
ಅಥಣಿ :ಜು.31: ಸಮಾಜದಲ್ಲಿನ ನ್ಯೂನತೆಗಳನ್ನು ತಿದ್ದಲು ಸುದ್ದಿ ಮಾಧ್ಯಮಗಳು ಪ್ರಬಲ ಅಸ್ತ್ರವಾಗಿದ್ದು, ಪತ್ರಕರ್ತರು ಹೊಸ ಹೊಸ ತಂತ್ರಜ್ಞಾನಗಳನ್ನು ಕಲಿಯುವುದರ ಜೊತೆಗೆ ಸಮಾಜದ ಬಗ್ಗೆ ಕಳಕಳಿ ಹೊಂದಿರಬೇಕು. ತಮ್ಮ ಬದ್ಧತೆಯನ್ನು ಮೆರೆಯಬೇಕು ಯಾರನ್ನು ಒಲಿಸುವ ಕೆಲಸ ಮಾಡಬಾರದು, ಕಾನೂನು ಸೇರಿದಂತೆ ಎಲ್ಲ ರಂಗಗಳ ಮಾಹಿತಿಯನ್ನು ಹೊಂದಿರಬೇಕು ಎಂದು ಬೆಳಗಾವಿಯ ಹಿರಿಯ ಪತ್ರಕರ್ತ ರಿಷಿಕೇಶ್ ಬಹದ್ದೂರ್ ದೇಸಾಯಿ ಹೇಳಿದರು.
ಅವರು ಗುರುವಾರ ಇಲ್ಲಿನ ಕೆಎಲ್ ಇ ಸಂಸ್ಥೆಯ ಎಸ್ ಎಸ್ ಎಮ್ ಎಸ್ ಮಹಾವಿದ್ಯಾಲಯದ ಖೋತ್ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ತಾಲೂಕಾ ಘಟಕದಿಂದ ಆಯೋಜಿಸಲಾಗಿದ್ದ ” ತಾಲೂಕಾ ಮಟ್ಟದ ಪತ್ರಕರ್ತರ ದಿನಾಚರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರ ಸನ್ಮಾನ ಸಮಾರಂಭದಲ್ಲಿ ಉಪನ್ಯಾಸ ನೀಡಿದರು.
ಪ್ರಜಾಪ್ರಭುತ್ವ ಯಶಸ್ವಿಗೆ ಪತ್ರಿಕೋದ್ಯಮ ಭದ್ರ ಬುನಾದಿಯಾಗಿದ್ದು, ಇಂದಿನ ಆಧುನಿಕ ಯುಗದಲ್ಲಿ ಪತ್ರಕರ್ತರು ತಂತ್ರಜ್ಞಾನಗಳ ಜ್ಞಾನ ಪಡೆಯುವುದು ಅಗತ್ಯವಾಗಿದ್ದು. ಎಐ ತಂತ್ರಜ್ಞಾನ ಇಂದು ಅನೇಕ ವಲಯಗಳಲ್ಲಿ ಉದ್ಯೋಗಗಳನ್ನು ಕಸಿದುಕೊಳ್ಳುತ್ತಿದೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಪತ್ರಿಕೋದ್ಯಮ ಕೂಡ ಇದಕ್ಕೆ ಹೊರತಾಗಿಲ್ಲ ಕಳವಳ ವ್ಯಕ್ತಪಡಿಸಿದ ಅವರು
ಪತ್ರಕರ್ತರು ತಮ್ಮ ಬದ್ಧತೆಯನ್ನು ಮರೆಯಬಾರದು, ಪ್ರಾಮಾಣಿಕವಾಗಿ ಸಾಮಾಜಿಕ ಕಳಕಳಿ ಹೊಂದಿರಬೇಕು. ಸಾಮಾಜಿಕ ಮೌಲ್ಯಗಳನ್ನು ಕಾಪಾಡುವುದರ ಜೊತೆಗೆ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಶ್ರಮಿಸಬೇಕೆಂದು ಕರೆ ನೀಡಿದರು.
ಸಮಾರಂಭ ಉದ್ಘಾಟಿಸಿದ ಯುವ ಮುಖಂಡ ಚಿದಾನಂದ ಸವದಿ ಮಾತನಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಲ್ಕನೇ ಅಂಗ ಎನಿಸಿಕೊಂಡಿರುವ ಪತ್ರಿಕೋದ್ಯಮ ದೇಶದ ಪ್ರಗತಿಯಲ್ಲಿ ಪ್ರಮುಖ ಸ್ಥಾನ ಹೊಂದಿದೆ. ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾ ಹೆಚ್ಚು ಸದ್ದು ಮಾಡುತ್ತಿದ್ದು, ಇದರಿಂದ ಪತ್ರಿಕೆಗಳನ್ನು ಓದುವವರ ಸಂಖ್ಯೆ ಕ್ಷೀಣಿಸುತ್ತಿದೆ. ಇವುಗಳ ಮಧ್ಯ ಮುದ್ರಣ ಮಾಧ್ಯಮ ವಸ್ತುನಿಷ್ಠ ವರದಿಗಳನ್ನು ನೀಡುವ ಮೂಲಕ ಜನರ ವಿಶ್ವಾಸ ಗಳಿಸುತ್ತಿದೆ ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಾಜಿ ಶಾಸಕ ಶಹಜಾನ ಡೊಂಗರಗಾoವ ಮಾತನಾಡಿ
ಪತ್ರಿಕೋದ್ಯಮ ಸಮಾಜದ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಪತ್ರಕರ್ತರು ಸಮಾಜ ಮತ್ತು ಸರಕಾರ ಮಧ್ಯ ಸೀಟುವಿಯಂತೆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಪತ್ರಕರ್ತರಿಗೆ ಜೀವನದ ಭದ್ರತೆಯ ಯೋಜನೆಗಳನ್ನು ಒದಗಿಸಬೇಕು ಎಂದು ಹೇಳಿದರು.
