
ಬೆಂಗಳೂರು, ಮೇ ೨೬- ನಂದಿನಿ ಲೇಔಟ್‌ನಲ್ಲಿ ಜೈ ಭೀಮ್ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ 4ನೇ ವರ್ಷದ ವಾರ್ಷಿಕೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಆಚರಿಸಲಾಯಿತು.

ವಾರ್ಷಿಕೋತ್ಸವದ ಅಂಗವಾಗಿ ನೂತನ ಬಸ್‌ಸ್ಟಾಂಡ್ ಹಾಗೂ ಸಂಘಟನೆಯ ನಾಮಫಲಕವನ್ನು ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷರಾದ ಸೀನಾ ರಾಮ್, ರಾಜರಾಜೇಶ್ವರಿ ನಗರ ಕ್ಷೇತ್ರದ ಯುವ ನಾಯಕಿ ಕುಸುಮಾ ಹಾಗೂ ಮಾಜಿ ಬಿಬಿಎಂಪಿ ಸದಸ್ಯರಾದ ವೇಲು ನಾಯಕ್ ಅವರು ಜಂಟಿಯಾಗಿ ಉದ್ಘಾಟಿಸಿದರು.

ನಾಮಫಲಕ ಉದ್ಘಾಟನೆ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸುತ್ತಿರುವ ಹಿರಿಯ ಕಾರ್ಮಿಕರು, ಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರು ಹಾಗೂ ಸರ್ಕಾರಿ ಶಾಲಾ ಶಿಕ್ಷಕರನ್ನು ಗುರುತಿಸಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಗೋಪಿ, ಉಪಾಧ್ಯಕ್ಷರಾದ ರಾಜು, ಗೌರವಾಧ್ಯಕ್ಷರಾದ ಬಲರಾಮ್, ಪ್ರಧಾನ ಕಾರ್ಯದರ್ಶಿ ರವಿಚಂದ್ರನ್ ಸೇರಿದಂತೆ ಸಂಘದ ಪ್ರಮುಖ ಪದಾಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.























