
ಕಲಬುರಗಿ:ಮಾ.28: ನಗರದ ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ)ದಲ್ಲಿ ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಪೆÇೀಲೀಸ್ ಸಬ್ ಇನ್ಸ್ಪೆಕ್ಟರ್ ರೇಣುಕಾ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ಸಮಾಜದ ಶಕ್ತಿ ಆಗಿದ್ದು, ಆತ್ಮವಿಶ್ವಾಸ ಹಾಗೂ ಶಿಕ್ಷಣದ ಮೂಲಕ ತಮ್ಮ ಹಕ್ಕುಗಳನ್ನು ಸಾಧಿಸಬೇಕೆಂದು ಕರೆ ನೀಡಿದರು. ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಸದುಪಯೋಗ ಪಡೆಯುವಂತೆ ಅವರು ತಿಳಿಸಿದರು.
ಮುಖ್ಯ ಭಾಷಣಕಾರರಾದ ಡಾ. ಜಯದೇವಿ ಗಾಯಕವಾಡ ಅವರು ಮಹಿಳಾ ಶಿಕ್ಷಣದ ಮಹತ್ವವನ್ನು ವಿವರಿಸಿ, ಸಮಾಜದಲ್ಲಿ ಮಹಿಳೆಯರ ಪಾತ್ರ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವುದನ್ನು ಉಲ್ಲೇಖಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಸವಿತಾ ತಿವಾರಿ ವಹಿಸಿಕೊಂಡು ಮಾತನಾಡಿ, ವಿದ್ಯಾರ್ಥಿನಿಯರು ಶಿಕ್ಷಣದ ಜೊತೆಗೆ ಸಾಮಾಜಿಕ ಜಾಗೃತಿಯಲ್ಲಿಯೂ ಮುಂದಿರಬೇಕೆಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪಿ.ಜಿ. ವಿಭಾಗದ ಡೀನ್ ಡಾ. ಮಲ್ಲೇಶಪ್ಪ ಕುಂಬಾರ, ಯು.ಜಿ. ಕಲಾ ವಿಭಾಗದ ಡೀನ್ ಡಾ. ವಿಜಯಕುಮಾರ ಸಾಲಿಮನಿ, ವಾಣಿಜ್ಯ ವಿಭಾಗದ ಡೀನ್ ಡಾ. ರಾಜಕುಮಾರ ಸಲಗರ, ಯು.ಜಿ. ವಿಜ್ಞಾನ ವಿಭಾಗದ ಡೀನ್ ಡಾ. ದೌಲಪ್ಪ ಬಿ.ಹೆಚ್., ಪರೀಕ್ಷಾ ನಿಯಂತ್ರಕರು ಡಾ. ಟಿ.ವಿ. ಅಡಿವೇಶ, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ. ಶ್ರೀಮಂತ ಹೋಳ್ಳರ, ಐಕ್ಯೂಎಸಿ ಸಂಯೋಜಕ ಡಾ. ರಾಜಶೇಖರ ಮಡಿವಾಳ ಹಾಗೂ ಪತ್ರಾಂಕಿತ ವ್ಯವಸ್ಥಾಪಕ ಶ್ರೀ ಅಜಯಸಿಂಗ್ ತಿವಾರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಸಾಂಸ್ಕøತಿಕ ಸಂಚಾಲಕರಾದ ಡಾ. ಬಲಭೀಮ ಸಾಂಗ್ಲಿ ಹಾಗೂ ಸಿಬ್ಬಂದಿ ಕಾರ್ಯದರ್ಶಿಗಳಾದ ಡಾ. ರವೀಂದ್ರಕುಮಾರ ಭಂಡಾರಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಆಯೋಜಿಸಲಾಯಿತು.
ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಮಹಿಳಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಸ್ವಾಗತ ಗೀತೆ ಡಾ. ಶ್ಯಾಮಲಾ ಸ್ವಾಮಿ ಹಾಡಿದರು.ಪ್ರಾಸ್ತಾವಿಕ ನುಡಿ ಡಾ. ದವಲಪ್ಪ ಬಿ. ಹೆಚ್ಚ ಮಾಡಿದರು , ಸ್ವಾಗತ ಭಾಷಣ, ಡಾ.ರವೀಂದ್ರಕುಮಾರ್ ಭಂಡಾರಿ ಮಾಡಿದರು ಹಾಗೂ ಕಾರ್ಯಕ್ರಮದ ನಿರೂಪಣೆ ಡಾ.ಬಲಬೀಮ ಸಾಂಗ್ಲಿ ನಡೆಸಿಕೊಟ್ಟರು ಮತ್ತು ಡಾ.ಬಸಂತ್ ಸಾಗರ್ ವಂದಿಸಿದರು.



























