಾಟನೆ

ಶರಣಬಸವ ವಿವಿಯಲ್ಲಿ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಸಂಶೋಧನಾ, ನಾವೀನ್ಯತೆ ಮತ್ತು ಉದ್ಯಮಶೀಲತಾ ಕೇಂದ್ರ ಉದ್ಘಾಟನೆ

ಕಲಬುರಗಿ: ಮುಗುಳಖೋಡ ಜಿಡಗಾ ಮಠದ ಪೀಠಾಧಿಪತಿ ಪೂಜ್ಯ ಡಾ. ಮುರುಘರಾಜೇಂದ್ರ ಮಹಾಸ್ವಾಮೀಜಿ ಅವರು ಶರಣಬಸವ ವಿಶ್ವವಿದ್ಯಾಲಯದಲ್ಲಿ ಸಂಪೂರ್ಣ ಸುಸಜ್ಜಿತವಾಗಿ ನಿರ್ಮಿಸಲಾಗಿರುವ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಸಂಶೋಧನಾ, ನಾವೀನ್ಯತೆ ಮತ್ತು ಉದ್ಯಮಶೀಲತಾ ಕೇಂದ್ರವನ್ನು ಮಂಗಳವಾರ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ 200ಕ್ಕೂ ಅಧಿಕ ಅತ್ಯಾಧುನಿಕ ಕಂಪ್ಯೂಟರ್‍ಗಳು ಹಾಗೂ ಉನ್ನತ ಮಟ್ಟದ ವ್ಯವಸ್ಥೆಗಳನ್ನು ಹೊಂದಿರುವ ನವೀಕೃತ ಕಂಪ್ಯೂಟರ್ ಕೇಂದ್ರಗಳನ್ನೂ ಉದ್ಘಾಟಿಸಲಾಯಿತು.
ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪಸಭಾ ಮಂಟಪದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಹಾಗೂ ಇಂಜಿನಿಯರ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ನೂತನ ಸೌಲಭ್ಯಗಳನ್ನು ಉದ್ಘಾಟಿಸಿ ಮಾತನಾಡಿದ ಪೂಜ್ಯ ಡಾ. ಮುರುಘರಾಜೇಂದ್ರ ಮಹಾಸ್ವಾಮೀಜಿ, ನೂತನ ಸೌಲಭ್ಯಗಳು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಸಂಶೋಧನಾ ಚಟುವಟಿಕೆಗಳಿಗೆ ಮತ್ತಷ್ಟು ಉತ್ತೇಜನ ನೀಡಲಿವೆ. ಸಂಶೋಧನಾ ಉತ್ಕøಷ್ಟತಾ ಕೇಂದ್ರಕ್ಕೆ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿಗಳಾಗಿದ್ದ ಲಿಂಗೈಕ್ಯ ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಹೆಸರಿಟ್ಟಿರುವುದು ಅತ್ಯಂತ ಸೂಕ್ತವಾಗಿದೆ. ಕಲಬುರಗಿ ಭಾಗದ ಶೈಕ್ಷಣಿಕ ಸಬಲೀಕರಣಕ್ಕೆ ಡಾ. ಅಪ್ಪಾಜಿ ಅವರು ಅಪಾರ ಕೊಡುಗೆ ನೀಡಿದ್ದಾರೆ. ಅವರ ಪ್ರಯತ್ನಗಳಿಲ್ಲದಿದ್ದರೆ ಈ ಪ್ರದೇಶ ಇಂದಿಗೂ ಶೈಕ್ಷಣಿಕವಾಗಿ ಹಿಂದೆ ಉಳಿಯುತ್ತಿತ್ತು ಎಂದು ಅಭಿಪ್ರಾಯಪಟ್ಟರು.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಡಿಯಲ್ಲಿ ನಡೆಯುತ್ತಿರುವ ಶಿಕ್ಷಣ ಸಂಸ್ಥೆಗಳು ಕಲಬುರಗಿ ಭಾಗದ ಸಾವಿರಾರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಕಲ್ಪಿಸಿವೆ. ಇಲ್ಲಿ ಶಿಕ್ಷಣ ಪಡೆದವರು ದೇಶದ ವಿವಿಧ ಭಾಗಗಳಲ್ಲಿ ಹಾಗೂ ವಿಶ್ವದಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಉನ್ನತ ವೃತ್ತಿಪರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹಸಿದವರಿಗೆ ಅನ್ನ ನೀಡುವ ದಾಸೋಹದ ತತ್ವದೊಂದಿಗೆ, ಜ್ಞಾನದ ದಾಹ ಹೊಂದಿರುವ ಅಗತ್ಯವಂತರಿಗೆ ಜ್ಞಾನ ದಾಸೋಹ ನೀಡುವ ವಿಶಿಷ್ಟ ಪರಂಪರೆಯನ್ನು ಸಂಘವು ಬೆಳೆಸಿದೆ. ಶಿಕ್ಷಣ ಸಂಸ್ಥೆಗಳ ಸರಣಿಯನ್ನು ಹಾಗೂ ಶರಣಬಸವ ವಿಶ್ವವಿದ್ಯಾಲಯವನ್ನು ಸ್ಥಾಪಿಸುವ ಮೂಲಕ ಶೈಕ್ಷಣಿಕವಾಗಿ ಹಿಂದುಳಿದ ಕಲಬುರಗಿ ಭಾಗದ ಸಾವಿರಾರು ವಿದ್ಯಾರ್ಥಿಗಳಿಗೆ ವೃತ್ತಿಪರ ಶಿಕ್ಷಣದ ಹೊಸ ಅವಕಾಶಗಳನ್ನು ಕಲ್ಪಿಸಿದೆ ಎಂದು ಡಾ. ಮುರುಘರಾಜೇಂದ್ರ ಮಹಾಸ್ವಾಮೀಜಿ ಹೇಳಿದರು.
