
ಕಲಬುರಗಿ,ಅ.23-ನಗರದ ಹಳೇ ಜೇವರ್ಗಿ ರಸ್ತೆಯ ಜೀವನ ಪ್ರಕಾಶ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಮಕ್ಕಳು ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ವಿಜೇತರಾಗಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಶಾಲೆಯ ಬಾಲಕ-ಬಾಲಕಿಯರು ವಿಜೇತರಾಗಿ ವಿಭಾಗಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಸಂಸ್ಥೆಯ ಅಧ್ಯಕ್ಷರಾದ ಪ್ರಶಾಂತ ಪ್ರಕಾಶ್, ದೈಹಿಕ ಶಿಕ್ಷಕ ಪುನಿತ್ ಶಿರೂರು ಮತ್ತು ಶಾಲೆಯ ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.






























