
ಆಳಂದ: ಪಟ್ಟಣದಲ್ಲಿ ಗಣೇಶೋತ್ಸವವನ್ನು ಶಾಂತಿ, ಸುವ್ಯವಸ್ಥೆ ಹಾಗೂ ಸೌಹಾರ್ದತೆಯಿಂದ ಆಚರಿಸುವ ಜೊತೆಗೆ ಸರ್ಕಾರದ ನಿಯಮಾವಳಿ ಮತ್ತು ಕಾನೂನು ಚೌಕಟ್ಟನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ತಹಸೀಲ್ದಾರ ಅಣ್ಣಾರಾವ್ ಪಾಟೀಲ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಹಿನ್ನೆಲೆಯಲ್ಲಿ ಬುಧವಾರ ಆಯೋಜಿಸಿದ್ದ ನಾಗರಿಕರ ಶಾಂತಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಗಣೇಶ ಮೂರ್ತಿ ಪ್ರತಿμÁ್ಠಪನೆ ಹಾಗೂ ಉತ್ಸವ ಆಚರಣೆಗೆ ಸಂಬಂಧಿಸಿದಂತೆ ಸರ್ಕಾರ ರೂಪಿಸಿರುವ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಸಂಘಟಕರು ಕಡ್ಡಾಯವಾಗಿ ಪಾಲಿಸಬೇಕು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಮುನ್ನೆಚ್ಚರಿಕೆ ವಹಿಸಿ, ಎಲ್ಲ ಸಮುದಾಯಗಳ ಭಾವನೆಗಳಿಗೆ ಗೌರವ ನೀಡುವ ಮೂಲಕ ಹಬ್ಬವನ್ನು ಸೌಹಾರ್ದಯುತವಾಗಿ ಆಚರಿಸಬೇಕು ಎಂದು ಸಲಹೆ ನೀಡಿದರು.
ಗಣೇಶ ಮೂರ್ತಿ ಪ್ರತಿμÁ್ಠಪನೆಗೆ ಸ್ಥಳ, ಮೆರವಣಿಗೆ, ಧ್ವನಿವರ್ಧಕ ಬಳಕೆ ಸೇರಿದಂತೆ ವಿವಿಧ ವಿಚಾರಗಳಲ್ಲಿ ಸಂಬಂಧಪಟ್ಟ ಇಲಾಖೆಗಳ ಅಗತ್ಯ ಅನುಮತಿಯನ್ನು ಪಡೆದುಕೊಳ್ಳಬೇಕು. ಉತ್ಸವದ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಾಗೂ ಸಂಚಾರಕ್ಕೆ ತೊಂದರೆಯಾಗದಂತೆ ಸಂಘಟಕರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಪುರಸಭೆ ಮುಖ್ಯಾಧಿಕಾರಿ ಸಂಗಮೇಶ ಪನಶೆಟ್ಟಿ ಮಾತನಾಡಿ, ಗಣೇಶೋತ್ಸವ ಆಚರಣೆಗೆ ಪುರಸಭೆಯಿಂದ ಅಗತ್ಯವಿರುವ ಅನುಮತಿ, ಪ್ರತಿμÁ್ಠಪನಾ ಸ್ಥಳದ ವ್ಯವಸ್ಥೆ, ಸ್ವಚ್ಛತೆ ಸೇರಿದಂತೆ ಪುರಸಭೆಯ ನಿಯಮಗಳ ಕುರಿತು ಮಾಹಿತಿ ನೀಡಿದರು. ಉತ್ಸವ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಸಂಘಟಕರು ಸಹಕರಿಸಬೇಕು ಎಂದು ಹೇಳಿದರು.
ಡಿವೈಎಸ್ಪಿ ತಪ್ಪರಾಯ ಪಾಟೀಲ ಮಾತನಾಡಿ, ಗಣೇಶೋತ್ಸವವನ್ನು ಸಂಪೂರ್ಣ ಶಾಂತಿಯುತವಾಗಿ ಆಚರಿಸಲು ಪೊಲೀಸ್ ಇಲಾಖೆಯೊಂದಿಗೆ ಸಂಘಟಕರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು. ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುವ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಮೆರವಣಿಗೆ ಸಂದರ್ಭದಲ್ಲಿ ನಿಗದಿಪಡಿಸಿದ ಮಾರ್ಗ ಹಾಗೂ ನಿಯಮಗಳನ್ನು ಪಾಲಿಸಿ, ಯಾವುದೇ ಗೊಂದಲ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದರು.
ಸಿಪಿಐ ಶರಣಬಸಪ್ಪ ಕೊಡ್ಲಾ ಹಾಗೂ ಜೆಸ್ಕಾಂ ಅಧಿಕಾರಿಗಳು ಉತ್ಸವದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳು, ವಿದ್ಯುತ್ ಸಂಪರ್ಕ, ಸುರಕ್ಷತೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಿದರು.
ಸಭೆಯಲ್ಲಿ ಭಾಗವಹಿಸಿದ್ದ ನಾಗರಿಕ ಮುಖಂಡರು ಗಣೇಶೋತ್ಸವ ಸ್ಥಳಗಳಲ್ಲಿ ಸಮರ್ಪಕ ಸ್ವಚ್ಛತಾ ವ್ಯವಸ್ಥೆ, ವಿದ್ಯುತ್ ಸಂಪರ್ಕ ಹಾಗೂ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು ಎಂದು ಅಧಿಕಾರಿಗಳಲ್ಲಿ ಮನವಿ ಮಾಡಿದರು. ಗಣೇಶೋತ್ಸವವನ್ನು ಎಲ್ಲರೂ ಒಗ್ಗಟ್ಟಿನಿಂದ, ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಲು ಅಗತ್ಯ ಸಹಕಾರ ನೀಡುವುದಾಗಿ ಮುಖಂಡರು ತಿಳಿಸಿದರು.
ಸಭೆಯಲ್ಲಿ ವಿವಿಧ ಗಣೇಶೋತ್ಸವ ಸಮಿತಿಗಳ ಪದಾಧಿಕಾರಿಗಳು, ನಾಗರಿಕ ಮುಖಂಡರು ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.























