ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಗದಗ, ಸೆ18: ವಿಶ್ವದಲ್ಲಿ ಹಲವಾರು ದೇಶಗಳು ಪ್ರಜಾಪ್ರಭುತ್ವಕ್ಕೆ ತಮ್ಮ ತಮ್ಮ ವಿಚಾರಗಳನ್ನು ಅಳವಡಿಸಿಕೊಂಡಿವೆ. ಆದರೆ ಭಾರತ ದೇಶವು ವಿಶ್ವದಲ್ಲಿಯೇ ಶ್ರೇಷ್ಠ ಪ್ರಜಾಪ್ರಭುತ್ವ ಹೊಂದಿದ ದೇಶವಾಗಿದೆ ಎಂದು ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ ತಿಳಿಸಿದರು.

ಗದಗ ಜಿಲ್ಲಾಡಳಿತ ಭವನದ ಆಡಿಟೋರಿಯ ಹಾಲ್‍ದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ , ಸಮಾಜ ಕಲ್ಯಾಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನಮ್ಮ ದೇಶಕ್ಕೆ ಸ್ವಾತಂತ್ರ?ಯ ಸಿಕ್ಕ ನಂತರ ಪ್ರಜೆಗಳ ಹಿತಕ್ಕೋತಸ್ಕರವಾಗಿಯೇ ಪ್ರಜಾಪ್ರಭುತ್ವದ ಅವಶ್ಯಕತೆ ಇದೆ ಎನ್ನುವ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರದಿಂದಲೇ ದೇಶವು ಅಖಂಡ ಭಾರತವಾಗಿ ಉಳಿಯಲು ಸಾಧ್ಯವಾಯಿತು. ಪ್ರಜಾಪ್ರಭುತ್ವ ವ್ಯವಸ್ಥೆ ಮನವರಿಕೆ ಮಾಡಲು 2007 ರಲ್ಲಿ ಯುನೈಟೆಡ್ ನೇಶನ್ ದ ಸದಸ್ಯರೆಲ್ಲರೂ ನಿರ್ಣಯಿಸಿದರು. ತದನಂತರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು 2008 ರಿಂದ ಆಚರಿಸಲಾಗುತ್ತಿದೆ. ಸರ್ಕಾರ ಮತ್ತು ಪ್ರಜೆಗಳ ಮಧ್ಯೆ ಆಡಳಿತ ವ್ಯವಸ್ಥೆ ಕಲ್ಪಿಸುವ ಮಹತ್ವದ ಹೆಜ್ಜೆ ಇದಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಚಿಂತನೆಗಳು ಪೂರ್ಣ ಪ್ರಮಾಣದಲ್ಲಿ ಸಾಧಿಸಬೇಕಾಗಿದೆ. ವಿಶೇಷವಾಗಿ ಆರ್ಥಿಕ ಮತ್ತು ಸಾಮಾಜಿಕ ಸಮಾನತೆ ತರಬೇಕಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿಲ್ಲದ ದೇಶಗಳೂ ಸಹಿತ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಒಪ್ಪಿಕೊಳ್ಳುವ ಮಹತ್ವದ ಹೆಜ್ಜೆ ಇಡಬೇಕು.

ಪ್ರಜಾಪ್ರಜಾಪ್ರಭುತ್ವದಲ್ಲಿ ಶಾಂತಿ ಮತ್ತು ಸಮಾನತೆ ಅವಕಾಶ ಕಲ್ಪಿಸಲಾಗಿದೆ ಎಂದರು.
ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಮಾತನಾಡಿ ಪ್ರಜೆಗಳ ಅಧೀನದಲ್ಲಿನ ಸರ್ಕಾರವೇ ಪ್ರಜಾಪ್ರಭುತ್ವವಾಗಿದೆ. ಪ್ರತಿಯೊಬ್ಬರೂ ಸ್ವಾತಂತ್ರ?ಯವಾಗಿ ಇರುವುದು ಸಂವಿಧಾನದಿಂದ ಸಾಧ್ಯವಾಗಿದೆ. ಸಮಾಜದಲ್ಲಿನ ಎಲ್ಲ ಪ್ರಜೆಗಳೂ ಕಾನೂನಿನ ಚೌಕಟ್ಟಿನೊಳಗೆ ಇರಬೇಕಾಗುತ್ತದೆ. ಎಂತಹ ಪ್ರತಿಷ್ಟಿತ ವ್ಯಕ್ತಿಯೂ ಸಹಿತ ಕಾನೂನು ಉಲ್ಲಂಘನೆ ಮಾಡಿದರೆ ತಕ್ಕ ಶಿಕ್ಷೆ ಅನುಭವಿಸಬೇಕಾಗುತ್ತದೆ. ಸಂವಿಧಾನದ ಬೆಲೆ ಶಿಕ್ಷಣ ಪಡೆದಾಗ ಮಾತ್ರ ಸಾಧ್ಯವಾಗುತ್ತದೆ. ಸಂವಿಧಾನದಲ್ಲಿ ಮೀಸಲಾತಿ ಇರದೇ ಹೋಗಿದ್ದರೆ ಕೆಳವರ್ಗದ ಪ್ರಜೆಗಳು ಸಮಾಜ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಪ್ರಜಾಪ್ರಭುತ್ವದ ಕುರಿತು ಇನ್ನೂ ಹೆಚ್ಚು ಅರಿವು ಮೂಡಿಸುವ ಕಾರ್ಯವು ಜಿಲ್ಲೆಯ ಪ್ರತಿ ಗ್ರಾಮದಲ್ಲಿ ಆಗಬೇಕಿದೆ ಎಂದು ಡಾ.ಚಂದ್ರು ಲಮಾಣಿ ಅಭಿಪ್ರಾಯ ಪಟ್ಟರು.

ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಸಂವಿಧಾನ ಪ್ರಸ್ತಾವನೆಯನ್ನು ಬೋಧಿಸಿದರು. ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಚಿತ್ರಕಲೆ, ಭಾಷಣ ಸ್ಪರ್ಧೆ, ಪ್ರಬಂಧ ಸ್ಪರ್ಧೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಗದಗ ಬೆಟಗೇರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಪೆÇಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ , ಎಸ್.ಎನ್.ಬಳ್ಳಾರಿ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್ ಕೆ.ಆರ್. ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗಣ್ಯರು, ಸಿಬ್ಬಂದಿಗಳು ಹಾಜರಿದ್ದರು.

ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ನಾಡಗೀತೆ ಪ್ರಸ್ತುತಪಡಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಸರ್ವರನ್ನು ಸ್ವಾಗತಿಸಿದರು. ಎಚ್.ಆರ್.ಸಕ್ರಿ ವಂದಿಸಿದರು. ವೀರಯ್ಯ ಹೊಸಮಠ ಕಾರ್ಯಕ್ರಮ ನಿರೂಪಿಸಿದರು.