ವಿಜಯಪುರ: ಜೂ.13:ಬಾಲ ಕಾರ್ಮಿಕ ಪದ್ಧತಿಯು ಸಾಮಾಜಿಕ ಪಿಡುಗಾಗಿದ್ದು, ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ಮಾಡದೇ ಶಿಕ್ಷಣದ ಮುಖ್ಯ ವಾಹಿನಿಗೆ ಕರೆತಂದು ಈ ಪದ್ಧತಿಯ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
ಗುರುವಾರದಂದು ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನವನ್ನು ಉದ್ಧೇಶಿಸಿ ಮಾತನಾಡಿದರು.
ಬಾಲ ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳು ಈ ಕೆಟ್ಟ ವ್ಯವಸ್ಥೆಯಿಂದ ಹೊರಬಂದು ತಮ್ಮ ಹಕ್ಕುಗಳ ಕುರಿತು ಜಾಗೃತಿ ಹೊಂದಿ ದೇಶದ ಉತ್ತಮ ನಾಗರಿಕರಾಗಬೇಕು ಎಂದು ಹೇಳಿದರು.
ಮುಖ್ಯ ಶಿಕ್ಷಕ ಎಸ್ ಎಸ್ ಅರಬ ಅಧ್ಯಕ್ಷತೆ ವಹಿಸಿ ಮಾತನಾಡಿ, ದೈಹಿಕ ಹಾಗೂ ಮಾನಸಿಕ ಸಾಮಥ್ರ್ಯಕ್ಕೆ ಕಷ್ಟವಾಗುವಂಥ ಕೆಲಸಗಳನ್ನು ಮಾಡುತ್ತಾ, ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಪೌಷ್ಟಿಕ ಆಹಾರ ಕೊರತೆಯಿಂದಾಗಿ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಕೆಲವೊಮ್ಮ ತಮ್ಮ ಜೀವವನ್ನೆ? ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಬಾಲ ಕಾರ್ಮಿಕ ಪದ್ಧತಿಯಿಂದ ಉಂಟಾಗುವ ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯತೆ ತುಂಬಾ ಇದೆ ಎಂದು ಹೇಳಿದರು.
ಶಿಕ್ಷಕರಾದ ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ,ಅತಿಥಿ ಶಿಕ್ಷಕಿ ಅಲ್ಫಿಯಾ ಅಂಗಡಿ, ಮಕ್ಕಳು ಭಾಗವಹಿಸಿದ್ದರು.