ಬೀದರ್:ಅ.17: ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಮಹನೀಯರ ಪ್ರೇರಣೆ ಸದಾ ನಮ್ಮ ಮೇಲಿರಲಿ ಎಂದು ಬೀದರ ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ ಎಂದರು.
ಅವರಿಂದ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆಯಡಿಯಲ್ಲಿ ಬರುವ ತೋಟಗಾರಿಕೆ ಮಹಾವಿದ್ಯಾಲಯ ಬೀದರನಲ್ಲಿ ಹಮ್ಮಿಕೊಂಡಿದ್ದ 79ನೇ ಸ್ವಾತಂತ್ರೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ದೇಶದ ಏಳಿಗೆಗಾಗಿ ಹೊಸ ನಿರ್ಣಯಗಳು, ಹೊಸ ಸಾಮಥ್ರ್ಯ, ಹೊಸ ಸ್ಫೂರ್ತಿಗಳಿಗೆ ಹೋರಾಡಿದ ಮಹನೀಯರ ಪ್ರೇರಣೆಗಳೇ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿರಲಿ. ಆಧುನಿಕ ಸೌಲಭ್ಯಗಳು ಮನುಷ್ಯನನ್ನು ದಿನದಿಂದ ದಿನಕ್ಕೆ ಅನಾರೋಗ್ಯಕ್ಕೆ ಈಡು ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಯುವಜನಾಂಗವನ್ನು ಕೃಷಿಯೆಡೆಗೆ ಕರೆತಂದು, ಸಾಂಪ್ರದಾಯಿಕ ಕೃಷಿಯ ಜೊತೆಗೆ ಆಧುನಿಕ ಕೃಷಿ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಲ್ಲಿ ನಾವು ಉತ್ಸುಕತೆತೋರಬೇಕಾಗಿದೆ. ದೇಶ ನನಗೇನೂ ಮಾಡಿದೆ ಎನ್ನುವುದಕ್ಕಿಂತ ನಾನು ದೇಶಕ್ಕಾಗಿ ಏನು ಮಾಡುತ್ತಿದ್ದೇನೆ ಎಂಬುದು ಸದಾ ಎಲ್ಲರ ಹೃದಯಾಂತರಾಳದಲ್ಲಿರಬೇಕು. ದೇಶಕ್ಕಾಗಿ ಪ್ರತಿಯೊಬ್ಬರು ತಮ್ಮ ತನು, ಮನ ಮತ್ತು ಧನದಿಂದ ಯಾವುದೇ ತ್ಯಾಗಕ್ಕೂ ಸದಾ ಸಿದ್ಧವಾಗಿರಬೇಕೆಂದರು. ಪ್ರತಿಯೊಬ್ಬರು ದಕ್ಷತೆ ಹಾಗೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂದರು.
ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

























