
ಗದಗ,ಜು೩೦: ಆಗಸ್ಟ್ ೧೫ರಂದು ನಡೆಯಲಿರುವ ಸ್ವಾತಂತ್ರö್ಯ ದಿನಾಚರಣೆಯನ್ನು ರಾಷ್ಟಿçÃಯ ಹಬ್ಬದ ಘನತೆಗೆ ತಕ್ಕಂತೆ ಶಿಷ್ಠಾಚಾರ ಪಾಲನೆಯೊಂದಿಗೆ ಅತ್ಯಂತ ಅರ್ಥಪೂರ್ಣವಾಗಿ, ಶಿಸ್ತುಬದ್ಧವಾಗಿ ಹಾಗೂ ಅದ್ದೂರಿಯಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಜಿಲ್ಲಾಡಳಿತದ ವಿವಿಧ ಇಲಾಖೆಗಳು ಸಮನ್ವಯದಿಂದ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನದಲ್ಲಿ ಸ್ವಾತಂತ್ರö್ಯ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸ್ವಾತಂತ್ರö್ಯ ದಿನಾಚರಣೆ ರಾಷ್ಟçದ ಗೌರವ ಹಾಗೂ ಹೆಮ್ಮೆಯ ಸಂಕೇತವಾಗಿದ್ದು, ಕಾರ್ಯಕ್ರಮದ ಪ್ರತಿಯೊಂದು ಹಂತದಲ್ಲೂ ಸರ್ಕಾರದ ಶಿಷ್ಠಾಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಹ್ವಾನ ಪತ್ರಿಕೆಗಳ ವಿನ್ಯಾಸ, ಮುದ್ರಣ, ವಿತರಣೆ, ಅತಿಥಿಗಳ ಆಸನ ವ್ಯವಸ್ಥೆ, ವೇದಿಕೆ ಸಿದ್ಧತೆ ಸೇರಿದಂತೆ ಎಲ್ಲ ವ್ಯವಸ್ಥೆಗಳು ಯಾವುದೇ ಲೋಪವಾಗದಂತೆ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.
ರಾಜ್ಯ ಸರ್ಕಾರದ ಶಿಷ್ಠಾಚಾರ ನಿಯಮಾವಳಿಯಂತೆ ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳು, ಸ್ವಾತಂತ್ರ÷?ಯ ಹೋರಾಟಗಾರರ ಕುಟುಂಬದವರು, ಹಿರಿಯ ನಾಗರಿಕರು, ವಿವಿಧ ಕ್ಷೇತ್ರಗಳ ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರಿಗೆ ಆಹ್ವಾನ ನೀಡುವ ಕಾರ್ಯವನ್ನು ಸಕಾಲದಲ್ಲಿ ಪೂರ್ಣಗೊಳಿಸಬೇಕು. ಯಾವುದೇ ಅರ್ಹ ವ್ಯಕ್ತಿ ಆಹ್ವಾನದಿಂದ ವಂಚಿತರಾಗದAತೆ ಸಂಬAಧಿಸಿದ ಅಧಿಕಾರಿಗಳು ವಿಶೇಷ ಗಮನ ಹರಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಧ್ವಜಾರೋಹಣ, ಗೌರವ ವಂದನೆ, ಪಥಸಂಚಲನ, ಸಾಂಸ್ಕöÈತಿಕ ಕಾರ್ಯಕ್ರಮ ಹಾಗೂ ಸಾರ್ವಜನಿಕರ ಆಸನ ವ್ಯವಸ್ಥೆ ಸೇರಿದಂತೆ ಪ್ರತಿಯೊಂದು ವ್ಯವಸ್ಥೆಯನ್ನು ಮುಂಚಿತವಾಗಿಯೇ ಪರಿಶೀಲಿಸಬೇಕು. ಕುಡಿಯುವ ನೀರು, ಶೌಚಾಲಯ, ವೈದ್ಯಕೀಯ ನೆರವು, ಅಗ್ನಿಶಾಮಕ ವ್ಯವಸ್ಥೆ, ತುರ್ತು ನಿರ್ಗಮನ ವ್ಯವಸ್ಥೆ ಹಾಗೂ ವಾಹನ ನಿಲುಗಡೆ ವ್ಯವಸ್ಥೆಯನ್ನು ಸಮರ್ಪಕವಾಗಿ ಕಲ್ಪಿಸುವಂತೆ ಸಂಬAಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡಿದರು.
