
ಯಾದಗಿರಿ:ಮಾ.೧೬:ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧನೆ ಮಾಡುತ್ತಿರುವ ಬಗ್ಗೆ ಗಣ್ಯರು ಮಾತನಾಡಿ ಮಹಿಳೆಯರ ಕೊಡುಗೆಯನ್ನು ಪ್ರಶಂಸಿಸಿದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಮಂಜುಳಾ ಸಿ ಅವರು, ಸಮಾಜ ಸೇವೆ, ಕ್ರೀಡೆ, ರಾಜಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ. ಸಮಾನತೆ ಹಾಗೂ ಸಬಲ ಸಮಾಜ ನಿರ್ಮಾಣದಲ್ಲಿ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಆಯ್ಕೆಯಾದ ಮಹಿಳಾ ಕ್ರೀಡಾಪಟುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ಯಾದಗಿರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸುನಿತಾ ಚವಾಣ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಬಸವರಾಜಪ್ಪಗೌಡ ವಿಭೂತಿಹಳ್ಳಿ, ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಸುಗುಣ, ಮಾಜಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ನಾಗರತ್ನ ಕುಪ್ಪಿ, ಕಲಬುರ್ಗಿ ಜಿಲ್ಲಾ ಉಪಾಧ್ಯಕ್ಷೆ ಸಂತೋಷ್ ರಾಣಿ ತೆಲ್ಕೂರ್, ಮಹಿಳಾ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯೆ ವೀಣಾ ಮೋದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಮ್ಮ ಹೊಸಪೇಟ, ಜಿಲ್ಲಾ ಉಪಾಧ್ಯಕ್ಷೆ ಪ್ರಭಾವತಿ ಕಲಾಲ್, ಜಿಲ್ಲಾ ಕಾರ್ಯದರ್ಶಿಗಳಾದ ವಿಜಯಲಕ್ಷ್ಮಿ ನಾಯಕ್, ಲಕ್ಷ್ಮಿ ಚೌಹಾಣ್, ಅಮೃತ ಬೋರಾಬಂಡ, ಮಮತಾ ಜಾದವ್, ಸ್ನೇಹ ರಾಸೋಳಕರ, ಶಕುಂತಲಾ ಗುಜ್ಜಲೋರ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಭೀಮಾಬಾಯಿ ಸೆಂಡಿಗಿ, ಲಲಿತಾ ನಾಯಕ್ ಸೇರಿದಂತೆ ಹಲವು ಮಹಿಳಾ ಕಾರ್ಯಕರ್ತರು ಭಾಗವಹಿಸಿದ್ದರು.
ಇದೇ ವೇಳೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ್ ಕುರುಕುಂದ ಹಾಗೂ ಜಿಲ್ಲಾ ಕಚೇರಿ ಕಾರ್ಯದರ್ಶಿ ಚನ್ನವೀರಯ್ಯ ಹಿರೇಮಠ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.



























