Home ಜಿಲ್ಲೆ ರೋಟರಿಗೆ ದೇಣಿಗೆ: ಭಾರತ ಎರಡನೇ ಸ್ಥಾನದಲ್ಲಿ

ರೋಟರಿಗೆ ದೇಣಿಗೆ: ಭಾರತ ಎರಡನೇ ಸ್ಥಾನದಲ್ಲಿ

ಬೀದರ್:ಫೆ.27: ಅಂತರರಾಷ್ಟ್ರೀಯ ರೋಟರಿ ಸಂಸ್ಥೆಯ ಸಾಮಾಜಿಕ ಚಟುವಟಿಕೆಗಳಿಗೆ ದೇಣಿಗೆ ನೀಡುವಲ್ಲಿ ಭಾರತ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿ ಇದೆ ಎಂದು ಅಂತರರಾಷ್ಟ್ರೀಯ ರೋಟರಿ ಜಿಲ್ಲೆ 3160 ನಿಯೋಜಿತ ಗವರ್ನರ್ ತ್ರಿವಿಕ್ರಮ ಜೋಶಿ ಹೇಳಿದರು.
ರೋಟರಿ ಕ್ಲಬ್ ಬೀದರ್ ವತಿಯಿಂದ ನಗರದ ಲಾವಣ್ಯ ಫಂಕ್ಷನ್ ಹಾಲ್‍ನಲ್ಲಿ ಈಚೆಗೆ ಆಯೋಜಿಸಿದ್ದ ಅಂತರರಾಷ್ಟ್ರೀಯ ರೋಟರಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರೋಟರಿ ಸದಸ್ಯತ್ವದಲ್ಲೂ ದೇಶ ಜಗತ್ತಿನಲ್ಲಿ ದ್ವಿತೀಯ ಸ್ಥಾನದಲ್ಲಿ ಇದೆ ಎಂದು ತಿಳಿಸಿದರು.
ರೋಟರಿ ವಿಶ್ವದ ಅತಿ ದೊಡ್ಡ ಸಂಸ್ಥೆಯಾಗಿದೆ. ಇದಕ್ಕೆ 14 ಲಕ್ಷಕ್ಕೂ ಅಧಿಕ ಸದಸ್ಯರು ಇದ್ದಾರೆ. ಸಂಸ್ಥೆ ಶಿಕ್ಷಣ, ಆರೋಗ್ಯ, ಪರಿಸರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿದೆ ಎಂದು ಹೇಳಿದರು.
2027-28ನೇ ಸಾಲಿನ ತಮ್ಮ ಅವಧಿಯಲ್ಲಿ ರೋಟರಿ ಕಲ್ಯಾಣ ಝೋನ್‍ಗೆ ಹೆಚ್ಚಿನ ಆದ್ಯತೆ ಕೊಡಲಾಗುವುದು. ಅಧಿಕ ಸೇವಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವಿವಿಧ ಚಟುವಟಿಕೆಗಳೊಂದಿಗೆ ರೋಟರಿ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಗಿದೆ ಎಂದು ಅಧ್ಯಕ್ಷತೆ ವಹಿಸಿದ್ದ ರೋಟರಿ ಕಲ್ಯಾಣ ಝೋನ್ ಸಹಾಯಕ ಗವರ್ನರ್ ಹಾವಶೆಟ್ಟಿ ಪಾಟೀಲ ಹೇಳಿದರು.
ರೋಟರಿ ಸಂಸ್ಥೆ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಘಟಕ, ವಿದ್ಯಾರ್ಥಿಗಳಿಗೆ ಡೆಸ್ಕ್, ಲಾಪ್‍ಟಾಪ್ ವಿತರಣೆ, ಸಸಿ ನೆಡುವಿಕೆ, ಉಚಿತ ಆರೋಗ್ಯ ಶಿಬಿರ ಮೊದಲಾದ ಚಟುವಟಿಕೆಗಳ ಮೂಲಕ ಜಿಲ್ಲೆಯಲ್ಲಿ ಗಮನ ಸೆಳೆದಿದೆ. ಸೇವೆ ಮೂಲಕ ಜನರನ್ನು ತಲುಪುವುದು ರೋಟರಿಯ ಧ್ಯೇಯವಾಗಿದೆ ಎಂದು ತಿಳಿಸಿದರು.