ಪೂಜ್ಯ ಡಾ. ಶರಣಬಸವಪ್ಪ ಅಪ್ಪಾಜಿ ಅವರ ಪ್ರಮುಖ ಕೊಡುಗೆಗಳಲ್ಲಿ ಒಂದಾದ, 12ನೇ ಶತಮಾನದ ಸಮಾಜ ಸುಧಾರಕ ಮಹಾತ್ಮ ಬಸವೇಶ್ವರರ ಅಶ್ವಾರೂಢ ಪ್ರತಿಮೆಯನ್ನು ನವದೆಹಲಿಯ ಸಂಸತ್ ಭವನದ ಆವರಣದಲ್ಲಿ ಸ್ಥಾಪಿಸಿರುವುದು ಮಹತ್ವದ್ದಾಗಿದೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಅವರ ನಾಯಕತ್ವವನ್ನು ಶ್ಲಾಘಿಸಿದ ಅವರು, ಈ ಭಾಗದ ಜನರ ಶೈಕ್ಷಣಿಕ ಸಬಲೀಕರಣಕ್ಕಾಗಿ ಡಾ. ಅಪ್ಪಾಜಿ ಕಂಡಿದ್ದ ಎಲ್ಲ ಕನಸುಗಳನ್ನು ಸಾಕಾರಗೊಳಿಸುವ ಹಾಗೂ ಶೈಕ್ಷಣಿಕ ಸೌಲಭ್ಯಗಳನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವ ಮಹತ್ತರ ಜವಾಬ್ದಾರಿ ಡಾ. ಅವ್ವಾಜಿ ಅವರ ಹೆಗಲ ಮೇಲಿದೆ ಡಾ. ಮುರುಘರಾಜೇಂದ್ರ ಮಹಾಸ್ವಾಮೀಜಿ ತಿಳಿಸಿದರು.
ಡಾ. ಅಪ್ಪಾಜಿ ಅವರ ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಅತ್ಯಂತ ಉತ್ಸಾಹದಿಂದ ಮುನ್ನಡೆಯುತ್ತಿರುವ ಡಾ. ಅವ್ವಾಜಿ ಅವರು ಶಿಕ್ಷಣ ಸಂಸ್ಥೆಯ ವ್ಯಾಪ್ತಿಯನ್ನು ದೇಶದ ವಿವಿಧ ಭಾಗಗಳμÉ್ಟೀ ಅಲ್ಲದೆ ವಿಶ್ವದಾದ್ಯಂತ ವಿಸ್ತರಿಸುವಲ್ಲಿ ಯಶಸ್ವಿಯಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ಮಹಾಸ್ವಾಮೀಜಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಅವರು ಮಾತನಾಡಿ, ಶರಣಬಸವ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಚಟುವಟಿಕೆಗಳಿಗೆ ಡಾ. ಅಪ್ಪಾಜಿ ಅವರು ಅತ್ಯಂತ ಮಹತ್ವ ನೀಡುತ್ತಿದ್ದರು ಎಂದು ಸ್ಮರಿಸಿದರು. ಜ್ಞಾನವನ್ನು ವೃದ್ಧಿಸಿಕೊಳ್ಳಲು ಹಾಗೂ ತಮ್ಮ ಕೌಶಲ್ಯಗಳನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಳ್ಳಲು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಂಶೋಧನಾ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಅವರು ಸದಾ ಪೆÇ್ರೀತ್ಸಾಹಿಸುತ್ತಿದ್ದರು. ವಿಶ್ವವಿದ್ಯಾಲಯದಲ್ಲಿ ಮಂಗಳವಾರ ಉದ್ಘಾಟಿಸಲಾದ ನೂತನ ಸಂಶೋಧನಾ ಉತ್ಕೃಷ್ಟತಾ ಕೇಂದ್ರವು ಡಾ. ಅಪ್ಪಾಜಿ ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಹೇಳಿದರು.
