ಕಾಮಗಾರಿಗಳ ಪರಿಶೀಲನೆ

ಧಾರವಾಡ, ಫೆ.4: ಧಾರವಾಡ ತಾಲ್ಲೂಕಿನ ಅಮ್ಮಿನಭಾವಿ ಮತ್ತು ಹೆಬ್ಬಳ್ಳಿ ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ್ ಅವರು ಭೇಟಿ ನೀಡಿ, ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು.


ಅಮ್ಮಿನಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮದ ಕುಡಿಯುವ ನೀರಿನ ಜಲಜೀವನ್ ಮಿಷನ್ ಕಾಮಗಾರಿ ಕುರಿತು ಮಾಹಿತಿ ಪಡೆದರು. ಡಿಬಿಓಟಿ (ಆಃಔಖಿ) ಕುಡಿಯುವ ನೀರಿನ ಘಟಕದ ಕಾಮಗಾರಿ ಪರಿಶೀಲಿಸಿದರು. ನಂತರ ಅಮ್ಮಿನಭಾವಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ನೀಡಿ, ಸಾರ್ವಜನಿಕರ ದಾಖಲಾತಿ ವಹಿ, ಆಸ್ಪತ್ರೆಯ ನೋಂದಣಿ ವಹಿ ಪರಿಶೀಲಿಸಿದರು. ಮತ್ತು ಸಾರ್ವಜನಿಕರಿಗೆ ಸಕಾಲಿಕ ಮತ್ತು ಉಚಿತ ಸೇವೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.


ನಂತರ ಅವರು ಹೆಬ್ಬಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ಮನೆಗಳಿಗೆ ಒದಗಿಸಲಾದ ನೀರಿನ ಕೊಳವೆ ಸಂಪರ್ಕಗಳ ಗುಣಮಟ್ಟ, ನೀರಿನ ಮೀಟರ್‍ಗಳ ಸ್ಥಾಪನೆ, ನೀರು ಸರಬರಾಜಿನ ಸ್ಥಿರತೆ, ಪೈಪ್‍ಲೈನ್ ಕಾಮಗಾರಿಗಳನ್ನು ಖುದ್ದು ಭೇಟಿ ನೀಡಿ, ಪರಿಶೀಲಿಸಿದರು. ನಂತರ ರಸ್ತೆ ಪುನರ್ ಸ್ಥಾಪನೆ ಮತ್ತು ಫೀಲ್ಡ್ ಟೆಸ್ಟ್ ಕಿಟ್‍ಗಳ (ಎಫ್ಟಿಕೆ) ಮೂಲಕ ನೀರಿನ ಗುಣಮಟ್ಟ ಪರೀಕ್ಷೆಯಂತಹ ಅಂಶಗಳನ್ನು ಪರಿಶೀಲಿಸಿ, ಮಾಹಿತಿ ಪಡೆದುಕೊಂಡರು.


ಈ ಸಂದರ್ಭದಲ್ಲಿ ಧಾರವಾಡ ತಹಶೀಲ್ದಾರ ಡಾ. ಡಿ.ಎಚ್.ಹೂಗಾರ, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಂಗಾಧರ ಕಂದಕೂರ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರ ಜಗದೀಶ ಪಾಟೀಲ ಸೇರಿದಂತೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಗುತ್ತಿಗೆದಾರ ಕಂಪನಿಯ ಪ್ರತಿನಿಧಿಗಳು, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.