
ಯಾದಗಿರಿ:ಮಾ.೨೬: ಒಳ ಮೀಸಲಾತಿ ಜಾರಿಗೆ ಸಂಬAಧಿಸಿದAತೆ ರಾಜ್ಯದಲ್ಲಿ ಮತ್ತೆ ರಾಜಕೀಯ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸರ್ಕಾರ ತಕ್ಷಣ ಸ್ಪಷ್ಟ ನಿರ್ಧಾರ ಕೈಗೊಳ್ಳದಿದ್ದರೆ ಅದರ ಪರಿಣಾಮ ಉಪ ಚುನಾವಣೆಗಳಲ್ಲಿ ಗೋಚರಿಸಲಿದೆ ಎಂಬ ಎಚ್ಚರಿಕೆಯನ್ನು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ (ಎಂಆರ್‌ಪಿಎಸ್) ಜಿಲ್ಲಾ ಅಧ್ಯಕ್ಷ ಕಾಶಪ್ಪ ಮಾದಿಗ ಹೆಗ್ಗಣಗೇರಾ ನೀಡಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೈಗೊಂಡಿರುವ ೫೬ ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ಒಳ ಮೀಸಲಾತಿ ಸಂಪೂರ್ಣವಾಗಿ ಜಾರಿಗೆ ಬರಬೇಕು. ಜೊತೆಗೆ, ರೋಸ್ಟರ್ ವ್ಯವಸ್ಥೆಯಲ್ಲಿ ಇರುವ ಅಸಮತೋಲನವನ್ನು ಸರಿಪಡಿಸಿ ನ್ಯಾಯಸಮ್ಮತ ನೇಮಕಾತಿಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಇಲ್ಲವಾದಲ್ಲಿ, ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದರೊಂದಿಗೆ ರಾಜಕೀಯವಾಗಿ ಸ್ಪಷ್ಟ ಸಂದೇಶ ನೀಡಲಾಗುವುದು ಎಂದು ಹೇಳಿದರು.
ಮಾದಿಗ ಸಮುದಾಯವು ಒಳ ಮೀಸಲಾತಿಗಾಗಿ ದೀರ್ಘಕಾಲದಿಂದ ಹೋರಾಟ ನಡೆಸುತ್ತಿದ್ದು, ಅನೇಕ ಹಂತಗಳಲ್ಲಿ ಪ್ರತಿಭಟನೆಗಳನ್ನು ಸಂಘಟಿಸಿದೆ. ಈ ಹೋರಾಟಕ್ಕೆ ಪದ್ಮಶ್ರೀ ಪುರಸ್ಕೃತ ಮಂದಕೃಷ್ಣ ಮಾದಿಗ ಅವರ ನೇತೃತ್ವದಲ್ಲಿ ರಾಜ್ಯಮಟ್ಟದಿಂದ ರಾಷ್ಟ್ರಮಟ್ಟದವರೆಗೆ ಬಲಿಷ್ಠ ರೂಪ ದೊರೆತಿದೆ. ರಾಜ್ಯಾಧ್ಯಕ್ಷ ನರಸಪ್ಪ ಬಿ ಮತ್ತು ಉಪಾಧ್ಯಕ್ಷ ಗಣೇಶ್ ದುಪ್ಪಳ್ಳಿ ಅವರ ಮಾರ್ಗದರ್ಶನದಲ್ಲಿ ಫ್ರೀಡಂ ಪಾರ್ಕ್ ಸೇರಿದಂತೆ ಹಲವೆಡೆ ಹೋರಾಟಗಳು ನಡೆದಿವೆ ಎಂದು ವಿವರಿಸಿದರು.
ಯಾದಗಿರಿ ಜಿಲ್ಲೆಯಲ್ಲಿ ಕೂಡ ಒಳ ಮೀಸಲಾತಿ ಪರವಾಗಿ ನಿರಂತರ ಚಳವಳಿಗಳು ನಡೆದಿದ್ದು, ಸ್ಥಳೀಯ ಮಟ್ಟದಲ್ಲಿ ಜನಜಾಗೃತಿ ಮೂಡಿಸಲಾಗಿದೆ. “ಸರ್ಕಾರ ನಮ್ಮ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ, ಮುಂಬರುವ ಉಪ ಚುನಾವಣೆಗಳಲ್ಲೇ ಅದರ ಪ್ರತಿಫಲ ಕಾಣಿಸಿಕೊಳ್ಳುತ್ತದೆ. ಮುಂದಿನ ೨೦೨೮ರ ವಿಧಾನಸಭಾ ಚುನಾವಣೆಯಲ್ಲಿಯೂ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ನಮ್ಮ ನಿಲುವು ಸ್ಪಷ್ಟವಾಗಿರಲಿದೆ,” ಎಂದು ಕಾಶಪ್ಪ ಮಾದಿಗ ಹೇಳಿದರು.
ಇನ್ನೂ, ಯಾದಗಿರಿ ಜಿಲ್ಲೆಯ ಯಾದಗಿರಿ, ಸುರಪುರ, ಶಹಾಪುರ ಮತ್ತು ಗುರುಮಠಕಲ್ ಕ್ಷೇತ್ರಗಳ ಜನಪ್ರತಿನಿಧಿಗಳು ಸದನದಲ್ಲಿ ಒಳ ಮೀಸಲಾತಿ ಪರವಾಗಿ ಧ್ವನಿ ಎತ್ತಬೇಕು. ಅದರಲ್ಲಿ ವಿಫಲರಾದರೆ ಜನತೆ ತಕ್ಕ ಉತ್ತರ ನೀಡಲಿದೆ ಎಂದು ಎಚ್ಚರಿಸಿದರು.
ಮಾರ್ಚ್ ೨೭ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ಸಂಬAಧಿಸಿದAತೆ ಸ್ಪಷ್ಟ ಆದೇಶ ಹೊರಡಿಸಬೇಕೆಂದು ಒತ್ತಾಯಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ಈ ವಿಷಯಕ್ಕೆ ಸ್ಪಂದಿಸಿ ಮಾದಿಗ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು.




























