
ಭಾರತೀಯರ ಸುರಕ್ಷತೆಗೆ ಕ್ರಮ
ನವದೆಹಲಿ,ಮಾ.೯- ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷದ ಹಿನ್ನೆಲೆಯಲ್ಲಿ ಭಾರತ ಶಾಂತಿ ಬೆಂಬಲಿಸುತ್ತದೆ, ಮಾತುಕತೆಗೆ ಪ್ರೋತ್ಸಾಹಿಸುತ್ತದೆ ಜೊತಗೆ ಭಾರತೀಯರ ಸುರಕ್ಷತೆಗೆ ಆದ್ಯತೆ ನೀಡುತ್ತದೆ ಎಂದು ವಿದೇಶಾಂಗ ಸಚಿವ ಡಾ. ಎಸ್ ಜೈ ಶಂಕರ್ ಸಂಸತ್ತಿನ ಉಭಯ ಸದನಗಳಲ್ಲಿ ಮಾಹಿತಿ ನೀಡಿದ್ದಾರೆ.
ಭಾರತ ಶಾಂತಿ, ಸಂವಾದ ಮತ್ತು ರಾಜತಾಂತ್ರಿಕತೆಗೆ ಮರು ಸ್ಥಾಪಿಸಲು ಪರವಾಗಿ ಕೆಲಸ ಮಾಡಲಿದೆ. ಸಂಘರ್ಷ ಉದ್ವಿಗ್ನತೆಯನ್ನು ಕಡಿಮೆ ಮಾಡುವುದು, ಸಂಯಮ ಮತ್ತು ನಾಗರಿಕರ ಸುರಕ್ಷತೆ ಖಚಿತಪಡಿಸಿಕೊಳ್ಳುವುದನ್ನು ಭಾರತ ಸಹ ಪ್ರತಿಪಾದಿಸುತ್ತದೆ ಎಂದು ಅವರು ಹೇಳಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಉಂಟಾಗಿರುವ ಹಿನ್ನೆಲೆಯಲ್ಲಿ ಯುದ್ಧ ಪೀಡಿತ ಪ್ರದೇಶದಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ಮರಳಿ ಕರೆತರಲು ಕೇಂದ್ರ ಸರ್ಕಾರ ಎಲ್ಲ ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಯುದ್ಧ ಬಾಧಿತ ದೇಶಗಳಲ್ಲಿ ಬೃಹತ್ ಸ್ಥಳಾಂತರಿಸುವ ಕಾರ್ಯಾಚರಣೆ ನಡೆದಿದೆ. ಈವರೆಗೆ ಸುಮಾರು ೬೭,೦೦೦ ಭಾರತೀಯರು ಸುರಕ್ಷಿತವಾಗಿ ಸ್ವದೇಶಕ್ಕೆ ವಾಪಸ್ಸಾಗಿದ್ದಾರೆ ಎಂದು ಹೇಳಿದ್ದಾರೆ.
ಪಶ್ವಿಮ ಎಷ್ಯಾದಲ್ಲಿ ಉಂಟಾಗಿರುವ ಸಂಘರ್ಷ ಮತ್ತು ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ಬಗ್ಗೆ ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ ಬಳಿಕ ಲೋಕಸಭಯಲ್ಲಿ ಮಾಹಿತಿ ನೀಡಿ ಯುದ್ಧ ಪೀಡಿತ ದೇಶಗಳಲ್ಲಿ ರಾಯಭಾರ ಕಚೇರಿಗಳು ದಿನದ ೨೪ ಗಂಟೆ ಗರಿಷ್ಠ ಎಚ್ಚರಿಕೆ ಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದಿದ್ದಾರೆ.
ಪಶ್ವಿಮ ಏಷ್ಯಾದಲ್ಲಿ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಭಾರತೀಯರ ಸುರಕ್ಷತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ ಕಳವಳ ವ್ಯಕ್ತಪಡಿಸಿದ್ದು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಿದೆ. ಪರಿಸ್ಥಿತಿಯ ಗಂಭೀರತೆ ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಇರಾನ್‌ನಲ್ಲಿ ನಡೆದ ವೈಮಾನಿಕ ದಾಳಿಗಳು ಮತ್ತು ನಂತರದ ಹಲವಾರು ಗಲ್ಫ್ ದೇಶಗಳಲ್ಲಿ ನಡೆದ ದಾಳಿಗಳ ಬಗ್ಗೆ ಭದ್ರತೆ ಕುರಿತ ಸಂಪುಟ ಸಮಿತಿಗೆ ವಿವರಿಸಲಾಗಿದೆ. ಮಧ್ಯ ಪ್ರಾಚ್ಯದೇಶದಲ್ಲಿನ ಭಾರತೀಯ ಸಮುದಾಯದ ಸುರಕ್ಷತೆ ಮತ್ತು ಭದ್ರತೆಗೆ ಆದ್ಯತೆ ನೀಡಲಾಗಿದೆ ಎಂದಿದ್ದಾರೆ.
