
ವಿಜಯಪುರ, ಸೆ. 22:ಬಡತನ ಪ್ರತಿಭೆಗೆ ಎಂದಿಗೂ ಅಡ್ಡಿಯಾಗಬಾರದು, ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆಗೆ ಪೆÇ್ರೀತ್ಸಾಹದ ಬೆಂಬಲ ದೊರೆಯಬೇಕು ಎಂಬ ಆಶಯದೊಂದಿಗೆ ಜೈ ಭೀಮ ಸೇನಾ ಸಂಘಟನೆಯ ವತಿಯಿಂದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಯಿತು.
ಸೆ. 20ರಂದು ನಡೆದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘಟನೆಯ ಮುಖಂಡ ಪರಶುರಾಮ ಲಂಬು ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರತಿವರ್ಷ ಸನ್ಮಾನಿಸುವ ಕಾರ್ಯ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದರ ಜತೆಗೆ, ಅವರ ಭವಿಷ್ಯದ ಸಾಧನೆಗೆ ಪ್ರೇರಣೆಯಾಗಲಿದೆ ಎಂದರು.
ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಶೇಷರಾವ ಮಾನೆ ಮಾತನಾಡಿ, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವುದು ಶ್ಲಾಘನೀಯ ಕಾರ್ಯವಾಗಿದೆ. ಇಂತಹ ಪುರಸ್ಕಾರಗಳು ವಿದ್ಯಾರ್ಥಿಗಳ ಸಾಧನೆಗೆ ಹೊಸ ಹುರುಪು ನೀಡುತ್ತವೆ ಎಂದು ಹೇಳಿದರು.
ಜೈ ಭೀಮ ಸೇನಾ ಸಂಘಟನೆಯ ರಾಜ್ಯ ಸಂಚಾಲಕ ಸಂತೋಷ ಭಾಸ್ಕರ್ ಮಾತನಾಡಿ, ಬಡ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅವರ ಸಾಧನೆಗೆ ವೇದಿಕೆ ಕಲ್ಪಿಸುವುದು ಸಂಘಟನೆಯ ಉದ್ದೇಶವಾಗಿದೆ. ಪ್ರತಿವರ್ಷ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಮೂಲಕ ಅವರಲ್ಲಿ ಇನ್ನಷ್ಟು ಉತ್ತಮ ಅಂಕಗಳನ್ನು ಗಳಿಸಿ ಉನ್ನತ ಸಾಧನೆ ಮಾಡುವ ಛಲ ಮೂಡಿಸಲಾಗುತ್ತಿದೆ. ವಿದ್ಯಾರ್ಥಿಗಳ ಪ್ರತಿಭೆಗೆ ಸೂಕ್ತ ಪೆÇ್ರೀತ್ಸಾಹ ದೊರೆತರೆ ಅವರು ಜೀವನದಲ್ಲಿ ದೊಡ್ಡ ಸಾಧನೆ ಮಾಡಲು ಸಾಧ್ಯ ಎಂದು ತಿಳಿಸಿದರು.
ಪ್ರತಿಭೆಗೆ ಗೌರವ, ಸಾಧನೆಗೆ ಪೆÇ್ರೀತ್ಸಾಹ: ಬಡತನದ ನಡುವೆಯೂ ಶೈಕ್ಷಣಿಕ ಸಾಧನೆ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ಮೂಲಕ ಜೈ ಭೀಮ ಸೇನೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹಾಗೂ ಸಾಧನೆಯ ಹಂಬಲ ಮೂಡಿಸುವ ಪ್ರಯತ್ನ ಮಾಡಿದೆ.
ಈ ಸಂದರ್ಭದಲ್ಲಿ ಶ್ರೀಕಾಂತ ಅರಕೇರಿ, ದಲಿತ ಮುಖಂಡ ಸುಭಾಷ ನಾಯ್ಕೋಡಿ, ಉಪಾಧ್ಯಕ್ಷ ಗೋವಿಂದ ಶಹಾಪುರ, ನಗರ ಘಟಕದ ಅಧ್ಯಕ್ಷ ವಿಜಯ ಆಲೂರ, ಯಲ್ಲಪ್ಪ ಹರಿಜನ, ಮೀನಾಕ್ಷಿ ಕಾಲೇಭಾಗ, ಅನಿತಾ ಇಟಗಿ, ಆರತಿ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.























