Home ಜಿಲ್ಲೆ ನಿಖರ ಬೆಳೆ ಹಾನಿ ಸಮೀಕ್ಷೆಗೆ ಸೂಚನೆ

ನಿಖರ ಬೆಳೆ ಹಾನಿ ಸಮೀಕ್ಷೆಗೆ ಸೂಚನೆ

ಗದಗ,ಜು೯: ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಅಭಾವ ಹಾಗೂ ಕೃಷಿ ಬೆಳೆಗಳ ಪ್ರಸ್ತುತ ಸ್ಥಿತಿಗತಿ ಕುರಿತು ನಿಖರ ಬೆಳೆ ಹಾನಿ ಸಮೀಕ್ಷೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಳೆ ಕೊರತೆಯಿಂದ ಒಣಗುತ್ತಿರುವ ಬೆಳೆಗಳು, ಪರ್ಯಾಯ ಬೆಳೆ ಯೋಜನೆ ಹಾಗೂ ರೈತರಿಗೆ ನೀಡಬೇಕಾದ ಮಾರ್ಗಸೂಚಿಗಳ ಕುರಿತು ಸುದೀರ್ಘವಾಗಿ ಜಿಲ್ಲಾಧಿಕಾರಿಗಳು ವಿವಿಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಜುಲೈ ೧೫ರ ನಂತರವೂ ಮಳೆ ಕೊರತೆಯಾಗುವ ಮುನ್ಸೂಚನೆ ಇರುವುದರಿಂದ, ಹೆಚ್ಚಿನ ಕಡೆಗಳಲ್ಲಿ ಮರು ಬಿತ್ತನೆಗೆ (ಡಿe-soತಿiಟಿg ) ಅವಕಾಶಗಳು ಕಡಿಮೆ ಇವೆ. ಬಿತ್ತನೆಯಾಗದೇ ಉಳಿದ ಪ್ರದೇಶದಲ್ಲಿ ಕಡಿಮೆ ಅವಧಿಯ ಪರ್ಯಾಯ ತಳಿಗಳಾದ ಈರುಳ್ಳಿ ಅಥವಾ ಅಲ್ಪಾವಧಿ ತರಕಾರಿ ಬೆಳೆಗಳನ್ನು ಬೆಳೆಯಲು ರೈತರಿಗೆ ಕೃಷಿ ಇಲಾಖೆಯಿಂದ ತಕ್ಷಣವೇ ಸೂಕ್ತ ತಾಂತ್ರಿಕ ಮಾರ್ಗದರ್ಶನ ಹಾಗೂ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲೆಯಲ್ಲಿ ಇತ್ತೀಚೆಗೆ ಅಲ್ಲಲ್ಲಿ ಬೀಳುತ್ತಿರುವ ಸಾಧಾರಣ ಮಳೆಯಿಂದಾಗಿ ರೈತರಲ್ಲಿ ಸಣ್ಣದೊಂದು ಆಶಾಭಾವನೆ ಮೂಡಿದೆ ಎಂದರು. ಜಿಲ್ಲೆಯಲ್ಲಿ ಸದ್ಯ ಶೇಕಡಾ ೨೦ ರಿಂದ ೩೦ ರಷ್ಟು ಭಾಗಗಳಲ್ಲಿ ಮಾತ್ರ ಮೊಳಕೆಯೊಡೆದ ಸಸಿಗಳು ಹಸಿರಾಗಿವೆ. ಇನ್ನುಳಿದ ಕೆಲವು ಭಾಗಗಳಲ್ಲಿ ಶೇಕಡಾ ೨೦ ರಿಂದ ೩೦ ರಷ್ಟು ಜರ್ಮಿನೇಷನ್ (ಮೊಳಕೆಯೊಡೆಯುವಿಕೆ) ಪ್ರಕ್ರಿಯೆ ಸಂಪೂರ್ಣ ಒಣಗಿಹೋಗಿದ್ದು, ಇನ್ನುಳಿದ ಭಾಗಗಳಲ್ಲಿ ಮಳೆಯ ಕೊರತೆಯಿಂದಾಗಿ ಬೆಳೆಗಳು ಬಾಡುತ್ತಿವೆ ಎಂದು ಕಳವಳ ಜಿಲ್ಲಾಧಿಕಾರಿಗಳು ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದರೆ ಮಾತ್ರ ಶೇಕಡಾ ೪೦ ರಿಂದ ೫೦ ರಷ್ಟು ಇಳುವರಿ ನಿರೀಕ್ಷಿಸಬಹುದಾಗಿದೆ ಎಂದು ಅವರು ತಿಳಿಸಿದರು.

