Home ಜಿಲ್ಲೆ ಕಲಬುರಗಿ ತಾ.ಪಂ.ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ತಾ.ಪಂ.ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಲಬುರಗಿ,ಆ.16-ನಗರದ ತಾಲೂಕು ಪಂಚಾಯಿತಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ತಾಲೂಕು ಪಂಚಾಯತ್ ಆಡಳಿತ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಶೈಲೇಂದರ್ ಸಿಂಗ್ ಅವರು ಧ್ವಜಾರೋಹಣ ನೆರವೇರಿಸಿದರು.
ನಂತರ ಮಹಾತ್ಮ ಗಾಂಧೀಜಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಾನಪ್ಪ ಕಟ್ಟಿಮನಿ, ಜೈಶ್ರೀ ಕರಸಗಿ, ಕವಿತಾ ಬಡಿಗೇರ್. ಸೇರಿದಂತೆ ತಾಲೂಕು ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.