
ಕಲಬುರಗಿ: ನಗರದ ಹಳೇ ಜೇವರ್ಗಿ ರಸ್ತೆಯಲ್ಲಿ ಜೈಭವಾನಿ ತರುಣ ಸಂಘದ ವತಿಯಿಂದ ನವರಾತ್ರಿ ಮಹೋತ್ಸವದ ನಿಮಿತ್ತ ದೇವಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ಅವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಸಂಘದ ಸದಸ್ಯರಾದ ರಾಕೇಶ್ ರಾಥೋಡ್, ಹರೀಶ್ ರೆಡ್ಡಿ, ಅನೂಪ್ ಗುಟ್ಟೇದಾರ್, ಆನಂದ್ ಠಾಕೂರ್, ಅಭಯ್ ರೆಡ್ಡಿ ಸೇರಿದಂತೆ ಸಂಘದ ಕಾರ್ಯಕರ್ತರು ಉಪಸ್ಥಿತರಿದ್ದರು.





















