ಕೋಲಾರ, ಜು,೩- ಪತ್ರಿಕೋದ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿದೆ, ಸಮಾಜದ ಸುಧಾರಣೆಯಲ್ಲಿ ಪತ್ರಕರ್ತರ ಜವಾಬ್ದಾರಿ ಹೆಚ್ಚಿದೆ. ಸಾಮಾಜಿಕ ಜಾಲತಾಣದಲ್ಲಿ ಹರಡುವ ಸುಳ್ಳು ಸುದ್ದಿಗಳನ್ನು ತಡೆಯಲು ಪತ್ರಕರ್ತರು ಮುಂದಾಗಬೇಕು, ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ ಮತ್ತು ಕಾರ್ಯಾಂಗ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ. ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪ್ರವೀಣ್ ಪಿ.ಬಾಗೇವಾಡಿ ತಿಳಿಸಿದರು.
ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು ಹಾಗೂ ಕೋಲಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಇಂದು ಕೋಲಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಹಮ್ಮಿಕೊಂಡಿದ್ದ” ವಾರ್ತಾಲಾಪ” ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಕರ್ತರು ಸಾರ್ವಜನಿಕರು ಮತ್ತು ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ನಿರ್ವಹಿಸಲಿದೆ. ಸಮಾಜದಲ್ಲಿ ಲೋಪ ದೋಷಗಳನ್ನು ಸರ್ಕಾರದ ಗಮನ ಸೆಳೆದು ಪರಿಹಾರ ಕಲ್ಪಿಸುವ ಕಾರ್ಯದೊಂದಿಗೆ ಸರ್ಕಾರದ ಪುರಸ್ಕೃತ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಪತ್ರಕರ್ತರ ಪಾತ್ರ ಮುಖ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಮುದ್ರಣ ಮತ್ತು ಡಿಜಿಟಲ್ ಮಾಧ್ಯಮಗಳ ಜೊತೆಗೆ ಸಾಮಾಜಿಕ ಮಾಧ್ಯಮದ ಬಳಕೆ ಹೆಚ್ಚಾಗಿದೆ. ಇದರಿಂದ ಅನುಕೂಲಗಳಿದ್ದರೂ, ಸುಳ್ಳು ಸುದ್ದಿಗಳು ಅತಿ ವೇಗವಾಗಿ ಹರಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಯಾವುದೇ ಸಣ್ಣ ನಕಾರಾತ್ಮಕ ಘಟನೆಯನ್ನು ದೊಡ್ಡದಾಗಿ ಬಿಂಬಿಸುವ ವೈಭವೀಕರಣ ಪ್ರವೃತ್ತಿ ಕಂಡುಬರುತ್ತಿದೆ ಎಂದು ವಿಷಧ ವ್ಯಕ್ತ ಪಡಿಸಿದರು.
ಜಿಲ್ಲಾಡಳಿತವು ಸ್ವಚ್ಛ ಮತ್ತು ಪಾರದರ್ಶಕ ಆಡಳಿತ ನೀಡಲು ಬದ್ಧವಾಗಿದೆ. ಆಡಳಿತದಲ್ಲಿ ಉತ್ತರ ದಾಯಿತ್ವ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಲು ಮಾಧ್ಯಮಗಳ ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು.
ಪಿಐಬಿಯ ಸಹಾಯಕ ನಿರ್ದೇಶಕ ಮಧು.ಎಂ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರದ? ಯೋಜನೆಗಳ ಲಾಭವು ಕಟ್ಟಕಡೆಯ ವ್ಯಕ್ತಿಗೂ ತಲುಪಿದಾಗ ಮಾತ್ರ ಸರ್ಕಾರದ ಯೋಜನೆಗಳು ಯಶಸ್ವಿಯಾಗಲು ಸಾಧ್ಯ ಎಂಬ ಆಶಯದೊಂದಿಗೆ ಈ ಕಾರ್ಯಾಗಾರವನ್ನು ಆಯೋಜಿಸ ಲಾಗಿದೆ. ಸರ್ಕಾರದ ವಿವಿಧ ಯೋಜನೆಗಳ ಕುರಿತು ಇಲಾಖೆಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು, ಅದನ್ನು ಪತ್ರಿಕೆಗಳು ಹಾಗೂ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಮತ್ತು ತಳ ಮಟ್ಟದ ಫಲಾನುಭವಿಗಳಿಗೆ ತಲುಪಿಸುವುದು ವಾರ್ತಾಲಾಪ ಕಾರ್ಯಾಗಾರದ ಮುಖ್ಯ ಉದ್ದೇಶವಾಗಿದೆ ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ?ಎಸ್.ಕೆ. ಚಂದ್ರಶೇಖರ್ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತವೆ. ಆದರೆ, ಈ ಯೋಜನೆಗಳು ಕೇವಲ ಅಧಿಕಾರಿಗಳ ಮಟ್ಟದಲ್ಲೇ ಉಳಿದರೆ ಸಾರ್ವಜನಿಕರಿಗೆ ಯಾವುದೇ ಪ್ರಯೋಜನವಾಗುವುದಿಲ್ಲ. ಮಾಧ್ಯಮಗಳ ಮೂಲಕ ಈ ಯೋಜನೆಗಳನ್ನು ನೇರ ಪ್ರಸಾರ ಮಾಡಿದಾಗ ಮಾತ್ರ ಅವು ಹಳ್ಳಿಗಾಡಿನ ಕಟ್ಟಕಡೆಯ ವ್ಯಕ್ತಿಗೂ ತಲುಪಲು ಸಾಧ್ಯವಾಗುತ್ತದೆ ಎಂದರು.
ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕ ಡಾ. ರಮೇಶ್ ಜಾನುವಾರುಗಳ ಕಾಲು ಬಾಯಿಜ್ವರಕ್ಕೆ ವ್ಯಾಕ್ಸಿನ್ ಕುರಿ ಮೇಕೆಗಳಿಗೆ ಪಿ.ಪಿ.ಆರ್ ಹಾಗೂ ಹಂದಿಗಳಿಗೆ ಸಿ.ಎಸ್.ಸಿ. ಲಸಿಕೆ ನೀಡಲಾಗುವ ವರ್ಷದಲ್ಲಿ ೧೧ ಬಾರಿ ಈ ಕಾರ್ಯಕ್ರಮ ಆಯೋಜಿಸುವುದು , ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಸೌಲಭ್ಯಗಳು, ಜಾನುವಾರುಗಳ ತುರ್ತು ಚಿಕಿತ್ಸೆಗೆ ೭ ಅಂಬ್ಯುಲೆನ್ಸ್ ವಾಹನ ಮೂಲಕ ರೈತನ ಮನೆ ಬಾಗಿಲಿಗೆ ನೆರವು ನೀಡಲಾಗುತ್ತಿದ್ದು ಪ್ರತಿ ದಿನ ಕನಿಷ್ಟ ೬-೭ ತುರ್ತು ಪ್ರಕರಣಗಳು ದಾಖಲಾಗುತ್ತಿದೆ ಎಂದರು.
































