
ಬೆಂಗಳೂರು,ನ.೧೯-ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ನಗರದ ೫೭ನೇ ಸಿಸಿಹೆಚ್ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ವಿಚಾರಣೆಗೆ ಹಾಜರಿ ಹಾಕಿದ್ದಾರೆ.
ಈ ವೇಳೆ ನೀಲಿ ಬಣ್ಣದ ಟಿ ಶರ್ಟ್, ಕಪ್ಪು ಟ್ರ್ಯಾಕ್ ಪ್ಯಾಂಟ್ ಧರಿಸಿದ್ದರು. ಮೊದಲು ಆರೋಪಿಗಳ ಹಾಜರಾತಿ ಪಡೆಯಲಾಯಿತು. ಸಿಆರ್‌ಪಿಸಿ ೨೯೪ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಆರೋಪಿಗಳ ಪರ ವಕೀಲರಿಂದ ಕಾಲಾವಕಾಶ ಕೋರಿಕೆ ಸಲ್ಲಿಕೆ ಆಗಿದೆ.
ಆರೋಪಿ ನಾಗರಾಜ್ ಕೋರ್ಟ್ ಗೆ ಮನವಿ ಮಾಡ ‘ಮನೆಯಿಂದ ತಂದುಕೊಟ್ಟ ಕಂಬಳಿ ನೀಡುತ್ತಿಲ್ಲ. ಜಾಸ್ತಿ ಚಳಿ ಇದ್ದರೂ ಹೆಚ್ಚುವರಿ ಕಂಬಳಿ ನೀಡುತ್ತಿಲ್ಲ’ ಎಂದು ಹೇಳಿದ್ದಾರೆ. ಅತ್ತ ‘ವಿ ಕಾಂಟ್ ಈವನ್ ಸ್ಲೀಪ್’ ಎಂದು ದರ್ಶನ್ ಇಂಗ್ಲಿಷ್‌ನಲ್ಲಿ ಮಾತು ಆರಂಭಿಸಿದರು.
ತುಂಬಾನೇ ಚಳಿ ಇದೆ. ನಾವ್ಯಾರೂ ರಾತ್ರಿ ಮಲಗುತ್ತಿಲ್ಲ. ಹೆಚ್ಚುವರಿ ಕಂಬಳಿ ಕೊಡಿಸಿ’ ಎಂದು ಕೋರ್ಟ್‌ಗೆ ದರ್ಶನ್ ಮನವಿ ಮಾಡಿದರು. ಈ ಮನವಿ ಬಳಿಕ ಜಡ್ಜ್, ‘ಪದೇ ಪದೇ ಆದೇಶ ಮಾಡಿದರೂ ಹೀಗ್ಯಾಕೆ ಮಾಡುತ್ತಾರೆ ಚಳಿ ಇದ್ದಾಗ ಕಂಬಳಿ ಕೊಡಬೇಕಲ್ಲವೇ’ ಎಂದು ಪ್ರಶ್ನೆ ಮಾಡಿದರು. ದರ್ಶನ್‌ಗೆ ಕಂಬಳಿಕೊಡಲು ಜೈಲು ಅಧಿಕಾರಿಗಳಿಗೆ ಜಡ್ಜ್ ಸೂಚನೆ ನೀಡಿದರು
ವಿಚಾರಣೆ ಮುಂದಕ್ಕೆ:
ಪ್ರಕರಣದ ವಿಚಾರಣೆಯನ್ನು ಕೋರ್ಟ್ ವಿಚಾರಣೆ ಡಿ.೩ಕ್ಕೆ ಮುಂದೂಡಿದೆ. ಅಲ್ಲದೆ, ಆರೋಪಿ ೧೪ ಪ್ರದೋಷ್ ಮಧ್ಯಂತರ ಜಾಮೀನನ್ನು ನ.೨೨ರವರೆಗೆ ವಿಸ್ತರಣೆ ಮಾಡಲಾಗಿದೆ. ದರ್ಶನ್ ತಮ್ಮ ಮೇಲೆ ಬಂದ ಆರೋಪ ಎಲ್ಲವನ್ನೂ ತಿರಸ್ಕರಿಸಿದ್ದಾರೆ. ಇದರಿಂದ ಅವರು ವಿಚಾರಣೆ ಎದುರಿಸಬೇಕಿದೆ.


































