
ಗದಗ,ಸೆ೧೬: ೬೦ ನೇ ಅಂತಾರಾಷ್ಟಿçÃಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಗದಗ ಜಿಲ್ಲಾ ಮಟ್ಟದ ಸಾಕ್ಷರತಾ ದಿನಾಚರಣೆಯನ್ನು ಜಿಲ್ಲಾಡಳಿತ ಕಛೇರಿಯ ಆವರಣದಲ್ಲಿ ನೆರವೇರಿಸಲಾಯಿತು. ಮುಕುಲ ಜೈನ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತ, ಗದಗ. ಇವರು ಸಾಕ್ಷರತಾ ಧ್ವಜಾರೋಹಣವನ್ನು ನೆರವೇರಿಸಿದರು. ಅಕ್ಷರವೆಂಬುದು ಕೇವಲ ಜ್ಞಾನವಲ್ಲ ಅದು ಬದುಕನ್ನು ಬದಲಿಸುವ ಶಕ್ತಿ. ಒಬ್ಬ ವ್ಯಕ್ತಿಗೆ ಅಕ್ಷರ ಕಲಿಸಿದರೆ ಒಂದು ಕುಟುಂಬಕ್ಕೆ ಬೆಳಕು ನಿಡಿದಂತೆ ಒಂದು ಸಮಾಜವನ್ನು ಸಾಕ್ಷರಗೊಳಿಸಿದರೆ ಇಡೀ ರಾಷ್ಟçಕ್ಕೆ ಬೆಳಕು ನೀಡಿದಂತೆ. ಸಾಕ್ಷರತೆಯು ವ್ಯಕ್ತಿಯ ಬದುಕನ್ನು ವ್ಯಯಕ್ತಿಕ ಅಭಿವೃದ್ಧಿ, ಆರ್ಥಿಕ ಅಭಿವೃದ್ಧಿ, ಸಾಮಾಜಿಕ ಜಾಗೃತಿ, ಪ್ರಜಾಪ್ರಭುತ್ವದ ಬಲವರ್ಧನೆ ಹಾಗೂ ಮಹಿಳಾ ಸಬಲೀಕರಣ ಹಾಗೂ ಇನ್ನೂ ಹಲವು ರೀತಿಯಲ್ಲಿ ಪರಿವರ್ತನೆ ಮಾಡುತ್ತದೆ. ಜಿಲ್ಲೆಯನ್ನು ಸಂಪೂರ್ಣ ಸಾಕ್ಷರಗೊಳಿಸಲು ಸಾಕ್ಷರತಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಸಿ.ಆರ್. ಮುಂಡರಗಿ, ಉಪಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ, ಕೆ.ಡಿ. ಬಡಿಗೇರ, ಪ್ರಾಚಾರ್ಯರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಗದಗ. ವಿ.ವಿ. ನಡುವಿನಮನಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಗದಗ ಗ್ರಾಮೀಣ ವಲಯ, ಜೆ.ಎ. ಬಾವಿಕಟ್ಟಿ, ಕ್ಷೇತ್ರ ಸಮನ್ವಯಾಧಿಕಾರಿಗಳು, ಗದಗ ಗ್ರಾಮೀಣ, ಎಸ್. ಆರ್. ನದಾಫ, ಶ್ರೀಮತಿ. ಎಸ್. ಬಿ. ಬನ್ನಿಕಲ್, ಶ್ರೀಮತಿ. ಕೆ.ಎ. ಹುಲಗೇರಿ, ಜಿ.ಡಿ. ದಾಸರ, ಎಸ್.ವಾಯ್ ವಿಬೂತಿ ಮತ್ತು ಗದಗ ಗ್ರಾಮೀಣ ವಿಭಾಗದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು ಮತ್ತು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಸಿಬ್ಬಂದಿ ವರ್ಗದವರು, ಸಾಕ್ಷರತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.




