ರೋಟರಿ ಸಂಸ್ಥೆ ಸಮಾಜಮುಖಿ ಕಾರ್ಯಗಳಲ್ಲಿ ನಿರತವಾಗಿದೆ. ಸಂಸ್ಥೆಯ ಮಾನವೀಯ ಸೇವೆಯಿಂದ ಪ್ರೇರಣೆಗೊಂಡು ಸಂಸ್ಥೆಗೆ ಸೇರ್ಪಡೆ ಆಗಿರುವೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯ ಡಾ. ರಜನೀಶ್ ವಾಲಿ ಹೇಳಿದರು.
ರೋಟರಿ ಕ್ಲಬ್ ಬೀದರ್ ಮಾಜಿ ಅಧ್ಯಕ್ಷ ಸೋಮಶೇಖರ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಿಪಿಆರ್ ಪ್ರಾತ್ಯಕ್ಷಿಕೆ ನಡೆಸಿಕೊಡಲಾಯಿತು.
ಅಂತರರಾಷ್ಟ್ರೀಯ ರೋಟರಿ ದಿನಾಚರಣೆ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಕ್ರಿಕೆಟ್, ಶಟಲ್ ಬ್ಯಾಡ್ಮಿಂಟನ್, ಸಾಂಸ್ಕøತಿಕ ಕಾರ್ಯಕ್ರಮ, ರಂಗೋಲಿ, ಚಿತ್ರಕಲೆ, ಭಾಷಣ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
35 ವರ್ಷ ಮೇಲ್ಪಟ್ಟು ರೋಟರಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ರೋಟರಿ ಕ್ಲಬ್‍ಗಳ ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು.
ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ರೋಟರಿ ಪಬ್ಲಿಕ್ ಇಮೇಜ್ ಅಧ್ಯಕ್ಷ ಬಸವರಾಜ ಧನ್ನೂರ, ಡಾ. ರಘು ಕೃಷ್ಣಮೂರ್ತಿ, ಶಿವಶಂಕರ ಕಾಮಶೆಟ್ಟಿ, ರವಿ ಮೂಲಗೆ, ಎಲ್ಲ ರೋಟರಿ ಕ್ಲಬ್‍ಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಇದ್ದರು.
ರೋಟರಿ ಕ್ಲಬ್ ಬೀದರ್ ಅಧ್ಯಕ್ಷ ಬಸವಕುಮಾರ ಪಾಟೀಲ ಸ್ವಾಗತಿಸಿದರು. ಸಾಯಿಪ್ರಿಂiÀi, ಸಹನಾ ಪಾಟೀಲ ನಿರೂಪಿಸಿದರು. ಕ್ಲಬ್ ಕಾರ್ಯದರ್ಶಿ ಅನಿಲ್ ಬಿರಾದಾರ ವಂದಿಸಿದರು.
ಬೀದರ್ ನಾಗರಿಕ ಸನ್ಮಾರ್ಗ ಸಮಿತಿ ಸಹಯೋಗದೊಂದಿಗೆ ರೋಟರಿ ಕ್ಲಬ್ ಬೀದರನಿಂದ ವ್ಯಸನ ಮುಕ್ತ ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರ ಹಾಗೂ ಅಭಿವೃದ್ಧಿಯಲ್ಲಿ ರೋಟರಿ ಪಾತ್ರ ಕುರಿತು ಕಾರ್ಯಾಗಾರ ನಡೆಯಿತು.