Home ಜಿಲ್ಲೆ ಅಂತಾರಾಷ್ಟಿçÃಯ ಸಾಕ್ಷರತಾ ದಿನಾಚರಣೆ

ಅಂತಾರಾಷ್ಟಿçÃಯ ಸಾಕ್ಷರತಾ ದಿನಾಚರಣೆ

ಗದಗ,ಸೆ ೧೧: ೬೦ ನೇ ಅಂತಾರಾಷ್ಟಿçÃಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಗದಗ ಜಿಲ್ಲಾ ಮಟ್ಟದ ಸಾಕ್ಷರತಾ ದಿನಾಚರಣೆಯನ್ನು ಜಿಲ್ಲಾಡಳಿತ ಕಛೇರಿಯ ಆವರಣದಲ್ಲಿ ನೆರವೇರಿಸಲಾಯಿತು. ಜಿಲ್ಲಾ ಪಂಚಾಯತ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮುಕುಲ್ ಜೈನ್, ಇವರು ಸಾಕ್ಷರತಾ ಧ್ವಜಾರೋಹಣವನ್ನು ನೆರವೇರಿಸಿದರು. ಅಕ್ಷರವೆಂಬುದು ಕೇವಲ ಜ್ಞಾನವಲ್ಲ ಅದು ಬದುಕನ್ನು ಬದಲಿಸುವ ಶಕ್ತಿ. ಒಬ್ಬ ವ್ಯಕ್ತಿಗೆ ಅಕ್ಷರ ಕಲಿಸಿದರೆ ಒಂದು ಕುಟುಂಬಕ್ಕೆ ಬೆಳಕು ನಿಡಿದಂತೆ ಒಂದು ಸಮಾಜವನ್ನು ಸಾಕ್ಷರಗೊಳಿಸಿದರೆ ಇಡೀ ರಾಷ್ಟçಕ್ಕೆ ಬೆಳಕು ನೀಡಿದಂತೆ. ಸಾಕ್ಷರತೆಯು ವ್ಯಕ್ತಿಯ ಬದುಕನ್ನು ವ್ಯಯಕ್ತಿಕ ಅಭಿವೃದ್ಧಿ, ಆರ್ಥಿಕ ಅಭಿವೃದ್ಧಿ, ಸಾಮಾಜಿಕ್ ಜಾಗೃತಿ, ಪ್ರಜಾಪ್ರಭುತ್ವದ ಬಲವರ್ಧನೆ ಹಾಗೂ ಮಹಿಳಾ ಸಬಲೀಕರಣ ಹಾಗೂ ಇನ್ನೂ ಹಲವು ರೀತಿಯಲ್ಲಿ ಪರಿವರ್ತನೆ ಮಾಡುತ್ತದೆ. ಜಿಲ್ಲೆಯನ್ನು ಸಂಪೂರ್ಣ ಸಾಕ್ಷರಗೊಳಿಸಲು ಸಾಕ್ಷರತಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಬೇಕು ಎಂದು ಹೇಳಿದರು.

ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಎಸ್.ಎಸ್. ಕುರಿಯವರ, ಕಾರ್ಯಕ್ರಮಕ್ಕೆ ಆಗಮಿಸಿದಂತಹ ಎಲ್ಲ ಗಣ್ಯರನ್ನೂ ಸ್ವಾಗತಿಸಿ ದೇಶದ, ರಾಜ್ಯದ ಹಾಗೂ ಜಿಲ್ಲೆಯ ಸಾಕ್ಷರತೆ ಕುರಿತು ಪ್ರಾಸ್ತಾವಿಕವಾಗಿ ಮಾತಾನಾಡುತ್ತಾ ಒಂದು ದೇಶದ ನಿಜವಾದ ಅಭಿವೃದ್ಧಿಯನ್ನು ಅಳೆಯಲು ಆ ದೇಶದ ಆರ್ಥಿಕ ಪ್ರಗತಿಯ ಜೊತೆಗೆ ಅಲ್ಲಿನ ಜನರ ಶಿಕ್ಷಣ ಮತ್ತು ಸಾಕ್ಷರತೆಯ ಮಟ್ಟವೂ ಪ್ರಮುಖ ಮಾನದಂಡವಾಗಿದೆ. ಸಾಕ್ಷರತೆ ಹೆಚ್ಚಾದಂತೆ ದೇಶದ ಅಭಿವೃದ್ಧಿಯೂ ವೇಗ ಪಡೆಯುತ್ತದೆ. ಸಾಕ್ಷರ ವ್ಯಕ್ತಿ ಉತ್ತಮ ಉದ್ಯೋಗ ಪಡೆಯಲು ಪ್ರಯತ್ನಿಸುತ್ತಾನೆ. ಆರೋಗ್ಯದ ಬಗ್ಗೆ ಜಾಗೃತನಾಗುತ್ತಾನೆ. ತನ್ನ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುತ್ತಾನೆ. ಸಮಾಜದ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುತ್ತಾನೆ. ಹೀಗಾಗಿ ಸಾಕ್ಷರತೆ ದೇಶದ ಮಾನವ ಸಂಪನ್ಮೂಲವನ್ನು ಬಲಪಡಿಸುತ್ತದೆ. ಜ್ಞಾನ ಹೊಂದಿರುವ ನಾಗರಿಕರೇ ದೇಶದ ದೊಡ್ಡ ಸಂಪತ್ತು. ಆದಕಾರಣ ಸಾಕ್ಷರತೆ ಒಂದು ಸರಕಾರಿ ಯೋಜನೆ ಮಾತ್ರವಲ್ಲ ಒಂದು ಸಾಮಾಜಿಕ ಚಳುವಳಿಯಾಗಿದೆ. ನಾವು ಕನಿಷ್ಠ ಒಬ್ಬ ಅನಕ್ಷರಸ್ಥ ವ್ಯಕ್ತಿಗೆ ಓದಲು ಮತ್ತು ಬರೆಯಲು ಕಲಿಸುವ ಸಂಕಲ್ಪ ಮಾಡಬೇಕಾಗಿರುವದರಿಂದ ಜಿಲ್ಲೆಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ತಮ್ಮ ಸಹಯೋಗದೊಂದಿಗೆ ಸಾಕ್ಷರತಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕೆಂದು ಹೇಳಿದರು.