ನಗರದ ಪ್ರಮುಖ ವೃತ್ತಗಳು, ಸರ್ಕಾರಿ ಕಚೇರಿಗಳು, ರಾಷ್ಟಿçÃಯ ನಾಯಕರ ಪ್ರತಿಮೆಗಳಿರುವ ಸ್ಥಳಗಳು ಹಾಗೂ ಕಾರ್ಯಕ್ರಮ ನಡೆಯುವ ಪ್ರದೇಶಗಳ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಪ್ರಮುಖ ರಸ್ತೆಗಳಲ್ಲಿ ಸ್ವಚ್ಛತೆ, ಹಸಿರು ನಿರ್ವಹಣೆ ಹಾಗೂ ಅಲಂಕಾರ ಕಾರ್ಯಗಳನ್ನು ಕೈಗೊಂಡು ರಾಷ್ಟಿçÃಯ ಹಬ್ಬಕ್ಕೆ ತಕ್ಕ ವಾತಾವರಣ ನಿರ್ಮಿಸಬೇಕು ಎಂದು ನಗರಸಭೆ ಹಾಗೂ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಎನ್‌ಸಿಸಿ, ಎನ್‌ಎಸ್‌ಎಸ್, ಸ್ಕೌಟ್ಸ್ ಮತ್ತು ಗೈಡ್ಸ್, ಪೊಲೀಸ್ ಹಾಗೂ ವಿವಿಧ ತಂಡಗಳ ಪಥಸಂಚಲನ ಮತ್ತು ಪಥಸಂಚಲನದ ಪೂರ್ವಾಭ್ಯಾಸವನ್ನು ನಿಗದಿತ ವೇಳಾಪಟ್ಟಿಯಂತೆ ನಡೆಸಬೇಕು. ಎಲ್ಲ ತಂಡಗಳು ಸಮಯಪ್ರಜ್ಞೆಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ಸ್ವಾತAತ್ರö್ಯ ದಿನಾಚರಣೆಯ ಅಂಗವಾಗಿ ಸಂಜೆ ವೇಳೆಯಲ್ಲಿ ಜಿಲ್ಲೆಯ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಕಲಾವಿದರಿಂದ ದೇಶಭಕ್ತಿ, ರಾಷ್ಟಿçÃಯ ಏಕತೆ, ಸಾಂಸ್ಕöÈತಿಕ ಪರಂಪರೆ ಮತ್ತು ಕನ್ನಡ ನಾಡಿನ ಸಾಂಸ್ಕöÈತಿಕ ವೈಭವವನ್ನು ಬಿಂಬಿಸುವ ವೈವಿಧ್ಯಮಯ ಸಾಂಸ್ಕöÈತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಕಾರ್ಯಕ್ರಮಗಳು ಸಾರ್ವಜನಿಕರನ್ನು ಆಕರ್ಷಿಸುವಂತೆಯೂ ರಾಷ್ಟçಭಕ್ತಿ ಮೂಡಿಸುವಂತೆಯೂ ಇರಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸ್ವಾತಂತ್ರö್ಯ ದಿನಾಚರಣೆ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದAತೆ ಹೆಸ್ಕಾಂ ಅಧಿಕಾರಿಗಳು ವಿಶೇಷ ನಿಗಾ ವಹಿಸಬೇಕು. ಕಾರ್ಯಕ್ರಮದ ಅವಧಿಯಲ್ಲಿ ನಿರಂತರ ವಿದ್ಯುತ್ ಪೂರೈಕೆ ಖಚಿತಪಡಿಸಿಕೊಳ್ಳುವುದರ ಜೊತೆಗೆ ಪರ್ಯಾಯ ವಿದ್ಯುತ್ ವ್ಯವಸ್ಥೆ, ಜನರೇಟರ್ ಹಾಗೂ ತಾಂತ್ರಿಕ ಸಿಬ್ಬಂದಿಯನ್ನು ಸನ್ನದ್ಧ ಸ್ಥಿತಿಯಲ್ಲಿ ನಿಯೋಜಿಸಬೇಕು. ಧ್ವನಿವರ್ಧಕ ವ್ಯವಸ್ಥೆ, ಬೆಳಕಿನ ವ್ಯವಸ್ಥೆ ಹಾಗೂ ಇತರೆ ವಿದ್ಯುತ್ ಉಪಕರಣಗಳ ಕಾರ್ಯಕ್ಷಮತೆಯನ್ನು ಕಾರ್ಯಕ್ರಮಕ್ಕೂ ಮುನ್ನ ಪರಿಶೀಲಿಸಿ ಯಾವುದೇ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
ಇದೇ ವೇಳೆ ಪೊಲೀಸ್ ಇಲಾಖೆ ಭದ್ರತಾ ವ್ಯವಸ್ಥೆ, ಸಂಚಾರ ನಿಯಂತ್ರಣ ಹಾಗೂ ವಾಹನ ನಿಲುಗಡೆ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಆರೋಗ್ಯ ಇಲಾಖೆ ವೈದ್ಯಕೀಯ ತಂಡ ಹಾಗೂ ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ಸಿದ್ಧವಾಗಿರಿಸಬೇಕು. ಅಗ್ನಿಶಾಮಕ ಇಲಾಖೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಪ್ರತಿಯೊಂದು ಇಲಾಖೆಯ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮಯಕ್ಕೆ ಸರಿಯಾಗಿ ನಿರ್ವಹಿಸಿ, ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸುವ ಮೂಲಕ ರಾಷ್ಟೊçÃತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಸ್ವಾತಂತ್ರ÷?ಯ ದಿನಾಚರಣೆಗೆ ಸಂಬAಧಿಸಿದAತೆ ತಮ್ಮ ಇಲಾಖೆಗಳ ಸಿದ್ಧತೆ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದ ಯಶಸ್ವಿ ಆಯೋಜನೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಅಧಿಕಾರಿಗಳು ಸಭೆಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್, ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಡಿವೈ ಎಸ್ ಪಿ ವಿದ್ಯಾನಂದ ನಾಯಕ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಬಿ.ಮಸನಾಯಕ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ, ಜಿ.ಪಂ. ಯೋಜನಾ ನಿರ್ದೇಶಕ ಎಂ.ವಿ.ಚಳಗೇರಿ, ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ ಇಂಜನೀಯರ್ ಉಮೇಶ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಶ್ರೀಮತಿ ರಾಧಾ ಮಣ್ಣೂರ, ಕಾರ್ಮಿಕ ಇಲಾಖೆ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಕನ್ನಡ ಮತ್ತು ಸಂಸ್ಕöÈತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ಶರಣು ಗೋಗೇರಿ, ತಹಶೀಲ್ದಾರರಾದ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಹೆಸ್ಕಾಂ ಅಧಿಕಾರಿ ರಾಜೇಶ ಕಲ್ಯಾಣ ಶೆಟ್ಟರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.






























