
ಬೆಂಗಳೂರು,ಆ.೧೫: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆಯಿಂದ ಸೇವೆಯಲ್ಲಿರುವಾಗ ಅಪಘಾತ ಹಾಗೂ ಸಹಜ ಮರಣ ಹೊಂದಿದ ೬೫ ಸಿಬ್ಬಂದಿಗಳ ಅವಲಂಭಿತರಿಗೆ ಗುಂಪು ವಿಮಾ ಯೋಜನೆ, ಕಾರ್ಪೊರೇಟ್ ಸ್ಯಾಲರಿ ಪ್ಯಾಕೇಜ್ ವಿಮಾ ಚೆಕ್ ಪರಿಹಾರ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರು, ಸಿಬ್ಬಂದಿ ಹಾಗೂ ಅವರ ಅವಲಂಭಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಯೋಜನೆಯಡಿ ರೂ.೧ ಕೋಟಿ ಅಪಘಾತ ಪರಿಹಾರ ವಿಮಯ ಚೆಕ್ ವಿತರಣೆ ಮಾಡಿದರು.
ಬಳಿಕ ಮಾತನಾಡಿದ ಅವರು, ಮೃತಪಟ್ಟ ಚಾಲನಾ ಸಿಬ್ಬಂದಿಗಳನ್ನು ಮರಳಿ ತರಲು ಸಾಧ್ಯವಿಲ್ಲ. ಕುಟುಂಬದವರು ಹಣವನ್ನು ಬ್ಯಾಂಕಿನಲ್ಲಿ ಸ್ಥಿರ ಠೇವಣಿಯನ್ನು ಇಟ್ಟು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಗೂ ತಮ್ಮ ಮುಂದಿನ ಜೀವನಕ್ಕಾಗಿ ಕಾಪಾಡಿಕೊಳ್ಳಬೇಕು.ಅನುಕಂಪ ಆಧಾರದ ಮೇಲಿನ ಕೆಲಸಕ್ಕೆ ಅರ್ಜಿ ಸಲ್ಲಿಸಲು ತಿಳಿಸಿದರು. ನಿಗಮದ ಸಿಬ್ಬಂದಿಗಳ ಹಾಗೂ ಕುಟುಂಬದವರ ಹಿತಾಸಕ್ತಿ ಕಾಪಾಡಲು ನಾವು ನಿಮ್ಮೊಡನೆ ಸದಾ ಇರುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಬೆಂ.ಮ.ಸಾ.ಸಂಸ್ಥೆಯ ಅಧ್ಯಕ್ಷ ವಿ.ಎಸ್. ಆರಾಧ್ಯ, ಉಪಾಧ್ಯಕ್ಷ ನಿಕೇತ್ ರಾಜ್.ಎಂ.,ಸಾರಿಗೆ ಇಲಾಖೆಯ ಕಾರ್ಯದರ್ಶಿ ದೀಪ ಚೋಳನ್, ಕರಾರಸಾನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್, ಬೆಂ.ಮ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಿರ್ದೇಶಕರಾದ ಅಬ್ದುಲ್ ಅಹದ್ ಹಾಗೂ ಗಾಯಿತ್ರಿ ಕೆ.ಎಂ ಭಾಗವಹಸಿದ್ದರು.
ಇದುವರೆವಿಗೂ ೩೪ ಪ್ರಕರಣಗಳಲ್ಲಿ ಕುಟುಂಬದವರಿಗೆ ತಲಾ ರೂ.೧ ಕೋಟಿಗಳಂತೆ ಒಟ್ಟು ರೂ. ೩೪.೦೦ ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ವಿತರಿಸಲಾಗಿದೆ.































