ಪೌರಕಾರ್ಮಿಕರ ಅನಿರ್ದಿಷ್ಟ ಮುಷ್ಕರ; ಹೋರಾಟ ಸಮಿತಿ ಬೆಂಬಲ

ಬಾದಾಮಿ,ಮೇ30: ವಿವಿಧ ಬೇಡಿಕೆಗಳ ಈಡೇರಿಗಾಗಿ ಪೌರಕಾರ್ಮಿಕರು ಹಮ್ಮಿಕೊಂಡಿರುವ ಅನಿರ್ದಿಷ್ಟ ಮುಷ್ಕರಕ್ಕೆ ಬಾದಾಮಿ ಹೋರಾಟ ಸಮಿತಿ ಬೆಂಬಲ ಸೂಚಿಸಿದೆ.


ಗುರುವಾರ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ ಹೋರಾಟ ಸಮಿತಿಯ ಅಧ್ಯಕ್ಷ ಎಂ.ಎಸ್.ಹಿರೇಹಾಳ, ಕಾರ್ಯದರ್ಶಿ ಇಷ್ಟಲಿಂಗ ನರೇಗಲ್, ಸದಸ್ಯ ಚಂದ್ರಶೇಖರ ಸೂಡಿ ಸೇರಿದಂತೆ ಪದಾಧಿಕಾರಿಗಳು ಬೆಂಬಲ ಸೂಚಿಸಿ ಸರಕಾರ ಕೂಡಲೇ ಪೌರಕಾರ್ಮಿಕರ ಸಮಸ್ಯೆ, ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದರು.

ಎಲ್ಲ ಪೌರಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸಿದ್ದು, ಸರಕಾರ ಬೇಡಿಕೆ ಈಡೇರಿಸುವವರೆಗೆ ಮುಷ್ಕರ ಹಿಂದಕ್ಕೆ ಪಡೆಯುವುದಿಲ್ಲ ಎಂದು ಎಚ್ಚರಿಕೆ ನೀಡಿದರು.