
ಅಥಣಿ : ಪಟ್ಟಣದ ಹೃದಯ ಭಾಗದಲ್ಲಿರುವ ಐತಿಹಾಸಿಕ ಜೋಡು ಕೆರೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಸಹಕಾರ ಸಚಿವ ಲಕ್ಷ್ಮಣ ಸವದಿ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಣೆ ಮಾಡಿ ಗುಣಮಟ್ಟ ಮತ್ತು ಪ್ರಗತಿಯನ್ನು ಪರಿಶೀಲಿಸಿದರು.
ಕೆರೆ ಅಭಿವೃದ್ಧಿ ಕಾಮಗಾರಿಯ ವಿವಿಧ ಹಂತಗಳನ್ನು ಪರಿಶೀಲಿಸಿದ ಅವರು, ಕಾಮಗಾರಿ ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸಂಬAಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜೋಡು ಕೆರೆ ಪಟ್ಟಣದ ಪ್ರಮುಖ ಸಾರ್ವಜನಿಕ ಆಸ್ತಿಯಾಗಿದ್ದು, ಇದರ ಸಮಗ್ರ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಉತ್ತಮ ಪರಿಸರ, ವಾಯುವಿಹಾರ ಹಾಗೂ ಮನರಂಜನಾ ಸೌಲಭ್ಯಗಳು ದೊರೆಯಲಿವೆ. ಕೆರೆಯ ಸೌಂದರ್ಯೀಕರಣ, ಸ್ವಚ್ಛತೆ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.
ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದAತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಕಾಮಗಾರಿಯ ಪ್ರತಿಯೊಂದು ಹಂತದಲ್ಲೂ ಗುಣಮಟ್ಟವನ್ನು ಪರಿಶೀಲಿಸಿ, ನಿಗದಿತ ಮಾನದಂಡದAತೆ ಕೆಲಸ ಪೂರ್ಣಗೊಳಿಸಬೇಕು ಎಂದು ಸಚಿವ ಲಕ್ಷ್ಮಣ ಸವದಿ ಅಧಿಕಾರಿಗಳಿಗೆ ಸೂಚಿಸಿದರು.
“ಅಭಿವೃದ್ಧಿ ಕಾಮಗಾರಿಗಳು ವಿಳಂಬವಾಗದೆ, ನಿಗದಿತ ಸಮಯಕ್ಕೆ ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಲಭ್ಯವಾಗಬೇಕು. ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್. ಸದಸ್ಯರಾದ ಸಂತೋಷ ಸಾವಡಕರ. ಕಲ್ಲೇಶ ಮಡ್ಡಿ. ಮಲ್ಲೇಶ ಹುದ್ದಾರ. ಪ್ರಮೋದ್ ಬಿಳ್ಳೊರ. ರಾಜು ಗುಡೋಡಗಿ. ಸೈಯ್ಯದಅಮೀನ್ ಗದ್ಯಾಳ. ವಿಲಿನರಾಜ್ ಯಳಮಲ್ಲೆ. ಉಪ ತಹಶೀಲ್ದಾರ್ ಮಹಾದೇವ ಬಿರಾದಾರ. ಜಿಪಂ ಅಭಿಯಂತರ ವೀರಣ್ಣ ವಾಲಿ. ಪುರಸಭೆ ಮುಖ್ಯಾಧಿಕಾರಿ ಅಶೋಕ ಗುಡಿಮನಿ. ಹಾಗೂ ಗುತ್ತಿಗೆದಾರರು ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.


