ಯುವ ಸಬಲೀಕರಣ ಇಲಾಖೆ, ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ ಇವರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೆ ಸಾಕ್ಷರತಾ ಪ್ರಮಾಣ ವಚನವನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಚಾರ್ಯರು ಕೆ.ಡಿ. ಬಡಿಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ, ಗದಗ ಗ್ರಾಮೀಣ ವಲಯ, ಕ್ಷೇತ್ರ ಸಮನ್ವಯಾಧಿಕಾರಿ ಜೆ.ಎ. ಬಾವಿಕಟ್ಟಿ, ಗದಗ ಗ್ರಾಮೀಣ, ಎಸ್. ಆರ್. ನದಾಫ, ಶ್ರೀಮತಿ. ಎಸ್. ಬಿ. ಬನ್ನಿಕಲ್, ಶ್ರೀಮತಿ. ಕೆ.ಎ. ಹುಲಗೇರಿ, ಜಿ.ಡಿ. ದಾಸರ, ಡಿ.ವೈ.ಎಸ್.ಎಸ್. ರವಿ ಪ್ರಕಾಶ, ಎಸ್.ವಾಯ್ ವಿಬೂತಿ ಮತ್ತು ಗದಗ ಗ್ರಾಮೀಣ ವಿಭಾಗದ ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು ಮತ್ತು ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿಗಳು ಹಾಗೂ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯ ಸಿಬ್ಬಂದಿ ವರ್ಗದವರು, ಸಾಕ್ಷರತಾ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಾಸ್ತಿçÃಜಿ ಬಿ.ಎಡ್. ಕಾಲೇಜಿನ ಉಪನ್ಯಾಸಕರಾದ ರಾಜು ಕೇರೂರ ಹಾಗೂ ಕಾಲೇಜಿನ ಪ್ರಶಿಕ್ಷಣಾರ್ಥಿಗಳು, ಮತ್ತು ವಿಶೇಷವಾಗಿ ಯುವ ಸಬಲೀಕರಣ ಇಲಾಖೆಯ ವಿದ್ಯಾರ್ಥಿಗಳು, ಸಾಕ್ಷರತಾ ಕಾರ್ಯಕ್ರಮಗಳ ಬೋಧಕರೂ ಕೂಡಾ ಅಂತರಾಷ್ಟಿçÃಯ ಸಾಕ್ಷರತಾ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗು ತಂದರು.

ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯಿಂದ ಸಾಕ್ಷರತಾ ಕಾರ್ಯಕ್ರಮಕ್ಕೆ ಸಂಬAಧಿಸಿದ ಬಿತ್ತಿ ಪತ್ರಗಳನ್ನು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಹಿಸಿದ ಎಲ್ಲರೂ ಅನಾವರಣಗೊಳಿಸಿದರು.

ಕಾರ್ಯಕ್ರಮದ ನಿರೂಪಣೆಯನ್ನು ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಸಹಾಯಕರು ಅಶೋಕ ಇವರು ನಿರೂಪಿಸಿದರು.

ದೈಹಿಕ ಶಿಕ್ಷಕ ಎಸ್.ಎಸ್. ಮುಳಗುಂದ, ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಹಾಗೂ ಕೆ.ವಾಯ್. ವಿಬೂತಿ, ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಗದಗ. ಇವರು ವಂದನಾರ್ಪಣೆ ಮಾಡಿದರು.