
ನವದೆಹಲಿ,ಮೇ.೧೯- ಪಾಕಿಸ್ತಾನಕ್ಕೆ ಭಾರತ ಮತ್ತೊಂದು ತೀವ್ರ ಹೊಡೆತ ನೀಡಿದೆ.ಮುಂಬರುವ ಏಷ್ಯಾಕಪ್‌ಗೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಭಾರತ ಏಷ್ಯಾ ಕಪ್ ೨೦೨೫ ರಿಂದ ಹಿಂದೆ ಸರಿದಿದೆ. ಭಾರತ ತಂಡ ಪುರುಷರ ಏಷ್ಯಾ ಕಪ್ ೨೦೨೫ ಮತ್ತು ಮಹಿಳಾ ಉದಯೋನ್ಮುಖ ತಂಡ ಏಷ್ಯಾ ಕಪ್‌ನಲ್ಲಿ ಭಾಗವಹಿಸುವುದಿಲ್ಲ ಎಂದು ಬಿಸಿಸಿಐ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಗೆ ತಿಳಿಸಿದೆ.ಜೂನ್‌ನಲ್ಲಿ ಶ್ರೀಲಂಕಾದಲ್ಲಿ ಈ ಪಂದ್ಯಗಳು ನಡೆಯಲಿವೆ.
ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿ ನೇತೃತ್ವದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಗೆ ಬಿಸಿಸಿಐ, ಜೂನ್‌ನಲ್ಲಿ ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ ಮತ್ತು ಪುರುಷರ ಏಷ್ಯಾ ಕಪ್ ೨೦೨೫ ರಿಂದ ತನ್ನ ತಂಡಗಳನ್ನು ಹಿಂತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ. ಕಳೆದ ತಿಂಗಳು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಭಾರತವು ಆಪರೇಷನ್ ಸಿಂಧೂರ್ ಮೂಲಕ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿದೆ.
ಪಾಕಿಸ್ತಾನಿ ಸಚಿವರು ನೇತೃತ್ವದ ಮತ್ತು ಎಸಿಸಿ ಆಯೋಜಿಸುವ ಪಂದ್ಯಾವಳಿಯಲ್ಲಿ ಭಾರತ ತಂಡ ಆಡಲು ಸಾಧ್ಯವಿಲ್ಲ ಎಂದು ಬಿಸಿಸಿಐ ಮೂಲವೊಂದು ಹೇಳಿರುವುದಾಗಿ ವರದಿ ತಿಳಿಸಿದೆ.ಇದು ದೇಶದ ಭಾವನೆ. ಮುಂಬರುವ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್‌ನಿಂದ ಹಿಂದೆ ಸರಿಯುವ ಬಗ್ಗೆ ಎಸಿಸಿಗೆ ಮೌಖಿಕವಾಗಿ ತಿಳಿಸಲಾಗಿದೆ.