Home ಜಿಲ್ಲೆ ಕಲಬುರಗಿ ಪಾಲಿಕೆವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಪಾಲಿಕೆವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಕಲಬುರಗಿ, ಮಾ.14- ಕಲ್ಬುರ್ಗಿ ಮಹಾನಗರ ಪಾಲಿಕೆಯ ವತಿಯಿಂದ ನಗರದ ಖಾಸಗಿ ಹೊಟೆಲ್ ನಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮ ಮೇಯರ್ ವರ್ಷಾ ಆರ್. ಜಾನೆ ಅವರ ನೆತೃತ್ವದಲ್ಲಿ ಅದ್ದೂರಿಯಾಗಿ ಜರುಗಿತು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್ ಅವರು, ಮಾತನಾಡಿ ಮಹಿಳೆಯರು ಇಂದು ಶಿಕ್ಷಣ, ಉದ್ಯೋಗ ಹಾಗೂ ಆಡಳಿತ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಸಾಮಥ್ರ್ಯವನ್ನು ಸಾಬೀತುಪಡಿಸುತ್ತಿದ್ದಾರೆ. ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಅತ್ಯಂತ ಮಹತ್ವದಾಗಿದೆ ಎಂದು ಹೇಳಿದರು.