ಉಪ ರಾಷ್ಟ್ರಪತಿ ಹುದ್ದೆಗೆ ಜಗದೀಪ್ ಧನ್ಕರ್ ರಾಜೀನಾಮೆ

ನವದೆಹಲಿ, ಜು.21-ಮಹತ್ವದ ಬೆಳವಣಿಗೆ ಯೊಂದರಲ್ಲಿ ಉಪರಾಷ್ಟ್ರಪತಿ ಹುದ್ದೆಗೆ ಇಂದು ರಾಜೀನಾಮೆ ನೀಡಿದ್ದಾರೆ.


ತಮ್ಮ‌ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಆರೋಗ್ಯದ ಕಡೆ ಗಮನ‌ಹರಿಸಬೇಕಾಗಿದೆ ಹಾಗೂ ವೈದ್ಯರ‌ ಸಲಹೆ ಮೇರೆಗೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ.
ಇಂದಿನಿಂದ ಸಂಸತ್ತಿನ‌ ಮುಂಗಾರು ಅಧಿವೇಶನದಲ್ಲಿ ಸಭಾಪತಿಯಾಗಿ ಕಲಾಪ ನಡೆಸಿದ ಬೆನ್ನಲ್ಲೇ ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.


ಸಂವಿಧಾನದ ಕಲಂ (67)ನ ಅನುಸಾರ ತಕ್ಷಣದಿಂದ ಜಾರಿಗೆ ಬರುವಂತೆ ಉಪರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ಉಪರಾಷ್ಟ್ರಪತಿ ಭವನದ ಕಚೇರಿ ಬಿಡುಗಡೆ ಮಾಡಿರುವ ಪ್ರಕಟಣೆ ತಿಳಿಸಿದೆ.


ತಮಗೆ ಬೆಂಬಲ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಮಂತ್ರಿ ನರೇಂದ್ರಮೋದಿ ಜಗದೀಪ್ ಧನ್ಕರ್ ಧನ್ಯವಾದ ಸಲ್ಲಿಸಿದ್ದಾರೆ.