Home ಜಿಲ್ಲೆ ಕಲಬುರಗಿ ಬೀದರ್‍ನ ಲಿಂಗರಾಜ ಅಪ್ಪಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೇ 30ರಂದು ಉದ್ಯೋಗ ಮೇಳ

ಬೀದರ್‍ನ ಲಿಂಗರಾಜ ಅಪ್ಪಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೇ 30ರಂದು ಉದ್ಯೋಗ ಮೇಳ

ಬೀದರ್: ಮೇ.28:ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಆಶ್ರಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಬೀದರ್‍ನ ಲಿಂಗರಾಜ ಅಪ್ಪಾ ಇಂಜಿನಿಯರಿಂಗ್ ಕಾಲೇಜು ಮೇ 30ರ ಶನಿವಾರದಂದು ಕಾಲೇಜಿನ ಮುಖ್ಯ ಆವರಣದಲ್ಲಿ ಒಂದು ದಿನವಿಡೀ ಉದ್ಯೋಗ ಮೇಳವನ್ನು ಆಯೋಜಿಸಲಿದ್ದು, ಉದ್ಯೋಗಾಕಾಂಕ್ಷಿಗಳು ಉನ್ನತ ನೇಮಕಾತಿದಾರರೊಂದಿಗೆ ಮುಖಾಮುಖಿಯಾಗಿ ಭೇಟಿಯಾಗುವುದು, ವಿಭಿನ್ನ ವೃತ್ತಿ ಅವಕಾಶಗಳನ್ನು ಅನ್ವೇಷಿಸುವುದು ಮತ್ತು ಸರಿಯಾದ ರೀತಿಯ ಉದ್ಯೋಗಾವಕಾಶಗಳನ್ನು ಆಯ್ಕೆ ಮಾಡಲು ವಿವಿಧ ಕಂಪನಿಗಳ ಮಾನವ ಸಂಪನ್ಮೂಲ ವೃತ್ತಿಪರರೊಂದಿಗೆ ಸಂವಹನ ನಡೆಸುವುದು ಈ ಉದ್ಯೋಗ ಮೇಳದ ಪ್ರಮುಖ ಲಕ್ಷಣವಾಗಿದೆ.
ಈ ಉದ್ಯೋಗ ಮೇಳವು ಕಲ್ಯಾಣ ಕರ್ನಾಟಕ ಪ್ರದೇಶದ, ವಿಶೇಷವಾಗಿ ಬೀದರ್ ಜಿಲ್ಲೆಯ ಅರ್ಹ ಆಕಾಂಕ್ಷಿಗಳಿಗೆ ಹೊಸ ಉದ್ಯೋಗಾವಕಾಶಗಳನ್ನು ತೆರೆಯುತ್ತದೆ ಎಂದು ಸಂಘದ ಕಾರ್ಯದರ್ಶಿ ಶ್ರೀ ಬಸವರಾಜ ದೇಶಮುಖ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬಿ.ಇ. ಹಾಗೂ ಎಮ್. ಟೆಕ್. ಕೋರ್ಸ್‍ಗಳನ್ನು ಪೂರ್ಣಗೊಳಿಸಿದ ಮತ್ತು ಅನುಸರಿಸುತ್ತಿರುವ ಅಭ್ಯರ್ಥಿಗಳು, ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ (ಒಅಂ), ಮಾಸ್ಟರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (ಒಃಂ), ಬ್ಯಾಚುಲರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ (ಃಅಂ), ಬಿ.ಕಾಂ, ಬಿಎಸ್ಸಿ, ಬ್ಯಾಚುಲರ್ ಆಫ್ ಬಿಸಿನೆಸ್ ಮ್ಯಾನೇಜ್‍ಮೆಂಟ್ (ಃಃಒ), ಬ್ಯಾಚುಲರ್ ಆಫ್ ಬಿಸಿನೆಸ್ ಅಡ್ಮಿನಿಸ್ಟ್ರೇಷನ್ (ಃಃಂ), ಮತ್ತು ಐಟಿಐ ಹಾಗೂ ವಿವಿಧ ಡಿಪೆÇ್ಲಮಾ ಕೋರ್ಸ್‍ಗಳನ್ನು ಪೂರ್ಣಗೊಳಿಸಿದ ಮತ್ತು ಅನುಸರಿಸುತ್ತಿರುವ ವಿದ್ಯಾರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.
ಸುಮಾರು 40ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ತಮ್ಮ ಭಾಗವಹಿಸುವಿಕೆಯನ್ನು ದೃಢೀಕರಿಸಿವೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನಿತಾ ಪಾಟೀಲ್ ತಿಳಿಸಿರುವರು. ಅವುಗಳಲ್ಲಿ ಪ್ರಮುಖವಾದವುಗಳಾದ ಇನ್ಫೋಸಿಸ್, ಟೆಕ್ ಮಹೀಂದ್ರಾ, ಸದಲ್ಯಾರ್ಂಡ್, ಕ್ಯಾಡ್‍ಮ್ಯಾಕ್ಸ್ ಸಲ್ಯೂಷನ್ಸ್, ಟಫೆ, ಹುಂಡೈ, 24ಘಿ7 ಎಐ, ಮತ್ತು ಇತರ ಸಾಫ್ಟ್‍ವೇರ್ ಮತ್ತು ಹಾರ್ಡ್‍ವೇರ್ ಪ್ರಮುಖ ಕಂಪನಿಗಳು ಸೇರಿವೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಆನ್‍ಲೈನ್‍ನಲ್ಲಿ ನೋಂದಾಯಿಸಿಕೊಳ್ಳಬಹುದು ಅಥವಾ 30ರಂದು ಕಾಲೇಜಿನ ಆವರಣದ ಸ್ಥಳದಲ್ಲಿಯೇ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಡಾ. ವಿನಿತಾ ಪಾಟೀಲ್ ಅವರ ಮೊಬೈಲ್ ಸಂಖ್ಯೆ 8792506036 ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ ಹಾಗೂ ಶರಣಬಸವೇಶ್ವರ ಸಂಸ್ಥಾನದ 9ನೇ ಮಹಾದಾಸೋಹ ಪೀಠಾಧಿಪತಿಗಳಾದ ಪೂಜ್ಯ ದೊಡ್ಡಪ್ಪ ಅಪ್ಪಾಜಿ ಅವರು ಲಿಂಗರಾಜ ಅಪ್ಪಾ ಇಂಜಿನಿಯರಿಂಗ್ ಕಾಲೇಜಿನ ತಂಡಕ್ಕೆ ಈ ಉದ್ಯೋಗ ಮೇಳ ಆಯೋಜಿಸಿರುವುದಕ್ಕೆ ಆಶೀರ್ವದಿಸಿ ಅಭಿನಂದನೆ ಸಲ್ಲಿಸಿದ್ದಾರೆ.