Home ಜಿಲ್ಲೆ ಶ್ರೀ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಜಯಂತಿ ನಿಮಿತ್ಯರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕöÈತಿಕ ಸ್ಪರ್ಧೆಗಳಿಗೆ...

ಶ್ರೀ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ಜಯಂತಿ ನಿಮಿತ್ಯರಾಜ್ಯ ಮಟ್ಟದ ಕ್ರೀಡಾ ಮತ್ತು ಸಾಂಸ್ಕöÈತಿಕ ಸ್ಪರ್ಧೆಗಳಿಗೆ ಆಹ್ವಾನ

ತಾಳಿಕೋಟೆ, ಪರಮಪೂಜ್ಯ ಹಾನಗಲ್ಲ ಶ್ರೀ ಕುಮಾರ ಶಿವಯೋಗಿಗಳ ೧೫೯ನೇ ಜಯಂತಿ ಮಹೋತ್ಸವದ ಅಂಗವಾಗಿ ರಾಜ್ಯ ಮಟ್ಟದ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗಾಗಿ ವಿವಿಧ ಕ್ರೀಡಾ ಹಾಗೂ ಸಾಂಸ್ಕöÈತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಠಾನ ಗೋಣೆಬೀಡು, ಶ್ರೀ ಹಾನಗಲ್ಲ ಶ್ರೀ ಕುಮಾರ ಶಿವಯೋಗಿ ಸೇವಾ ಸಮಿತಿ ನವದೇಹಲಿ, ಹಾಗೂ ಕರ್ನಾಟಕ, ಅಖೀಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಸಂಯೋಜಕತ್ವದಲ್ಲಿ ನಡೆಯಲಿರುವ ಈ ಸ್ಪರ್ದೆಯಲ್ಲಿ ವಿದ್ಯಾರ್ಥಿಗಳು, ಯುವಜನರು ಹಾಗೂ ವಿವಿಧ ಕ್ಷೇತ್ರಗಳ ಪ್ರತಿಭಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ಜಯಂತಿ ಮಹೋತ್ಸವದ ಅಂಗವಾಗಿ ಪ್ರಬಂಧ, ಭಾಷಣ, ರಂಗೋಲಿ ಸೇರಿದಂತೆ ವಿವಿಧ ಸಾಂಸ್ಕöÈತಿಕ ಸ್ಪರ್ಧೆಗಳು ಹಾಗೂ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸುವುದು ಹಾಗೂ ಯುವಜನರಲ್ಲಿ ಸಾಂಸ್ಕöÈತಿಕ ಮತ್ತು ಕ್ರೀಡಾ ಚಟುವಟಿಕೆಗಳ ಬಗ್ಗೆ ಆಸಕ್ತಿ ಬೆಳೆಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.
ಸ್ಪರ್ಧೆಗಳಲ್ಲಿ ಭಾಗವಹಿಸುವವರಿಗೆ ಅಗತ್ಯ ಮಾರ್ಗದರ್ಶನ ಹಾಗೂ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದ್ದು, ವಿಜೇತರಿಗೆ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪ್ರಬಂಧ/ಸ್ಪರ್ಧಾ ಚಟುವಟಿಕೆಗಳು ಸಪ್ಟಂಬರ್ ೧೦ ರವರೆಗೆ ನಡೆಯಲಿದ್ದು ಸಪ್ಟಂಬರ್ ೨೯ ರಂದು ಭಹುಮಾನ ವಿತರಣಾ ಕಾರ್ಯಕ್ರಮವು ಜರುಗಲಿದೆ.
ಪ್ರಬಂಧ ಸ್ಪರ್ದೆಯಲ್ಲಿ ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನ ಚರಿತ್ರೆ, ಶ್ರೀ ಶವಯೋಗಿ ಮಂದಿರದ ಸ್ಥಾಪನೆ, ಅಖೀಲ ಭಾರತ ವೀರಶೈವ ಮಹಾ ಸಭಾದ ಸ್ಥಾಪನೆ, ಶಿಕ್ಷಣ ಕ್ಷೇತ್ರದಲ್ಲಿ ಕೊಡುಗೆ, ಮಹಿಳಾ ಶಿಕ್ಷಣಕ್ಕೆ ನೀಡಿದ ಪ್ರೋತ್ಸಾಹ, ಸಮಾಜ ಸುಧಾರಣಾ ಚಳುವಳಿಗಳು, ಧಾರ್ಮಿಕ ಹಾಗೂ ಸಾಂಸ್ಕೃತಿಕ ನಾಯಕತ್ವ, ಸಾಹಿತ್ಯ ಮತ್ತು ವಚನ ಪರಂಪರೆ, ರಾಷ್ಟç ನಿರ್ಮಾಣದ ಚಿಂತನೆ, ಇಂದಿನ ಯುವ ಜನತೆಗೆ ಅವರ ಆದರ್ಶಗಳ ಪ್ರಸ್ತುತತೆ ಬಗ್ಗೆ ವಿಷಯ ಒಳಗೊಂಡಿರುತ್ತದೆ.
ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಹಾಗೂ ಆಸಕ್ತರು ಸ್ಪರ್ಧೆಗಳಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸುವಂತೆ ಶ್ರೀ ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕರಾದ ಡಾ.ಮೋಹನ್ ರಾಜಣ್ಣ ಅವರು ತಿಳಿಸಿದ್ದಾರೆ.
ತಾವು ಬರೆದ ಪ್ರಬಂಧವನ್ನು ಶ್ರೀ ಪುಷ್ಪಗಿರಿ ಸಾಂಸ್ಕೃತಿಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿಗಳಾದ ಶ್ರೀಮತಿ ಉಮಾ ಮೋಹನ್ ಗೋಣೆಬೀಡು-೫೭೭೧೫೧, ಮೂಡಗೇರಿ ತಾಲೂಕು, ಚಿಕ್ಕಮಂಗಳೂರ ಜಿಲ್ಲೆ ಅವರ ಹೆಸರಿನಲ್ಲಿ ಪೋಸ್ಟ್ ಮೂಲಕ ಅಥವಾ ಮೇಲ್ ಐಡಿ:mohಚಿಟಿಡಿಚಿರಿಚಿಟಿಟಿಚಿgoಟಿibeಜu@gmಚಿiಟ.ಛಿom ಗೆ ಕಳುಹಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ: ೯೪೪೮೮೧೭೫೬೭, ೯೫೩೫೬೪೯೧೩೭ ಸಂಪರ್ಕಿಸಲು ಕೋರಲಾಗಿದೆ.