ಯೋಗ ಪ್ರಪಂಚಕ್ಕೆ ನೀಡಿದ ಭಾರತದ ಅದ್ಭುತ ಕೊಡುಗೆ

ಗದಗ,ಜೂ23: ಪ್ರಪಂಚಕ್ಕೆ ಯೋಗದ ಮಹತ್ವದ ಬಗ್ಗೆ ತಿಳಿಸಿಕೊಟ್ಟ ಭಾರತದ ಕೊಡುಗೆ ಅದ್ಭುತ. ಎಲ್ಲಾ ದೈಹಿಕ ಹಾಗೂ ಮಾನಸಿಕ ಕಾಯಿಲೆಗಳಿಗೆ ಯೋಗ ರಾಮಬಾಣವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ನಾಗವೇಣಿ ಅವರು ತಿಳಿಸಿದರು.


ಅವರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಆಯುಷ್ಯ ಇಲಾಖೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಗದಗ ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಗದಗ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಆರ್.ಜಿ.ಕಲ್ಲೂರ ಅವರು ವಹಿಸಿದ್ದರು.

ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗಂಗಾಧರ ಸಿ.ಎಮ್., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ, ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶರಾದ ಜಿ.ಆರ್.ಶೆಟ್ಟರ, ಪ್ರಧಾನ ದಿವಾಣಿ ನ್ಯಾಯಾಧೀಶರಾದ ದೀಪ್ತಿ ನಾಡಗೌಡ, 1ನೇ ಜೆಎಂಎಫ್‍ಸಿ ನ್ಯಾಯಾಧೀಶÀರಾದ ಶ್ರೀಮತಿ ಶಿಲ್ಪಾ ತಿಮ್ಮಾಪೂರ, 2ನೇ ಜೆಎಂಎಫ್‍ಸಿ ನ್ಯಾಯಾಧೀಶÀರಾದ ಬೀರಪ್ಪ ಕಾಂಬಳೆ ಹಾಗೂ ಗದಗ ಜಿಲ್ಲಾ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಮ್.ಎ.ನಾಯ್ಕರ, ಉಪಾಧ್ಯಕ್ಷರಾದ ಎಮ್.ಎ.ಸಂಗನಾಳ, ವಕೀಲರ ಸಂಘದ ಸದಸ್ಯರುಗಳು, ಕಾನೂನು ನೆರವು ಅಭಿರಕ್ಷಕ ವಕೀಲರು, ಪ್ಯಾನಲ್ ವಕೀಲರು, ಪಿ.ಎಲ್.ವಿ ಗಳು ಹಾಗೂ ನ್ಯಾಯಾಲಯದ ಸಿಬ್ಬಂದಿ ವರ್ಗ , ವಕೀಲರ ಸಂಘದ ಸದಸ್ಯರುಗಳು, ಕಾನೂನು ನೆರವು ಅಭಿರಕ್ಷಕ ವಕೀಲರು, ಪ್ಯಾನಲ್ ವಕೀಲರು, ಪಿ.ಎಲ್.ವಿ ಗಳು ಹಾಗೂ ನ್ಯಾಯಾಲಯದ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.

ಶ್ರೀಮತಿ ಶಶಿಕಲಾ ಜೋಗರಡ್ಡಿ ಅವರು ಯೋಗ ಕಾರ್ಯಕ್ರಮವನ್ನು ಜರುಗಿಸಿಕೊಟ್ಟರು.