ಉತ್ಕೃಷ್ಟತಾ ಕೇಂದ್ರದಲ್ಲಿ ಲಭ್ಯವಿರುವ ಸಂಶೋಧನಾ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಂಡು ವಿಶ್ವಮಟ್ಟದ ಸಂಶೋಧನೆಗಳನ್ನು ಹೊರತರಬೇಕು ಎಂದು ಡಾ. ಅವ್ವಾಜಿ ಕರೆ ನೀಡಿದರು. ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಗಿನ್ನೆಸ್ ದಾಖಲೆ ಸೇರಿದಂತೆ ವಿಶ್ವಮಟ್ಟದ ಸಂಸ್ಥೆಗಳಿಂದ ಮಾನ್ಯತೆ ಪಡೆಯುವ ನಿಟ್ಟಿನಲ್ಲಿ ಶ್ರಮಿಸಬೇಕು. ಈ ಮೂಲಕ ತಮ್ಮೊಂದಿಗೆ ವಿಶ್ವವಿದ್ಯಾಲಯಕ್ಕೂ ಕೀರ್ತಿ ತರಬೇಕು ಎಂದರು.
ಇತ್ತೀಚೆಗೆ ತಾವು ಜಿಡಗಾ ಮಠಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಮೂಲಸೌಕರ್ಯ ಅಭಿವೃದ್ಧಿ, ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಿರುವುದು ಹಾಗೂ ಅವರ ಜ್ಞಾನಾರ್ಜನೆಗೆ ಕಲ್ಪಿಸಿರುವ ಸೌಲಭ್ಯಗಳನ್ನು ಕಂಡು ಆಶ್ಚರ್ಯವಾಯಿತು ಎಂದು ಡಾ. ಅವ್ವಾಜಿ ಹೇಳಿದರು. ಶರಣಬಸವೇಶ್ವರ ಸಂಸ್ಥಾನ ಹಾಗೂ ಜಿಡಗಾ ಮಠಗಳು ಒಂದೇ ನಾಣ್ಯದ ಎರಡು ಮುಖಗಳಂತಿವೆ. ಎರಡೂ ಸಂಸ್ಥೆಗಳು ಹಸಿದವರಿಗೆ ಅನ್ನ ನೀಡುವ ದಾಸೋಹದ ಜೊತೆಗೆ ಜ್ಞಾನದ ದಾಹ ನೀಗಿಸುವ ಜ್ಞಾನ ದಾಸೋಹವನ್ನು ಮುಂದುವರಿಸುತ್ತಿವೆ.
ಕಾರ್ಯಕ್ರಮದಲ್ಲಿ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪೆÇ್ರ. ಅನಿಲಕುಮಾರ ಬಿಡವೆ ಸ್ವಾಗತಿಸಿದರು. ಪೆÇ್ರ. ನಿರುಪಮಾ ವಂದನಾರ್ಪಣೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ, ವಿಶ್ವವಿದ್ಯಾಲಯದ ಕುಲಸಚಿವರಾದ ಡಾ. ಲಕ್ಷ್ಮೀ ಪಾಟೀಲ ಮಾಕಾ, ಮೌಲ್ಯಮಾಪನ ಕುಲಸಚಿವ ಡಾ. ಎಸ್. ಎಚ್. ಹೊನ್ನಳ್ಳಿ, ಡೀನ್ ಡಾ. ಶಿವಕುಮಾರ ಜವಳಿಗಿ, ನಿರ್ದೇಶಕ ಪೆÇ್ರ. ವಿ. ಡಿ. ಮೈತ್ರಿ, ಸಂಶೋಧನಾ ಡೀನ್ ಡಾ. ಸುಜಾತಾ ಮಲ್ಲಾಪುರ, ಡಾ. ಮಲ್ಲಿಕಾರ್ಜುನ ದೇಶಮುಖ ಸೇರಿದಂತೆ ಹಲವರು ಉಪಸ್ಥಿತರಿದ್ದರು.