ಮಧ್ಯಪ್ರಾಚ್ಯ ಯುದ್ಧದ ಹಿನ್ನೆಲೆಯಲ್ಲಿ ಕಚ್ಚಾ ತೈಲ ಪರಿಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ವಿರೋಧ ಪಕ್ಷದ ಸದಸ್ಯರ ಆರೋಪಕ್ಕೆ ತಿರುಗೇಟು ನೀಡಿದ ಅವರು ಸಂವಾದ ಮತ್ತು ರಾಜತಾಂತ್ರಿಕತೆಯ’ ಅಗತ್ಯತೆ ಮೂಲಕ ಪರಿಹಾರ ಕಂಡುಕೊಳ್ಳಲಾಗುತ್ತಿದೆ ಎಂದಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಪ್ರಾದೇಶಿಕ ಸಂಘರ್ಷದ ಮಧ್ಯೆ, ಭಾರತ ಕಚ್ಚಾ ತೈಲದ ಪರಿಸ್ಥಿತಿ ಮತ್ತು ಹದಗೆಡುತ್ತಿರುವ ಭದ್ರತಾ ವಾತಾವರಣವನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ .ಈ ಪ್ರದೇಶದಲ್ಲಿನ ವಿವಾದಗಳನ್ನು ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಪರಿಹರಿಸಲು ಒತ್ತು ನೀಡುತ್ತಿದೆ ಎಂದು ತಿಳಿಸಿದ್ದಾರೆ.
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತು ಬೆಳವಣಿಗೆಗಳನ್ನು ಎಚ್ಚರಿಕೆಯಿಂದ ಗಮನಿಸುತ್ತಿದೆ “ಈ ಪ್ರದೇಶದಲ್ಲಿ ಭದ್ರತಾ ಪರಿಸ್ಥಿತಿ ಗಮನಾರ್ಹವಾಗಿ ಹದಗೆಟ್ಟಿದೆ” ಸಂಘರ್ಷದ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿ ಸಾಮಾನ್ಯ ಜೀವನ ಮತ್ತು ಆರ್ಥಿಕ ಚಟುವಟಿಕೆಯ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿದೆ. ರಾಜತಾಂತ್ರಿಕ ಮಾತುಕತೆ ಮುಂದುವರೆಸಿದೆ ಎಂದಿದ್ದಾರೆ.
ಮಧ್ಯಪ್ರಾಚ್ಯದಲ್ಲಿನ ವಿಷಯ ಪರಿಹರಿಸಲು ಸಂವಾದ ಮತ್ತು ರಾಜತಾಂತ್ರಿಕತೆ ಪ್ರೋತ್ಸಾಹಿಸಬೇಕು ಎಂದು ನಾವು ನಂಬುತ್ತೇವೆ ಮತ್ತು ಜಾಗತಿಕ ಇಂಧನ ಪೂರೈಕೆಯ ಮೇಲೆ ಸಂಘರ್ಷದ ಸಂಭಾವ್ಯ ಪರಿಣಾಮದ ಬಗ್ಗೆ ಸರ್ಕಾರ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಹೇಳಿಕೆಗಳು ಬಂದಿವೆ.
ಈ ಪ್ರದೇಶದಲ್ಲಿ ಹಗೆತನ ತೀವ್ರಗೊಳ್ಳುತ್ತಿದ್ದಂತೆ ವಿಕಸನಗೊಳ್ಳುತ್ತಿರುವ ಕಚ್ಚಾ ತೈಲ ಪರಿಸ್ಥಿತಿಯ ಬಗ್ಗೆ ಸರ್ಕಾರ ಎಚ್ಚರವಾಗಿದೆ ಪಶ್ಚಿಮ ಏಷ್ಯಾದಲ್ಲಿ ಭಾರತ ಗಮನಾರ್ಹ ಆರ್ಥಿಕ ಮತ್ತು ಮಾನವಿಯ ಪಾಲನ್ನು ಹೊಂದಿದೆ ಎಂದಿದ್ದಾರೆ.
ಇಂದಿನಿಂದ ಆರಂಭವಾಗಿರುವ ಬಜೆಟ್ ಅಧಿವೇಶನದ ಎರಡನೇ ಚರಣ ಏಪ್ರಿಲ್ ೨ ರವರೆಗ ನಡೆಯಲಿದೆ.
ಮೊದಲ ಹಂತ ಜನವರಿ ೨೮ ರಿಂದ ಫೆಬ್ರವರಿ ೧೩ ರವರೆಗೆ ಮೊದಲ ಹಂತದ ಅಧಿವೇಶನ ನಡೆದಿತ್ತು.




























