
ಚಿತ್ತಾಪುರ;ಜೂ.21: ಜೆಸಿಬಿ ಯಂತ್ರ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ ಯುವಕ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ಮೊಗಲಾ ಗ್ರಾಮದ ರಸ್ತೆಯಲ್ಲಿ ಜರುಗಿದೆ.
ರಾಮಲಿಂಗ ಅಂಬಣ್ಣಾ ಲಕ್ಕಾ (19) ಮೃತಪಟ್ಟಿದ್ದಾರೆ. ಮೊಗಲಾ ಗ್ರಾಮದ ಅಂಜಲಿ (14), ಮುಸ್ಕಾನ್ (14) ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಅಂಜಲಿ ಅವರನ್ನು ಚಿತ್ತಾಪುರದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಯ ನಂತರ ಹೆಚ್ಚುವರಿ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದ ಶಹಾಬಾದ್ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರು ಮಾಹಿತಿ ನೀಡಿದ್ದಾರೆ.
ಹೊಲದಲ್ಲಿ ಕೆಲಸ ಮುಗಿಸಿಕೊಂಡು ಜೆಸಿಬಿ ಯಂತ್ರ ಡಾಂಬರ್ ರಸ್ತೆಗೆ ಬರುತ್ತಿದ್ದ ಸಮಯದಲ್ಲೇ ಚಿತ್ತಾಪುರ ಕಡೆಯಿಂದ ಮೊಗಲಾ ಗ್ರಾಮಕ್ಕೆ ಬರುತ್ತಿದ್ದ ಬೈಕ್‍ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಈ ಕುರಿತು ಚಿತ್ತಾಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.