
ತಾಳಿಕೋಟೆ: ಪಂಚಮಸಾಲಿ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಇಷ್ಟಲಿಂಗ ಪೂಜಾ ದೀಕ್ಷಾ ಅಭಿಯಾನ ಕಾರ್ಯಕ್ರಮವು ಸೆ.೩ರಂದು ಬೆಳಿಗ್ಗೆ ೮ ಗಂಟೆಗೆ ತಾಳಿಕೋಟೆ ಪಟ್ಟಣದ ರಾಜವಾಡೆಯಲ್ಲಿರುವ ಶ್ರೀ ಶಿವ ಭವಾನಿ ಮಂದಿರದಲ್ಲಿ ನಡೆಯಲಿದೆ ಎಂದು ಸಮಾಜದ ಅಧ್ಯಕ್ಷ ಡಾ. ವ್ಹಿ.ಎಸ್. ಕಾರ್ಚಿ ಅವರು ತಿಳಿಸಿದ್ದಾರೆ.
ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾ ಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾ ಸ್ವಾಮಿಗಳ ದಿವ್ಯ ಸಾನಿದ್ಯದಲ್ಲಿ ಪಂಚಮಸಾಲಿ ಸಮಾಜದ ಧಾರ್ಮಿಕ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇಷ್ಟಲಿಂಗ ಪೂಜೆಯ ಮಹತ್ವವನ್ನು ಸಮಾಜ ಬಾಂಧವರಿಗೆ ತಿಳಿಸುವುದರ ಜೊತೆಗೆ, ಧಾರ್ಮಿಕ ಸಂಸ್ಕಾರ ಹಾಗೂ ಆಧ್ಯಾತ್ಮಿಕ ಜೀವನದ ಕಡೆಗೆ ಸಮಾಜದವರನ್ನು ಪ್ರೇರೇಪಿಸುವುದು ಕಾರ್ಯಕ್ರಮದ ಉದ್ದೇಶವಾಗಿದೆ.
ಕಾರ್ಯಕ್ರಮದಲ್ಲಿ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ಇಷ್ಟಲಿಂಗ ಪೂಜಾ ದೀಕ್ಷೆಯನ್ನು ಸ್ವೀಕರಿಸುವ ಮೂಲಕ ಧಾರ್ಮಿಕ ಆಚರಣೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಡಾ. ವ್ಹಿ.ಎಸ್. ಕಾರ್ಚಿ ಅವರು ಮನವಿ ಮಾಡಿದ್ದಾರೆ.
ಸೆ.೩ರಂದು ಬೆಳಿಗ್ಗೆ ೮ ಗಂಟೆಗೆ ಶ್ರೀ ಶಿವ ಭವಾನಿ ಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಅವರು ಕೋರಿದ್ದಾರೆ.































