
ಮುಂಬೈ, ಮೇ.14-ಮುಂಬರುವ ಶ್ರೀಲಂಕಾ, ಆಫ್ಘಾನಿಸ್ತಾನ ಹಾಗೂ ಭಾರತ ತಂಡಗಳ ನಡುವೆ ನಡೆಯಲಿರುವ ತ್ರಿಕೋನ ಏಕದಿನ ಕ್ರಿಕೆಟ್ ಸರಣಿಗೆ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ. ಚಿನಕುರಳಿ ಕ್ರಿಕೆಟ್ ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಭಾರೀ ಸದ್ದು ಮಾಡುತ್ತಿರುವ ವೈಭವ್ ಸೂರ್ಯವಂಶಿಗೆ ಬಿಸಿಸಿಐ ಭಾರತ ತಂಡದಲ್ಲಿ ಅವಕಾಶ ಕಲ್ಪಿಸಿದೆ.
ಈ ಸರಣಿಗೆ ತಿಲಕ್ ವರ್ಮಾ ಅವರನ್ನು ಭಾರತ ಎ ತಂಡದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ರಿಯಾನ್ ಪರಾಗ್ ಉಪನಾಯಕನ ಪಟ್ಟ ನೀಡಲಾಗಿದೆ.
ಐಪಿಎಲ್‌ನಲ್ಲಿ ರನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುತ್ತಿರುವ ಪ್ರಿಯಾಂಶ್ ಆರ್ಯ, ಆಯುಷ್ ಬಡೋನಿ ಮತ್ತು ಪ್ರಭ್ಸಿಮ್ರಾನ್ ಸಿಂಗ್ ಅವರಂತಹ ಯುವ ಆಟಗಾರರನ್ನು ಏಕದಿನ ತ್ರಿಕೋನ ಸರಣಿಗೆ ಆಯ್ಕೆ ಮಾಡಲಾ ಗಿದೆ.
ಮತ್ತೊಂದೆಡೆ ಯಶ್ ಠಾಕೂರ್, ಯುಧ್ವೀರ್ ಸಿಂಗ್, ಅನ್ಶುಲ್ ಕಾಂಬೋಜ್ ಮತ್ತು ಅರ್ಷದ್ ಖಾನ್ ರಂತಹ ಉದಯೋನ್ಮುಖ ಬೌಲರ್‌ಗಳಿಗೂ ಈ ಸರಣಿಯಲ್ಲಿ ದೊಡ್ಡ ಅವಕಾಶ ಸಿಗಲಿದೆ.
ಸರಣಿಯ ನಂತರ ಭಾರತ ಎ, ಶ್ರೀಲಂಕಾ ಎ ವಿರುದ್ಧ ಎರಡು ಬಹು-ದಿನದ (ರೆಡ್-ಬಾಲ್) ಪಂದ್ಯಗಳನ್ನು ಸಹ ಆಡಲಿದೆ. ಈ ಟೆಸ್ಟ್ ಪಂದ್ಯಗಳಿಗೆ ತಂಡವನ್ನು ನಂತರ ಪ್ರಕಟಿಸಲು ತೀರ್ಮಾನಿಸಲಾಗಿದೆ.
ತ್ರಿಕೋನ ಸರಣಿಯು ಜೂನ್ 9 ರಂದು ಪ್ರಾರಂಭವಾಗಲಿದ್ದು, ಜೂನ್ 21 ರಂದು ಅಂತಿಮ ಪಂದ್ಯ ನಡೆಯಲಿದೆ. ಎಲ್ಲಾ ತಂಡಗಳು ಪರಸ್ಪರ ಎರಡು ಬಾರಿ ಮುಖಾಮುಖಿಯಾಗಲಿದ್ದು, ಅಗ್ರ ಎರಡು ತಂಡಗಳು ಫೈನಲ್‌ನಲ್ಲಿ ಮುಖಾಮುಖಿಯಾಗಲಿವೆ.
ತಂಡ ಇಂತಿದೆ:
ತಿಲಕ್ ವರ್ಮಾ (ನಾಯಕ),ರಿಯಾನ್ ಪರಾಗ್ (ಉಪನಾಯಕ)ಪ್ರಿಯಾಂಶ್ ಆರ್ಯ, ವೈಭವ್ ಸೂರ್ಯವಂಶಿ,ಆಯುಷ್ ಬದೋನಿ,ನಿಶಾಂತ್ ಸಿಂಧು,ಹರ್ಷ ದುಬೆ, ಸೂರ್ಯಾಂಶ್ ಶೆಡ್ಜ್, ಪ್ರಭಾಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್) ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್) ವಿಪ್ರಜ್ ನಿಗಮ್, ಯಶ್ ಠಾಕೂರ್
ಯುದ್ಧವೀರ್ ಸಿಂಗ್, ಅಂಶುಲ್ ಕಾಂಬೋಜ್, ಅರ್ಷದ್ ಖಾನ್


























