Home ಜಿಲ್ಲೆ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಅಂತರಾಷ್ಟ್ರೀಯ ಯೋಗ ದಿನಾಚರಣೆ

ಧಾರವಾಡ, ಜೂ.೨೪: ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ ೨೧ ರಂದು ಧಾರವಾಡ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಯಿತು.


ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್. ವಿ. ವಿಜಯ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಯೋಗ ಮಾಡುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮಹತ್ವವನ್ನು ಸಾರಲು ಒತ್ತಡ ಮುಕ್ತ ಕಾರ್ಯ ಪರಿಸರವನ್ನು ನಿರ್ಮಿಸಲು ಯೋಗ ಅವಶ್ಯ ಇದೆ ಎಂದು ತಿಳಿಸಿದರು.


ಮುಖ್ಯ ಅತಿಥಿಗಳಾಗಿ ಜಿಲ್ಲಾ ನ್ಯಾಯಾಧೀಶರುಗಳು ಹಾಗೂ ವಕೀಲರ ಸಂಘದ ಅಧ್ಯಕ್ಷರು, ಹಾಜರಿದ್ದರು.


ಕಾರ್ಯಕ್ರಮದಲ್ಲಿ ನಗರದ ಎಲ್ಲ ನ್ಯಾಯಾಧೀಶರುಗಳು, ನ್ಯಾಯಾಂಗ ಇಲಾಖೆಯ ಸಿಬ್ಬಂದಿಯವರು, ವಕೀಲರು ಹಾಗೂ ಯೋಗ ತರಬೇತದಾರರಾಗಿ ಸಂಜೀವ್ ಕುಮಾರ್ ಹಡಗಲಿ (ವಕೀಲರು) ಅವರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.