ಬಾಗಲಕೋಟೆ:ಮೇ 28: ಜಿಲ್ಲೆಯ ವ್ಯಾಪ್ತಿಯಲ್ಲಿ ಬಾಗಲಕೋಟೆತಾಲೂಕು ಹೊರತುಪಡಿಸಿ ಉಳಿದ ಎಲ್ಲತಾಲೂಕಿನಲ್ಲಿ ಖಾಲಿ ಇರುವಅಂಗನವಾಡಿಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ತಾತ್ಕಾಲಿಕಆಯ್ಕೆ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿಜೂನ್ 4 ರೊಳಗಾಗಿ ಸಲ್ಲಿಸಬಹುದಾಗಿದೆಎಂದುಜಿಲ್ಲಾಧಿಕಾರಿಜಾನಕಿ ಕೆ.ಎಂ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದುಜರುಗಿದಜಿಲ್ಲಾ ಮಟ್ಟದಆಯ್ಕೆ ಸಮಿತಿ ಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದಅವರುಜಿಲ್ಲೆಯ ಬಾಗಲಕೋಟೆತಾಲೂಕು ಹೊತರುಪಡಿಸಿ, ಬೀಳಗಿ, ಬಾದಾಮಿ, ಮುಧೋಳ, ಜಮಖಂಡಿ ಹಾಗೂ ಹುನಗುಂದತಾಲೂಕಿನಲ್ಲಿ ಖಾಲಿ ಇರುವ 101 ಅಂಗನವಾಡಿಕಾರ್ಯಕರ್ತೆ ಹಾಗೂ 454 ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆ ಪಟ್ಟಿಯನ್ನು ಉಪ ನಿರ್ದೇಶಕರಕಚೇರಿ, ಆಯಾತಾಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕ ಹಾಗೂ ಸಂಬಂಧಿಸಿದ ಅಂಗನವಾಡಿ ಕೇಂದ್ರಗಳಲ್ಲಿ ಪ್ರಕಟಿಸಲಾಗಿದೆಎಂದರು.
ಈ ತತ್ಕಾಲಿಕ ಅಭ್ಯರ್ಥಿಗಳ ಆಯ್ಕೆ ಪಟ್ಟಿಯ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳು ಇದ್ದಲ್ಲಿ ಮೇ 27 ರಿಂದಜೂನ್ 4ರ ಒಳಗಾಗಿ ಕಚೇರಿಅವಧಿಯಲ್ಲಿ ಲಿಖಿತವಾಗಿ ಸಮರ್ಥನೀಯ ದಾಖಲೆಗಳೊಂದಿಗೆ ಆಕ್ಷೇಪಣೆಗಳನ್ನು ಸಂಬಂಧಿಸಿದ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಅಥವಾ ಉಪ ನಿರ್ದೇಶಕರಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಬಾಗಲಕೋಟೆಇವರಿಗೆ ಸಲ್ಲಿಸಬಹುದಾಗಿದೆಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸಭೆಯಲ್ಲಿಜಿ.ಪಂ ಮುಖ್ಯಕಾರ್ಯನಿರ್ವಾಹಕಅಧಿಕಾರಿ ಶಶಿಧರ ಕುರೇರ, ಮಹಿಳಾ ಮತ್ತು ಮಕ್ಕಳ ಅಬಿವೃದ್ದಿ ಇಲಾಖೆಯಉಪನಿರ್ದೇಶಕ ಪ್ರಭಾಕರ ಕೆ, ಸಮಾಜಕಲ್ಯಾಣಇಲಾಖೆಯಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.