Home ಜಿಲ್ಲೆ ಶುದ್ಧ ನೀರು ಪೂರೈಕೆಗೆ ಸೂಚನೆ

ಶುದ್ಧ ನೀರು ಪೂರೈಕೆಗೆ ಸೂಚನೆ

ನವಲಗುಂದ,ಮೇ9 : ಗ್ರಾಮೀಣ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಹಾಗೂ ಶುದ್ಧ ನೀರು ಪೂರೈಕೆಯಾಗುವಂತೆ ನೋಡಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಧಾರವಾಡ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಜಿಲ್ಲಾ ಪಂಚಾಯಿತಿ ಭುವನೇಶ ಪಾಟೀಲ ನಿರ್ದೇಶನ ನೀಡಿದರು.

ಕುಡಿಯುವ ನೀರು, ಮನರೇಗಾ ಕರ ವಸೂಲಾತಿ, ಸಾಮಾಜಿಕ ಲೆಕ್ಕ ಪರಿಶೋಧನೆ ವಸೂಲಾತಿ ಹಾಗೂ ವಿವಿಧ ಯೋಜನೆಗಳ ಕಾಮಗಾರಿ ಅಪೇಕ್ಷಣಾ ವಸೂಲಾತಿ ಪ್ರಗತಿ ಪರಶೀಲನಾ ಸಭೆಯಲ್ಲಿ ಮಾತನಾಡಿದ ಅವರು ಶುದ್ಧ ನೀರು ಪೂರೈಕೆಯಾಗುತ್ತಿರುವ ಕುರಿತು ಖಚಿತ ಪಡಿಸಿಕೊಳ್ಳಿ ಈ ನಿಟ್ಟಿನಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಯಿತಿಗಳು ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಅಲ್ಲದೇ ಮನರೇಗಾ ಯೋಜನೆಗಳಲ್ಲಿ ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾ ಪಂ ಕಾರ್ಯನಿರ್ವಾಹಕ ಅಧಿಕಾರಿ ರವೀಂದ್ರ ಪಾಟೀಲ, ತಾ.ಪಂ.ಸಹಾಯಕ ನಿರ್ದೇಶಕ ಜಗದೀಶ ಹಡಪದ (ಗ್ರಾ, ಉ.) ಸಿದ್ದು ಐರಾಣಿ, ಗುರುನಾಥ ಜೋಗಿ, ಆನಂದ ನಾವಳ್ಳಿ ಸೇರಿ ನವಲಗುಂದ-ಅಣ್ಣಿಗೇರಿ ತಾಲ್ಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಉಪಸ್ಥಿತರಿದ್ದರು.