Home ಕ್ರೀಡೆ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ: ಮೂವರು ಕನ್ನಡಿಗರಿಗೆ ಸ್ಥಾನ

ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ: ಮೂವರು ಕನ್ನಡಿಗರಿಗೆ ಸ್ಥಾನ

ನವದೆಹಲಿ, ಜು. ೨೮: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಮಂಗಳವಾರ ಘೋಷಿಸಿದೆ.


ಇಂಡಿಯನ್ ಪ್ರೀಮಿಯರ್ ಲೀಗ್ ಸಂದರ್ಭದಲ್ಲಿ ಗಾಯಗೊಂಡಿದ್ದ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ತಂಡಕ್ಕೆ ಮರಳಿದ್ದಾರೆ. ಇದೇ ವೇಳೆ ಮೂವರು ಕನ್ನಡಿಗರು ತಂಡದಲ್ಲಿ ಅವಕಾಶ ಗಿಟ್ಟಿಸಿದ್ದಾರೆ.


ತಂಡವನ್ನು ಶುಬ್ಮನ್ ಗಿಲ್ ಮುನ್ನಡೆಸಿದರೆ, ಕೆ.ಎಲ್. ರಾಹುಲ್ ಉಪನಾಯಕನಾಗಿ ಮುಂದುವರೆದಿದ್ದಾರೆ. ಸರನ್ಸ್ ಜೈನ್ ಅವರಿಗೆ ಇದೇ ಮೊದಲ ಬಾರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ. ಇವರ ಜತೆಗೆ ಕನ್ನಡಿಗರಿಗಾದ ಪ್ರಸಿದ್ಧ ಕೃಷ್ಣ ಹಾಗೂ ದೇವದತ್ತ ಪಡಿಕ್ಕಲ್ ಕೂಡ ಶ್ರೀಲಂಕಾ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದಾರೆ.


ಶ್ರೀಲಂಕಾ ಪ್ರವಾಸದಲ್ಲಿ ಭಾರತ ತಂಡವು ಆಗಸ್ಟ್ ೭ರಂದು ಕೊಲಂಬೊದಲ್ಲಿ ಆರಂಭವಾಗಲಿರುವ ನಾಲ್ಕು ದಿನಗಳ ಅಭ್ಯಾಸ ಪಂದ್ಯದ ಮೂಲಕ ಅಭಿಯಾನ ಆರಂಭಿಸಲಿದೆ. ಆಗಸ್ಟ್ ೧೫ರಿಂದ ಗಾಲೆಯಲ್ಲಿ ಮೊದಲ ಪಂದ್ಯ ಮತ್ತು ಆಗಸ್ಟ್ ೨೩ರಿಂದ ಎರಡನೇ ಪಂದ್ಯ ನಡೆಯಲಿದೆ. ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್ ಓಟದಲ್ಲಿ ಉಳಿದುಕೊಳ್ಳಲು ಭಾರತ ತಂಡಕ್ಕೆ ಈ ಸರಣಿ ಮಹತ್ವದ್ದಾಗಿದೆ.


’ಶ್ರೀಲಂಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ಪುರುಷರ ತಂಡವನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಸರಣಿ ಆರಂಭಕ್ಕೂ ಮುನ್ನ ತಂಡವು ಆಗಸ್ಟ್ ೭ರಿಂದ ಕೊಲಂಬೊದಲ್ಲಿ ನಾಲ್ಕು ದಿನಗಳ ಅಭ್ಯಾಸ ಪಂದ್ಯ ಆಡಲಿದೆ’ ಎಂದು ಬಿಸಿಸಿಐ ತಿಳಿಸಿದೆ.


ಭಾರತ ತಂಡ ಇಂತಿದೆ:
ಶುಬ್ಮನ್ ಗಿಲ್ (ನಾಯಕ), ಕೆ.ಎಲ್. ರಾಹುಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್) ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಮನವ್ ಸುತಾರ್, ಜಸ್‌ಪ್ರೀತ್ ಬುಮ್ರಾ. ಮೊಹಮ್ಮದ್ ಸಿರಾಜ್. ಪ್ರಸಿದ್ಧ ಕೃಷ್ಣ, ಗುರ್ನೂರ್ ಬ್ರಾರ್, ದೇವದತ್ತ ಪಡಿಕ್ಕಲ್ ಹಾಗೂ ಸರನ್ಸ್ ಜೈನ್ ಸ್ಥಾನ ಪಡೆದಿದ್ದಾರೆ.