ಎಕ್ಸಲಂಟ್ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ಅಂತರಾಷ್ಟಿçÃಯ ಯೋಗ ದಿನಾಚರಣೆ

ಸಂಜೆವಾಣಿ ವಾರ್ತೆ,
ವಿಜಯಪುರ,ಜೂ.೨೩:ಅಂತರಾಷ್ಟಿçÃಯ ಯೋಗ ದಿನದ ಪ್ರಯುಕ್ತ ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಯೋಗ ದಿನವನ್ನು ಆಚರಿಸಲಾಯಿತು.
ಭೂಮಿಕಾ ರೋಹಿತೆ ಹಾಗೂ ಪೂಜಾ ವಿದ್ಯಾರ್ಥಿಗಳಿಗೆ ಯೋಗಾಭ್ಯಾಸವನ್ನು ಹೇಳಿಕೊಟ್ಟರು. ಹಲವಾರು ಆಸನಗಳನ್ನು ಮಾಡುವುದರಿಂದ ಆಗುವ ಲಾಭಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿ ಹೇಳಿದರು.
ಇದೇ ಸಂದರ್ಭದಲ್ಲಿ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದ ಸಹೋದರಿ ಗೀತಾ ಅಕ್ಕನವರು ಮಕ್ಕಳಿಗೆ ಧ್ಯಾನದ ಮಹತ್ವವನ್ನು ತಿಳಿಸಿಕೊಡುವುದರ ಜೊತೆಗೆ ಮಕ್ಕಳಿಗೆ ಧ್ಯಾನ ಮಡುವುದು ಹಾಗೂ ಮನಸ್ಸನ್ನು ಹೇಗೆ ಕೇಂದ್ರಿಕರಿಸುವುದು ಎನ್ನುವುದನ್ನು ತಿಳಿಸಿಕೊಟ್ಟರು. ಕಾರ್ಯಕ್ರಮದಲ್ಲಿ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ, ಪ್ರಾಚಾರ್ಯ ಶ್ರೀಕಾಂತ ಕೆ.ಎಸ್, ಆಂಗ್ಲ ಉಪನ್ಯಾಸಕ ಮುಸ್ತಾಕ ಮಲಘಾಣ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಸತಿನಿಲಯಗಳ ನಿಲಯ ಪಾಲಕರುಗಳು ಉಪಸ್ಥಿತರಿದ್ದರು.