Home ಜಿಲ್ಲೆ ಕಲಬುರಗಿ ಸ್ವಾತಂತ್ರ್ಯ ದಿನಾಚರಣೆ: 15 ರಂದು ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ

ಸ್ವಾತಂತ್ರ್ಯ ದಿನಾಚರಣೆ: 15 ರಂದು ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ

ಕಲಬುರಗಿ,ಆ.13-ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಆ.15 ರಂದು ಬೆಳಿಗ್ಗೆ 7.20ಕ್ಕೆ ಭಾರತ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜರೋಹಣ ಮಾಡಲಾಗುವದು ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ತಿಳಿಸಿದ್ದಾರೆ.
ಈ ಧ್ವಜರೋಹಣ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮ/ಮಂಡಳಿ/ಪ್ರಾಧಿಕಾರದ ಅಧ್ಯಕ್ಷರು, ಮುಖಂಡರು, ಕೆಪಿಸಿಸಿ
ಹಾಗೂ ಡಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್‍ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾಯಿತ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಹಾಲಿ ಹಾಗೂ ಮಾಜಿ ಪೂಜ್ಯ ಮಹಾಪೌರರು, ಉಪ ಮಹಾಪೌರರು ಹಾಗೂ ಸದಸ್ಯರುಗಳು, ಮಹಿಳೆಯರು,
ಯುವಕರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.