ರೈತರಿಗೆ ರಸಗೊಬ್ಬರ ವಿತರಣೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದAತೆ ಹಾಗೂ ಕೃತಕ ಅಭಾವ ಸೃಷ್ಟಿಯಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಜಂಟಿ ಕೃಷಿ ನಿರ್ದೇಶಕರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಒಂದು ವೇಳೆ ಜಿಲ್ಲೆಯಲ್ಲಿ ಮಳೆ ಹೆಚ್ಚಾದಲ್ಲಿ ಗೊಬ್ಬರದ ಬೇಡಿಕೆಯೂ ಹೆಚ್ಚಾಗುವ ಸಂಭವವಿದ್ದು ಪರಿಸ್ಥಿತಿಗೆ ತಕ್ಕಂತೆ ರಸಗೊಬ್ಬರದ ದಾಸ್ತಾನು ಇಟ್ಟುಕೊಳ್ಳಲು ಕ್ರಮ ವಹಿಸಬೇಕೆಂದು ಕೃಷಿ ಇಲಾಖೆಯ ಅಧಿಕಾರಿಗಳು ಜಿಲ್ಲಾಧಿಕಾರಿ ಸೂಚಿಸಿದರು.

ರೈತರಿಗೆ ಬೆಳೆ ವಿಮೆಯ ಸೌಲಭ್ಯ ಸಮರ್ಪಕವಾಗಿ ತಲುಪುವಂತೆ ಕೃಷಿ ಇಲಾಖೆಯ ನೋಡಿಕೊಳ್ಳಬೇಕು. ಪ್ರಮುಖವಾಗಿ ಬೆಳೆ ಸಾಲ ಪಡೆಯುವ ರೈತರಿಗೆ ವಿಮೆಯಿಂದ ಹೊರಗುಳಿಯಲು ಇರುವ ‘ಆಪ್ಟ್-ಔಟ್’ ಆಯ್ಕೆಯ ಕುರಿತು ಚರ್ಚಿಸಿ, ರೈತರು ತಮಗೆ ಇಷ್ಟವಿರುವ ಅಥವಾ ತಾವು ಬೆಳೆದ ಬೆಳೆಗೆ ಮಾತ್ರ ವಿಮೆ ಮಾಡಿಸಲು ಇರುವ ತಾಂತ್ರಿಕ ತೊಂದರೆಗಳನ್ನು ನಿವಾರಿಸಲು ಹಾಗೂ ಸರ್ಕಾರದ ನಿಯಮಾವಳಿಗಳಂತೆ ರೈತರಿಗೆ ಗರಿಷ್ಠ ಅನುಕೂಲ ಮಾಡಿಕೊಡಲು ಜಿಲ್ಲಾಧಿಕಾರಿ ಸೂಚನೆ ನೀಡಿದರು .

ಜಿಲ್ಲೆಯ ಎಲ್ಲಾ ತಹಶೀಲ್ದಾರರು ಹಾಗೂ ಸಂಬAಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಿ, ಬೆಳೆ ಸಮೀಕ್ಷೆಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಈ ಕಾರ್ಯದಲ್ಲಿ ಯಾವುದೇ ರೀತಿಯ ನಿರ್ಲಕ್ಷö್ಯವನ್ನು ಸಹಿಸುವುದಿಲ್ಲ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಬ್ಯಾಂಕ್‌ಗಳ ಮೂಲಕ ಸಾಲ ಪಡೆದ ಹಾಗೂ ಸಾಲ ಪಡೆಯದ ರೈತರಿಗೆ ಬೆಳೆ ವಿಮೆ ಕಡ್ಡಾಯವಾಗಿ ತಲುಪುವಂತಾಗಬೇಕು. ವಿಮಾ ಯೋಜನೆಗೆ ನೋಂದಾಯಿಸಿಕೊಳ್ಳಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಗರಿಷ್ಠ ಸಂಖ್ಯೆಯ ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಬ್ಯಾಂಕ್‌ಗಳು ಹಾಗೂ ಕೃಷಿ ಇಲಾಖೆ ಸಮನ್ವಯತೆಯಿಂದ ಕೆಲಸ ಮಾಡಬೇಕು. ರೈತರಲ್ಲಿ ಈ ಕುರಿತು ವ್ಯಾಪಕ ಜಾಗೃತಿ ಮೂಡಿಸಬೇಕೆಂದರು.

ಜಿಲ್ಲೆಯಲ್ಲಿನ ಎಲ್ಲ ತಾಲೂಕುಗಳಲ್ಲಿನ ಬೋರ್‌ವೆಲ್‌ಗಳು, ಶುದ್ಧ ಕುಡಿಯುವ ನೀರಿನ ಘಟಕಗಳು ಹಾಗೂ ನೀರಿನ ಮೂಲಗಳ ಮಾಹಿತಿಯನ್ನು ಪಡೆದ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಬೇಡಿಕೆಗೆ ತಕ್ಕಂತೆ ಪರ್ಯಾಯ ಮೂಲಗಳಿಂದ ನೀರಿನ ಸರಬರಾಜು ಪ್ರಮಾಣವನ್ನು ಸುಧಾರಿಸಲು ನಿರ್ದೇಶನ ನೀಡಿದರು. ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ಪೂರೈಕೆಯಲ್ಲಿ ಅಭಾವ ಉಂಟಾಗಬಾರದು ಎಂದು ಸೂಚನೆ ನೀಡಿದರು.