
ಕಲಬುರಗಿ,ಸೆ.21-ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (ಸಿಯುಕೆ) ಸ್ಕೂಲ್ ಆಫ್ ಇಂಜಿನಿಯರಿಂಗ್ ವತಿಯಿಂದ ಅಭಿಯಂತರ ದಿನಾಚರಣೆ ಅಂಗವಾಗಿ ‘ಯಾಂತ್ರಿಕ-2026’ ತಾಂತ್ರಿಕ ಉತ್ಸವವನ್ನು ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ, ನವದೆಹಲಿಯ ಯುಜಿಸಿಯ ಜಂಟಿ ಕಾರ್ಯದರ್ಶಿ ಡಾ.ಗೋಪಿ ಚಂದ್ ಮೆರುಗು ಮತ್ತು ಕುಲಸಚಿವ ಪೆÇ್ರ. ಆರ್. ಆರ್. ಬಿರಾದಾರ್ ಅವರು ‘ಸರ್ ಎಂ. ವಿಶ್ವೇಶ್ವರಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಯಾಂತ್ರಿಕ -2026 ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
“ಇಂಧನ ಕ್ಷೇತ್ರದಲ್ಲಿ ವಿಕಸಿತ ಭಾರತ 2047” ಎಂಬ ವಿಷಯದಡಿ ಸೆಪ್ಟೆಂಬರ್ 15ರಿಂದ 21ರವರೆಗೆ ನಡೆಯುತ್ತಿರುವ ಈ ಐದು ದಿನಗಳ ಉತ್ಸವದಲ್ಲಿ ರಸಪ್ರಶ್ನೆ, ಹ್ಯಾಕಥಾನ್, ಸಾಂಸ್ಕøತಿಕ ಕಾರ್ಯಕ್ರಮಗಳು ಹಾಗೂ ಪ್ರಾಜೆಕ್ಟ್ ಪ್ರದರ್ಶನ ಸೇರಿದಂತೆ ವಿವಿಧ ತಾಂತ್ರಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ತಮ್ಮ ತಾಂತ್ರಿಕ ಜ್ಞಾನ, ಸೃಜನಶೀಲತೆ, ನಾವೀನ್ಯತೆ ಹಾಗೂ ತಂಡದ ಕಾರ್ಯನಿರ್ವಹಣಾ ಕೌಶಲಗಳನ್ನು ಪ್ರದರ್ಶಿಸಲು ಈ ಚಟುವಟಿಕೆಗಳು ವೇದಿಕೆ ಒದಗಿಸುತ್ತಿವೆ. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ, ಭಾರತದ ಅಭಿವೃದ್ಧಿಗೆ ಸರ್ ಮೋಕ್ಷಗುಂಡಂ
ವಿಶ್ವೇಶ್ವರಯ್ಯ ಅವರು ನೀಡಿದ ಮಹತ್ವದ ಕೊಡುಗೆಗಳನ್ನು ಸ್ಮರಿಸಿದರು.
ಶಿಸ್ತು, ಸಮರ್ಪಣಾ ಭಾವ ಮತ್ತು ಕಠಿಣ ಪರಿಶ್ರಮದಂತಹ ಅವರ ಮೌಲ್ಯಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
“ರಾಷ್ಟ್ರ ನಿರ್ಮಾಣದಲ್ಲಿ ತಂತ್ರಜ್ಞಾನ, ನಾವೀನ್ಯತೆ, ಸಂಶೋಧನೆ ಹಾಗೂ ಅಂತರ್‍ಶಿಸ್ತೀಯ ಸಹಯೋಗಗಳು ಅತ್ಯಗತ್ಯ. ‘ವಿಕಸಿತ ಭಾರತ 2047’ರ ಗುರಿ ಸಾಧನೆಗೆ ಯುವಜನರು ತಮ್ಮ ಜ್ಞಾನ, ಕೌಶಲ್ಯ ಮತ್ತು
ನಾವೀನ್ಯತೆಯನ್ನು ಪರಿಣಾಮಕಾರಿಯಾಗಿ ಬಳಸಬೇಕು,” ಎಂದು ಅವರು ಹೇಳಿದರು.
ಕುಲಸಚಿವ ಪೆÇ್ರ. ಆರ್. ಆರ್. ಬಿರಾದಾರ್ ಅವರು, ವಿದ್ಯಾರ್ಥಿಗಳು ವಿಶ್ವವಿದ್ಯಾಲಯ ಒದಗಿಸಿರುವ ಅತ್ಯಾಧುನಿಕ ಮೂಲಸೌಕರ್ಯ, ಶೈಕ್ಷಣಿಕ ಸೌಲಭ್ಯಗಳು ಹಾಗೂ ವಿವಿಧ ಅವಕಾಶಗಳನ್ನು ಪರಿಣಾಮಕಾರಿಯಾಗಿ
ಸದುಪಯೋಗಪಡಿಸಿಕೊಂಡು ತಮ್ಮ ಜ್ಞಾನ, ಕೌಶಲ ಮತ್ತು ಸಾಮಥ್ರ್ಯವನ್ನು ವೃದ್ಧಿಸಿಕೊಳ್ಳಬೇಕು. ಕಲಿಕೆಯನ್ನು ಕೇವಲ ಪದವಿಗೆ ಸೀಮಿತಗೊಳಿಸದೆ, ಸಮಾಜದ ಅಗತ್ಯಗಳಿಗೆ ಸ್ಪಂದಿಸುವ ಜ್ಞಾನವಾಗಿ ರೂಪಿಸಿಕೊಂಡು ರಾಷ್ಟ್ರದ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ನವದೆಹಲಿಯ ಯುಜಿಸಿಯ ಜಂಟಿ ಕಾರ್ಯದರ್ಶಿ ಡಾ. ಗೋಪಿ ಚಂದ್ ಮೆರುಗು ಅವರು, ವಿದ್ಯಾರ್ಥಿಗಳು ಸಮಾಜದ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಅರ್ಥಪೂರ್ಣ ಸಂಶೋಧನೆಗಳನ್ನು ಕೈಗೊಳ್ಳಬೇಕು ಮತ್ತು ಸಮಾಜದ ಹಿತಕ್ಕಾಗಿ ನವೀನ ಪರಿಹಾರಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕಂಪ್ಯೂಟರ್ ವಿಜ್ಞಾನ ನಿಕಾಯದ ಡೀನ್ ಪೆÇ್ರ. ಆರ್. ಎಸ್. ಹೆಗಡಿ, ಇಂಜಿನಿಯರಿಂಗ್ ನಿಕಾಯದ ಡೀನ್ ಪೆÇ್ರ. ಅಮರೇಂದ್ರ ಮಸ್ತಾ, ಗಣಿತ ವಿಭಾಗದ ಮುಖ್ಯಸ್ಥ ಪೆÇ್ರ. ಜನಾರ್ದನ ರೆಡ್ಡಿ ಸೇರಿದಂತೆ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ನಿಕಾಯ ಸೇರಿದಂತೆ ವಿವಿಧ ವಿಭಾಗಗಳ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಡಾ. ನಿತಿನ್ ಭೀಮರಾವ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮವು ‘ವಂದೇ ಮಾತರಂ’ ಗೀತೆಯೊಂದಿಗೆ ಆರಂಭವಾಗಿ, ರಾಷ್ಟ್ರಗೀತೆಯೊಂದಿಗೆ ಮುಕ್ತಾಯಗೊಂಡಿತು.































