
ಕಲಬುರಗಿ: ಅ.27:ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾಮಂಟಪದಲ್ಲಿ ರವಿವಾರದಂದು ಗೋದುತಾಯಿ ಇಂಜಿನಿಯರಿಂಗ್ ಮಹಿಳಾ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಮಶಿನ್ ಲರ್ನಿಂಗ್ ವಿಭಾಗದ ವತಿಯಿಂದ “ಕೃತಕ ಬುದ್ಧಿಮತ್ತೆ, ನಾವೀನ್ಯತೆ ಮತ್ತು ಸುಸ್ಥಿರತೆಯಲ್ಲಿ ಉದಯೋನ್ಮುಖ ಪ್ರವೃತ್ತಿಗಳು” ಕುರಿತು ಒಂದು ದಿನದ ಅಂತರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು.
ವಿಚಾರ ಸಂಕಿರಣದಲ್ಲಿ ಯುರೋಪ್‍ನ ಮಾಲ್ಟಾ ದೇಶದ ಬರ್ನಾರ್ಡ ಮಲ್ಲಿಯಾ ಹಾಗೂ ಇಟಲಿಯ ರೊಸ್ಸಾನಾ ಕ್ಯಾಪಿಟೊ, ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ, ನಿರ್ದೇಶಕ ಡಾ. ವಿ. ಡಿ. ಮೈತ್ರಿ, ಕುಲಸಚಿವ ಡಾ. ಎಸ್. ಜಿ. ಡೊಳ್ಳೆಗೌಡರ್, ಕುಲಸಚಿವ (ಮೌಲ್ಯಮಾಪನ) ಡಾ. ಎಸ್. ಎಚ್. ಹೊನ್ನಳ್ಳಿ, ಡೀನ್ ಡಾ. ಲಕ್ಷ್ಮೀ ಪಾಟೀಲ ಮಾಕಾ, ಹಣಕಾಸು ಅಧಿಕಾರಿ ಡಾ. ಕಿರಣ ಮಾಕಾ, ಡಾ. ಶಿವಕುಮಾರ ಜವಳಿಗಿ ಸೇರಿದಂತೆ ಅಧ್ಯಾಪಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.





























