
ಸೇಡಂ , ಏ ,೩೦: ಕರ್ನಾಟಕ ಪ್ರದೇಶ ಯುವಜನತಾ ದಳ (ಜಾತ್ಯತೀತ ) ವಿಭಾಗದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು (ದಿನಾಂಕ.೩೦-೪-೨೦೨೬ ರಂದು) ಇಂದು ಸೇಡಂ ಪಟ್ಟಣಕ್ಕೆ ಆಗಮಿಸಲಾಗುತ್ತಿದ್ದು, ತಾಲೂಕಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿ ಜನತದಳ ಹಾಗೂ ಬೆಳ್ಳಿ ಹಬ್ಬ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷರಾದ ಬಾಲರಾಜ್ ಅಶೋಕ್ ಗುತ್ತೇದಾರ್ ಅವರು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು ಸಂಜೆ ೪-೩೦ ಪಟ್ಟಣದ ಜೆಡಿಎಸ್ ಪಕ್ಷದ ಕಛೇರಿಯಲ್ಲಿ ಸುದ್ದಿಗೊಷ್ಠಿಯಲ್ಲಿ ಪಾಲ್ಗೊಂಡು, ಸಂಜೆ ೫ ಗಂಟೆಗೆ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡ ಜನರೊಂದಿಗೆ ಜನತದಳ ಹಾಗೂ ಬೆಳ್ಳಿ ಹಬ್ಬ ಸಮಾವೇಶ ಉದ್ಘಾಟಿಸಿ ಮಾತನಾಡಲಿದ್ದಾರೆ. ಈ ಸಮಾವೇಶದಲ್ಲಿ ಮಾಜಿ ಸಚಿವರು, ಶಾಸಕರು, ಸೇರಿದಂತೆ ಪಕ್ಷದ ಹಿರಿಯ ನಾಯಕರು, ಸುಮಾರು ಕಾರ್ಯಕರ್ತರು ಆಗಮಿಸಿದ್ದಾರೆ ಎಂದು ತಿಳಿಸಿದ್ದಾರೆ.





