ಮುಖಂಡ ಗಜಾನನ ಮಂಗಸೂಳಿ ಮಾತನಾಡಿ ಸಮಾಜದಲ್ಲಿನ ಅಂಕುಡೊಂಕುಗಳನ್ನು ತಿದ್ದುವಲ್ಲಿ ಪತ್ರಕರ್ತರ ಮತ್ತು ಪತ್ರಿಕೆಗಳ ಪಾತ್ರ ಮಹತ್ತರವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಪತ್ರಕರ್ತರಿಗಾಗಿ ಉಚಿತ ಜೀವವಿಮೆ, ಸಾರಿಗೆ ಸೌಲಭ್ಯ, ಪಿಂಚಣಿ ಯಂತಹ ಯೋಜನೆಗಳನ್ನು ಜಾರಿಗೆ ತರಬೇಕೆಂದು ಸರ್ಕಾರಗಳನ್ನು ಒತ್ತಾಯಿಸಿದರು.
ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಗಚ್ಚಿನ ಮಠದ ಶಿವಬಸವ ಸ್ವಾಮೀಜಿ, ಡಾ. ಬಸವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು.
ಈ ವೇಳೆ ತಹಸಿಲ್ದಾರ್ ಸಿದರಾಯ ಬೋಸಗಿ, ಪ್ರಗತಿಪರ ರೈತ ಮೈನೋದ್ದಿನ್ ಡೊಂಗರಗಾಂವ, ಕನ್ನಡ ಪರ ಹೋರಾಟಗಾರ ಶಬ್ಬೀರ್ ಸಾತಬಚ್ಚಿ, ಪಿಎಸ್‍ಐ ವಿಜಯಕುಮಾರ ಚುಬಚಿ, ಸಿಎಂ ಪದಕ ಪಡೆದ ಪೆÇಲೀಸ್ ಪೇದೆ ಜಮೀರ್ ಡಾಂಗೆ ಅವರನ್ನು ಸನ್ಮಾನಿಸಲಾಯಿತು.
ಇದೇ ಸಂದರ್ಭದಲ್ಲಿ ಪತ್ರಕರ್ತರ ಮಕ್ಕಳಿಗೆ ಹಾಗೂ ತಾಲೂಕಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಪೆÇ್ರೀತ್ಸಾಹಿಸಲಾಯಿತು.ಕಾರ್ಯ ನಿರತ ಪತ್ರಕರ್ತರ ಸಂಘದ ಎಲ್ಲಾ ಸದಸ್ಯರಿಗೆ ಭಾರತೀಯ ವೈದ್ಯಕೀಯ ಸಂಘದಿಂದ ಹೆಲ್ಮೆಟ್ ಗಳನ್ನು ವಿತರಿಸಲಾಯಿತು.
ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಕೇಶ್ ಮೈಗೂರ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾರಂಭದಲ್ಲಿ ಮುಖಂಡ ಡಿವೈಎಸ್ಪಿ ಪ್ರಶಾಂತ್ ಮುನ್ನೋಳ್ಳಿ. ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಆರ್ ಮುಂಜೆ.
ಸಿಪಿಐ ಸಂತೋಷ ಹಳ್ಳೂರ. ಪಿಎಸ್‍ಐ ಗಿರಿಮಲ್ಲಪ್ಪ ಉಪ್ಪಾರ. ಮುಖಂಡರಾದ ಗಿರೀಶ್ ಬುಟಾಳಿ, ಹಿರಿಯ ವೈದ್ಯ ಡಾ. ಮಲ್ಲಿಕಾರ್ಜುನ ಹಂಜಿ, ಕಾ ನಿ ಪ ಜಿಲ್ಲಾ ನಿರ್ದೇಶಕ ಬಸವರಾಜ ಚಮಕೇರಿ, ಭಾರತೀಯ ವೈದ್ಯಕೀಯ ಸಂಘದ ( ಐಎಂಎ ) ಅಧ್ಯಕ್ಷೆ ಡಾ. ಸ್ಮಿತಾ ಚೌಗುಲಾ, ಡಾ. ಮಹೇಶ್ ಕಾಪ್ಸೆ, ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ರೇಷ್ಮಾ ಇನಾಮದಾರ ನೌಕರರ ಸಂಘದ ಅಧ್ಯಕ್ಷ ರಾಮಗೊಂಡ ಪಾಟೀಲ. ಪರುಶುರಾಮ ಚುಬಚಿ. ಮಹಾಂತೇಶ ಬಾಡಗಿ. ಸುಂದರ ಸೌದಾಗರ. ಶಾನೂರ ಚಿಂಚಲಿ. ಮಹಾದೇವ ಮಡಿವಾಳ. ಮಂಜು ಹೋಳಿಕಟ್ಟಿ. ಸೇರಿದಂತೆ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಉಪಸ್ಥಿತರಿದ್ದರು. ಡಾ.ಆರ್. ಎಸ್ ದೊಡ್ಡನಿoಗಪ್ಪಗೋಳ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂತೋಷ ಬಡಕಂಬಿ ಕಾರ್ಯಕ್ರಮ ನಿರೂಪಿಸಿದರು.ಅಣ್ಣಾಸಾಬ ತೆಲಸoಗ ವಂದಿಸಿದರು.






























