ಜೇವರ್ಗಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ, ಸಂಗೊಳ್ಳಿ ರಾಯಣ್ಣ ಜಯಂತಿ

ಕಲಬುರಗಿ : ಅ.15: ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಪ್ರೌಢಶಾಲೆ ಮತ್ತು ಮೌಲಾನಾ ಆಜಾದ್ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ದೇಶದ 79ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಂಗೊಳ್ಳಿ ರಾಯಣ್ಣನವರ ಜಯಂತಿಯನ್ನು ಆಚರಿಸಲಾಯಿತು. ಪ್ರಾಚಾರ್ಯ ರವೀಂದ್ರಕುಮಾರ ಸಿ. ಬಟಗೇರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಪ್ರೌಢಶಾಲೆ ಮುಖ್ಯ ಶಿಕ್ಷಕಿ ಶಾಂತಾಬಾಯಿ, ಮೌಲಾನಾ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮೀ ನಾಯಕ ಹಾಗೂ ಕಾಲೇಜಿನ ಉಪನ್ಯಾಸಕರು, ಶಾಲೆಗಳ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಪೂಜ್ಯ ಡಾ.ಶರಣಬಸವಪ್ಪ ಅಪ್ಪ ಅವರಿಗೆ ಮೌನಾಚರಣೆಯ ಮೂಲಕ ಶೃದ್ಧಾಂಜಲಿ ಸಲ್ಲಿಸಲಾಯಿತು.